![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 13, 2021, 5:51 PM IST
ಚಿಂಚೋಳಿ: ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ಸರಕಾರ ನೈಸರ್ಗಿಕ ವಿಪತ್ತು ನಿರ್ವಹಣೆ 4 ಲಕ್ಷ ರೂ. ಪರಿಹಾರ ಹೆಚ್ಚಿಸಬೇಕು. ಬಿಜೆಪಿ ಸರಕಾರ ಕೊಡುತ್ತಿರುವ 1ಲಕ್ಷ ರೂ. ಧನ ಸಹಾಯ ಕೇವಲ ಕಣ್ಣೊರೆಸುವ ತಂತ್ರದಿಂದ ಕೂಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಕೋವಿಡ್ ತಡೆಗೆಟ್ಟುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕಾಂಗ್ರೆಸ್ ಮಾಜಿ ಸಚಿವ ಡಾ|ಶರಣಪ್ರಕಾಶ ಪಾಟೀಲ ಆರೋಪಿಸಿದರು.
ಸೇಡಂ ವಿಧಾನಸಭಾ ಮತಕ್ಷೇತ್ರ ಸುಲೇಪೇಟ ಗ್ರಾಮದಲ್ಲಿ ಆರೋಗ್ಯ ಸಹಾಯ ಹಸ್ತ ಮತ್ತು ಕೋವಿಡ್ ಲಸಿಕೆ ಅಭಿಯಾನ ಜಾಗೃತಿ ಮನೆ ಮನೆಗೆ ಭೇಟಿ ನೀಡಿ ಜನರಿಗೆ ಕೋವಿಡ್ ಲಸಿಕೆ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಅನೇಕ ಜನರು ಜೀವ ಕಳೆದುಕೊಂಡಿದ್ದಾರೆ. ಆದರೆ ಆರೋಗ್ಯ ಇಲಾಖೆ ಸರಿಯಾದ ಅಂಕಿ ಅಂಶ ಕೊಡುತ್ತಿಲ್ಲ. ಮೊದಲ ಅಲೆ ಮತ್ತು 2ನೇ ಅಲೆಯಲ್ಲಿ ಸಾಕಷ್ಟು ಜನರು ಕೊರೊನಾದಿಂದ ಸಾವುಗಳಾಗಿವೆ. ಆದ್ದರಿಂದ 3ನೇ ಅಲೆ ಪ್ರಾರಂಭವಾಗುವ ಸಾಧ್ಯತೆಗಳು ಇದ್ದರೂ ಸಹ ಸರಕಾರ ಯಾವುದೇ ಸಿದ್ಧತೆ ಮಾಡಿಕೊಂಡಿಲ್ಲ. ಜೀವ ಕಳೆದುಕೊಂಡ ಕುಟುಂಬಕ್ಕೆ ಸರ್ವೋತ್ಛ ನ್ಯಾಯಾಲಯ ನೀಡಿದ ಆದೇಶಕ್ಕೆ ಹೆದರಿ ಸರಕಾರ ಪರಿಹಾರ ಕೊಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.
ಪ್ರತಿಯೊಬ್ಬರು ಕೋವಿಡ್ ಲಸಿಕೆ ಹಾಕಿಕೊಳ್ಳಬೇಕು. ನಮ್ಮ ಜೀವ ನಮ್ಮ ಕೈಯಲ್ಲಿ ನಮ್ಮ ಕುಟುಂಬದ ಸದಸ್ಯರ ಜೀವ ಉಳಿಸಿಕೊಳ್ಳಬೇಕಾಗಿದೆ. ಸುಲೇಪೇಟ ಹೋಬಳಿಯ 32 ಗ್ರಾಮಗಳಿಗೆ ಭೇಟಿ ನೀಡಿ ಕೊರೊನಾದಿಂದ ಮೃತಪಟ ಕುಟುಂಬಕ್ಕೆ 5 ಸಾವಿರ ರೂ.ಪರಿಹಾರ ಮತ್ತು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ತಲಾ 2 ಸಾವಿರ ಮತ್ತು ಸಹಾಯಕಿಯರಿಗೆ ಒಂದು ಸಾವಿರ ರೂ. ವೈಯಕ್ತಿಯವಾಗಿ ಪರಿಹಾರ ನೀಡಲಾಗುತ್ತಿದೆ ಎಂದರು.
