25 ವರ್ಷ ನಂತರ ಕಲಬುರಗಿಯಲ್ಲಿ 36ನೇ ಪತ್ರಕರ್ತರ ರಾಜ್ಯ ಸಮ್ಮೇಳನ
Team Udayavani, Sep 19, 2021, 12:35 PM IST
ಕಲಬುರಗಿ: 25 ವರ್ಷಗಳ ನಂತರ ಕಲ್ಯಾಣ ಕರ್ನಾಟಕದ ವಿಭಾಗೀಯ ಕೇಂದ್ರ ಕಲಬುರಗಿಯಲ್ಲಿ ಕರ್ನಾಟಕ ರಾಜ್ಯ 36 ನೇ ಪತ್ರಕರ್ತರ ಸಮ್ಮೇಳನ ನಡೆಸಲು ಸಿದ್ದತೆಗಳನ್ನು ಆರಂಭಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.
ಪತ್ರಿಕಾ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನ ಉದ್ಘಾಟನೆ ನೆರವೇರಿಸುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಲಾಗಿದೆ. ವಾರದೊಳಗೆ ದಿನಾಂಕ ನಿಗದಿ ಮಾಡಲಿದ್ದಾರೆ. ಅಕ್ಟೋಬರ್ ಕೊನೆ ವಾರ ಇಲ್ಲವೇ ನವೆಂಬರ್ ಎರಡನೇ ವಾರದಲ್ಲಿ ಸಮ್ಮೇಳನ ನಡೆಯವ ಸಾಧ್ಯತೆಗಳಿವೆ ಎಂದರು.
ಈ ಹಿಂದೆ 1996ರಲ್ಲಿ ಕಲಬುರಗಿಯಲ್ಲಿ 20 ನೆಯ ರಾಜ್ಯ ಸಮ್ಮೇಳನ ನಡೆದಿತ್ತು. ಆಗಿನ ಕಾಲಕ್ಕೂ ಈಗಿನ ಕಾಲಕ್ಕೂ ಸಾಕಷ್ಟು ಬದಲಾವಣೆಗಳಾಗಿವೆ. ಆಗ ವಿದ್ಯುನ್ಮಾನ ಕಡಿಮೆ ಇದ್ದವು. ಈಗ ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಈಗ ಬಹು ಸಮ್ಮೇಳನ ಎಲ್ಲರನ್ನು ವಿಶ್ವಾಸ ತೆಗೆದುಕೊಂಡು ನಡೆಸಲಾಗುವುದು. ವೃತ್ತಿ ಆಧಾರಿತ ಮೇಲೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಸಮ್ಮೇಳನ ಸಂಘಟಿಸಲಾಗುತ್ತಿದೆ. ಮೊದಲನೇಯದಾಗಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ, ಹಾಗೂ ಶರಣಬಸವೇಶ್ವರರ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಹಾಗೂ ಶರಣಬಸವೇಶ್ವರರ ಮಹಾದಾಸೋಹಿ ಸಂಸ್ಥಾನದ ಅಧ್ಯಕ್ಷರಾದ ಶರಣಬಸವಪ್ಪ ಅವರ ಸಾನ್ನಿದ್ಯದಲ್ಲಿ ಸ್ವಾಗತ ಸಮಿತಿ ರಚಿಸಲಾಗುವುದು ಎಂದು ತಗಡೂರು ವಿವರಿಸಿದರು.
ಕೋವಿಡ್ ಸೋಂಕು ಆತಂಕದ ಹಿನ್ನೆಲೆಯಲ್ಲಿ ಸಮ್ಮೇಳನ ಎರಡು ದಿನದ ಬದಲು ಒಂದು ದಿನ ಮಾತ್ರ ಆಯೋಜಿಸಲು ಉದ್ದೇಶಿಸಲಾಗಿದೆ. ಬೆಳಿಗ್ಗೆ ಉದ್ಘಾಟನೆ, ತದನಂತರ ಗೋಷ್ಠಿ, ಸಂಜೆ ಸಮಾರೋಪ ನಡೆಸಲು ಉದ್ದೇಶಿಸಲಾಗಿದೆ. ಮರು ದಿನ ಪ್ರವಾಸ ಆಯೋಜಿಸಲಾಗುವುದು. ಸಮ್ಮೇಳನ ಅಂಗವಾಗಿ ಅರ್ಥಪೂರ್ಣ ಲೇಖನಗಳನ್ನು ಒಳಗೊಂಡ ಸ್ಮರಣ ಸಂಚಿಕೆ ಹೊರಲಾಗುವುದು. ಒಟ್ಟಾರೆ ಸಮ್ಮೇಳನ ಯಶಸ್ವಿಗೆ ವಿವಿಧ ಸಮಿತಿಗಳನ್ನು ರಚಿಸಲಾಗುವುದು ಎಂದು ತಿಳಿಸಿದರು.
ಕೆಯುಡಬ್ಲ್ಯೂಜೆ ಪ್ರಶಸ್ತಿ: ಸಮ್ಮೇಳನ ಸಮಾರೋಪದಲ್ಲಿ ಸಂಘದಿಂದ 19 ವಾರ್ಷಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ. 2 ವರ್ಷಗಳಿಂದ ಸಂಘದಿಂದ ವಾರ್ಷಿಕ ಪ್ರಶಸ್ತಿ ನೀಡಿಲ್ಲ. ಈಗ ಕಲಬುರಗಿ ಸಮ್ಮೇಳನದಲ್ಲಿ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಹೀಗಾಗಿ ಪತ್ರಕರ್ತರು ತಮ್ಮ ಸಾಮಾಜಿಕ ಪರಿಣಾಮದ ಜತೆಗೆ ಇತರ ವೈವಿದ್ಯಮಯದ ವಿಶೇಷ ವರದಿಗಳ ಪ್ರತಿಯನ್ನು ಹಾಗೂ ತಮ್ಮ ಸೇವೆಯ ವಿಶಿಷ್ಟತೆಯನ್ನು ಒಳಗೊಂಡಂತೆ ಕುರಿತ ಅರ್ಜಿಯನ್ನು ಪತ್ರಕರ್ತರು ಇದೇ ಸೆ.30 ರೊಳಗೆ ಅರ್ಜಿ ಸಲ್ಲಿಸಬೇಕೆಂದು ಶಿವಾನಂದ ತಗಡೂರು ಇದೇ ಸಂದರ್ಭದಲ್ಲಿ ಪ್ರಕಟಿಸಿದರು.
ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಭವಾನಿಸಿಂಗ್ ಠಾಕೂರ್ ಮಾತನಾಡಿ, ಸಮ್ಮೇಳನ ಎಲ್ಲರೂ ಒಗ್ಗೂಡಿ ಕನ್ನಡ ಸಾಹಿತ್ಯ ಸಮ್ಮೇಳನದಂತೆ ಯಶಸ್ವಿ ಗೊಳಿಸೋಣ ಕಲಬುರಗಿ ಗೆ ಕೀರ್ತಿ ತರೋಣ ಎಂದು. ಸಂಘದ ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪ ಅವಂಟಿ, ರಾಜ್ಯ ಸಮಿತಿ ಸದಸ್ಯರಾದ ಹಣಮಂತರಾವ ಭೈರಾಮಡಗಿ, ದೇವಿಂದ್ರಪ್ಪ ಕಪನೂರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Heart attack; ಹೃದಯಾಘಾತ: ಖಂಡಿತವಾಗಿಯೂ ನಿರ್ಲಕ್ಷ್ಯ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.