Karnataka; 3 ಡಿಸಿಎಂ ವಿಚಾರ ಹೈಕಮಾಂಡ್ ಮುಂದಿಲ್ಲ: ಮಲ್ಲಿಕಾರ್ಜುನ ಖರ್ಗೆ
Team Udayavani, Jan 9, 2024, 7:24 PM IST
ಕಲಬುರಗಿ: ಕರ್ನಾಟಕದಲ್ಲಿ ಮೂವರನ್ನು ಡಿಸಿಎಂ ಮಾಡುವ ವಿಚಾರ ಹೈಕಮಾಂಡ್ ಮುಂದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಡಾ|ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸುಸೂತ್ರವಾಗಿ ನಡೆದಿದೆ. ಆದರೆ, ಮೂವರು ಡಿಸಿಎಂಗಳು ಬೇಕು ಎನ್ನುವ ವಿಚಾರ ನಮ್ಮ ಅಂಗಳಕ್ಕೆ ಬಂದಿಲ್ಲ. ಅದೇನಿದ್ದರೂ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಅವರನ್ನು ಕೇಳಬೇಕು. ರಾಜ್ಯದಲ್ಲಿ ಸರ್ಕಾರ ನಡೆಸುವ, ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಗಮನ ಕೊಡಬೇಕು. ಅದನ್ನು ಬಿಟ್ಟು ಚುನಾವಣೆ ಹೊಸ್ತಿಲಲ್ಲಿ ಇಲ್ಲದ ಉಹಾಪೋಹ ಹುಟ್ಟಿಸಿ ಜನರನ್ನು ಹಾಗೂ ಖುದ್ದು ದಾರಿ ತಪ್ಪುವಂತಹ ಕೆಲಸ ಮಾಡಬಾರದು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜನರಿಗೆ ಮಾತು ಕೊಟ್ಟಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕಿದೆ.
ಅಲ್ಲದೇ, ಇತರೆ ಯೋಜನೆಗಳ ಲಾಭವನ್ನು ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಹಾಗೂ ನಮ್ಮ ಗುರಿ ಮುಟ್ಟುವವರೆಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಹಾಗೂ ಜಿ.ಪರಮೇಶ್ವರ್ ಇಂತಹ ವಿಚಾರಗಳಿಗೆ ಆದ್ಯತೆ ನೀಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.