ಕಾಂಗ್ರೆಸ್ ಸರಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಕುಪನೂರ, ಗರಗಪಳ್ಳಿ, ಜಟ್ಟೂರ ಗ್ರಾಮಗಳಲ್ಲಿ 150ಲಕ್ಷ ರೂ.ಗಳಲ್ಲಿ ಗ್ರಾಪಂ ಕಚೇರಿ ನಿರ್ಮಿಸಲು ಅನುದಾನ ಮಂಜೂರುಗೊಳಿಸಿ ಕಟ್ಟಿಸಿದ್ದೇನೆ. ಆದರೆ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ನಾನು ಕಟ್ಟಿಸಿದ್ದೇನೆ ಎಂದು ಸುಳ್ಳು ಹೇಳುತ್ತಿದ್ದಾರೆ. ಸೇಡಂ ಕ್ಷೇತ್ರದಲ್ಲಿ ನಾನು ಸಚಿವನಾಗಿದ್ದಾಗ ಮಂಜೂರುಗೊಂಡಿರುವ ಅಭಿವೃದ್ಧಿ ಕಾಮಗಾರಿಗಳೇ ಇನ್ನು ನಡೆಯುತ್ತಿವೆ. ಬಿಜೆಪಿ ಶಾಸಕರ ಸಾಧನೆ ಶೂನ್ಯವಾಗಿದೆ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ ಇಎಸ್‌ಐ, ಮೆಡಿಕಲ್ ಕಾಲೇಜು, ಮತ್ತು ಟ್ರಾಮಾ ಸೆಂಟರ್ ಆಗದೇ ಇದ್ದರೆ ಅನೇಕ ಜೀವಗಳು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಇತ್ತು. ಸಂಸದ ಡಾ| ಉಮೇಶ ಜಾಧವ್ ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಸೇಡಂ ಶಾಸಕರು ಕೆನರಾ ಬ್ಯಾಂಕ್‌ನಲ್ಲಿ ಮಾಡಿದ ಅವ್ಯವಹಾರದ ಬಗ್ಗೆ ಇನ್ನು ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಬೇಕಾಗಿದೆ.
ಜಿಲ್ಲಾ ಡಿಸಿಸಿ ಬ್ಯಾಂಕ್‌ನಿಂದ ನೀಡುತ್ತಿರುವ ರೈತರಿಗೆ ನೀಡುತ್ತಿರುವ ಸಾಲದಲ್ಲಿ ಯಾವುದೇ ಅಭಿವೃದ್ಧಿ ಮಾಡದೇ ಬ್ಯಾಂಕ್‌ನ್ನು ಸಂಪೂರ್ಣವಾಗಿ ಮುಳುಗಿಸುತ್ತಾರೆ ಎಂದು ವ್ಯಂಗ್ಯವಾಡಿದರು. ರುದ್ರಶೆಟ್ಟಿ ಪಡಶೆಟ್ಟಿ, ಬಸವರಾಜ ಬಿರಾದಾರ, ತಾಹೇರ ಪಟೇಲ, ಸುಭಾಶ ನಿಷ್ಟಿ, ಬಸವರಾಜ ಸಜ್ಜನಶೆಟ್ಟಿ, ಮೇಘರಾಜ, ನಾಸೀರ ಪಟೇಲ, ರಜಾಕ ಪಟೇಲ, ಅಂಬರೀಶ ಗಾಂಜೆ, ಮಹಾರುದ್ರಪ್ಪ ದೇಸಾಯಿ, ಚಾಂದಪಾಷಾ ಮೊಮಿನ, ಗ್ರಾಪಂ ಅಧ್ಯಕ್ಷ ಸರಸ್ವತಿ ಗಿರಿ ಇನ್ನಿತರಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.