ಜಿಲ್ಲೆಯಲ್ಲಿ 7.84 ಲಕ್ಷ ಹೆಕ್ಟೇರ್ ಭೂಮಿ ಬಿತ್ತನೆ
Team Udayavani, May 21, 2022, 11:50 AM IST
ಕಲಬುರಗಿ: ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ಇದೇ ಮಳೆಗಾಲದ ಆರಂಭ ಎಂದು ಕೊಂಡು ಈ ಬಾರಿಯ ಮುಂಗಾರು ಹಂಗಾಮಿಗಾಗಿ ರೈತರು ಸಜ್ಜಾಗುತ್ತಿದ್ದಾರೆ. ಇದಕ್ಕೆ ಪೂರಕ ಎನ್ನುವಂತೆ ಕೃಷಿ ಇಲಾಖೆ ಕೊಡವಿಕೊಂಡು ಎದ್ದಿದೆ.
ಪ್ರಸಕ್ತ ಮುಂಗಾರು ಹಂಗಾಮಿಗಾಗಿ ಒಟ್ಟು 7.84.353 ಹೆಕ್ಟೇರ್ ಜಮೀನನಲ್ಲಿ ಬಿತ್ತನೆಯ ಗುರಿ ಹೊಂದಿದೆ. ಇದೇ ವೇಳೆ ಈ ಬಾರಿ ಜಿಲ್ಲೆಯಲ್ಲಿ ಕಬ್ಬು ಮತ್ತು ಸೋಯಾಬೀನ್ ಬೆಳೆಯುವ ಕ್ಷೇತ್ರ ವಿಸ್ತರಣೆ ಆಗಿದೆ. ರೈತರು ತೊಗರಿ ಕುರಿತು ಸರ್ಕಾರಗಳು ತೋರುತ್ತಿರುವ ನಿರ್ಲಕ್ಷ್ಯದಿಂದಾಗಿ ವಾಣಿಜ್ಯ ಬೆಳಗಳತ್ತ ಚಿತ್ತ ಹರಿಸಿದ್ದಾರೆ. ಅಲ್ಲದೇ, ಈ ಬಾರಿ ಹತ್ತಿ ಬೆಳೆಯುವ ಕ್ಷೇತ್ರವೂ ವಿಸ್ತಾರಗೊಳ್ಳುತ್ತಿರುವುದು ಸಂತಸ ಮೂಡಿಸಿದೆ.
5.52ಲಕ್ಷ ಹೆಕ್ಟೇರ್ನಲ್ಲಿ ತೊಗರಿ: ಈ ಬಾರಿ 5,52,622 ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆಯುವ ಸಾಧ್ಯತೆ ಇದೆ. ಕಳೆದ ಬಾರಿಗಿಂತ ತುಸು ಕಡಿಮೆ ಎನ್ನಿಸಿದರೂ ಉತ್ತಮ ಇಳುವರಿ ನಿರೀಕ್ಷೆ ಮಾಡಲಾಗಿದೆ. ಅಂದಾಜು 5.61 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆ ಗುರಿ ಇಟ್ಟುