![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 25, 2019, 2:09 PM IST
ಚಿಂಚೋಳಿ: ರಾಮಶೆಟ್ಟಿ ನಾಯಕ ತಾಂಡಾದಲ್ಲಿ ಶಾಸಕ ಡಾ|ಅವಿನಾಶ ಜಾಧವ ಸಿಮೆಂಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ಚಿಂಚೋಳಿ: ತಾಲೂಕಿನ ಹಿಂದುಳಿದ ಪ್ರದೇಶದಲ್ಲಿರುವ ತಾಂಡಾ ಮತ್ತು ಗ್ರಾಮಗಳಲ್ಲಿ ವಾಸಿಸುವ ಸಾರ್ವಜನಿಕರಿಗೆ ಮೂಲ ಸೌಕರ್ಯ ಒದಗಿಸಿ ಕೊಡಲು ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ 45 ಲಕ್ಷ ರೂ. ಮಂಜೂರಾಗಿದೆ ಎಂದು ಶಾಸಕ ಡಾ| ಅವಿನಾಶ ಜಾಧವ ಹೇಳಿದರು.
ತಾಲೂಕಿನ ಹಸರಗುಂಡಗಿ ಗ್ರಾಪಂ ವ್ಯಾಪ್ತಿಯ ರಾಮಶೆಟ್ಟಿ ನಾಯಕ ತಾಂಡಾದಲ್ಲಿ ಸೋಮವಾರ ಲೋಕೋಪಯೋಗಿ ಇಲಾಖೆಯಿಂದ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲೂಕಿಗೆ ಹೊಸದಾಗಿ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ 7 ಪ್ಯಾಕೇಜ್ ಮಂಜೂರಿಗೊಳಿಸಲಾಗಿದೆ. ಪ್ರತಿಯೊಂದು ಪ್ಯಾಕೇಜ್‌ನಲ್ಲಿ 45 ಲಕ್ಷ ರೂ. ಅನುದಾನ ಇದೆ. ಸಿಮೆಂಟ್ ರಸ್ತೆ, ಸೋಲಾರ್ ದೀಪ, ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆಗೊಳಿಸಲು ಅನುದಾನ ಬಳಸಿಕೊಳ್ಳಲಾಗುವುದು. ಎಲ್ಲ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ನಡೆಸಬೇಕು ಮತ್ತು ತಾಂಡಾದ ಜನರು ಕಾಮಗಾರಿಗಳನ್ನು ಗುಣಮಟ್ಟದಿಂದ ನಡೆಸಲು ಸಹಕಾರ ನೀಡಬೇಕು ಎಂದು ಹೇಳಿದರು. ರಾಮಚಂದ್ರ ಜಾಧವ,ಅರುಣ ಪವಾರ, ಶಾಮರಾವ ರಾಠೊಡ, ರಮೇಶ ಧುತ್ತರಗಿ, ಇಂಜಿನಿಯರ್ ವಿಘ್ನೕಶ ಚವ್ಹಾಣ, ವೀರಣ್ಣ ಜಾಬಶೆಟ್ಟಿ, ಸಂಗ್ರಾಮ ರಾಠೊಡ ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.