66 ಜನರ ರಕ್ತ ಮಾದರಿ ಪರೀಕ್ಷೆ
Team Udayavani, Jan 5, 2018, 11:47 AM IST
ಚಿಂಚೋಳಿ: ತಾಲೂಕಿನ ಬೆಡಕಪಳ್ಳಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ಜನರಲ್ಲಿ ಕಾಣಿಸಿಕೊಂಡ ಕೈಕಾಲು ನೋವು
ಕಾಯಿಲೆ ಬಗ್ಗೆ 66 ಜನರ ರಕ್ತ ಮಾದರಿ ಪರೀಕ್ಷೆ ಮಾಡಲಾಗಿದ್ದು, ಇದರಲ್ಲಿ 5 ಜನರಲ್ಲಿ ಚಿಕುನ್ ಗುನ್ಯಾ ಮತ್ತು ಒಬ್ಬರಲ್ಲಿ ಮಲೇರಿಯಾ ರೋಗ ಕಾಣಿಸಿಕೊಂಡಿದೆ. ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ರೋಗ ನಿಯಂತ್ರಣದಲ್ಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಮಹಮದ್ ಗಫಾರ್ ತಿಳಿಸಿದ್ದಾರೆ.
ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಡಕಪಳ್ಳಿಯಲ್ಲಿ ಕೆಲವು ದಿನಗಳ
ಹಿಂದೆ ಜನರಲ್ಲಿ ಕೈಕಾಲು ನೋವು ಕಾಣಿಸಿಕೊಂಡಿತ್ತು. ಸುಲೇಪೇಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳು
ದಾಖಲಾಗುತ್ತಿರುವುದರಿಂದ ವೈದ್ಯರ ಮತ್ತು ಸಿಬ್ಬಂದಿ ತಂಡದೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಮೊದಲ ದಿನ 55 ಜನರು ಹಾಗೂ ಮರು ದಿನ 11 ಜನರ ರಕ್ತ ಪರೀಕ್ಷೆ ಮಾಡಲಾಗಿದೆ.
ಇದರಲ್ಲಿ 5 ಚಿಕೂನ್ ಗುನ್ಯಾ ಮತ್ತು ಒಬ್ಬರಲ್ಲಿ ಮಲೇರಿಯಾ ರೋಗ ಕಾಣಿಸಿಕೊಂಡಿದೆ. ಅಲ್ಲದೇ ಜನರಲ್ಲಿ ಇರುವ
ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆ ಪರೀಕ್ಷೆ ಸಹ ನಡೆಸಲಾಗಿದೆ ಎಂದು ತಿಳಿಸಿದರು. ಬೆಡಕಪಳ್ಳಿಯಲ್ಲಿ 75 ಜನರ ರಕ್ತ ಲೇಪನ ಮಾಡಲಾಗಿದೆ. ಒಟ್ಟು 28 ಮನೆಗಳಿಗೆ ಭೇಟಿ ನೀಡಿ ಜನರಿಗೆ ಆರೋಗ್ಯ ತಿಳಿವಳಿಕೆ ಮತ್ತು ಸ್ವತ್ಛತೆ ಹಾಗೂ ಬಿಸಿಯೂಟ ಸೇವನೆ ಮಾಡಬೇಕು.
ಅಲ್ಲದೇ ಬ್ಯಾರೆಲ್ ಮತ್ತು ನೀರಿನ ತೊಟ್ಟಿಯಲ್ಲಿ ಹೆಚ್ಚು ನೀರು ಸಂಗ್ರಹ ಮಾಡಬಾರದಂತೆ ಜಾಗೃತಿ ಮೂಡಿಸಲಾಗಿದೆ. ಗ್ರಾಮದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕಾಗಿ ಧೂಮೀಕರಣ(ಫಾಗಿಂಗ್) ಮಾಡಲಾಗಿದೆ. ಗ್ರಾಮದಲ್ಲಿ ಸಮುದಾಯ ಆರೋಗ್ಯ ಸಿಬ್ಬಂದಿಗಳಾದ ಅನೀಲಕುಮಾರ, ಮಲ್ಲಿಕಾರ್ಜುನ, ಚಾಂದಪಾಶಾ, ಮಹಾದೇವಿ, ಹಿರಿಯ ಆರೋಗ್ಯ ಸಹಾಯಕಿ ಸವಿತಾ, ಗುಂಡಪ್ಪ ಸರಸ್ವತಿ ಅಲ್ಲದೇ ಆಶಾ ಕಾರ್ಯಕರ್ತೆ ಕಲ್ಲಮ್ಮ ಬಿಡಾರ ಹೂಡಿ ಚಿಕಿತ್ಸೆ ನೀಡುತ್ತಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ|ಅಂಬಾರಾಯ ರುದ್ರವಾಡಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ| ಶಿವಶರಣಪ್ಪ, ಸುಲೇಪೇಟ ಪ್ರಾಥಮಿಕ ಕೇಂದ್ರ ಆರೋಗ್ಯಾಧಿಕಾರಿ ಡಾ| ಲಕ್ಷ್ಮಣ ಜಾಧವ ಭೇಟಿ ನೀಡಿದ್ದಾರೆ. ಗ್ರಾಮದಲ್ಲಿ ಮುಂಜಾಗ್ರತಾ ಕ್ರಮ ಕೈಕೊಳ್ಳಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.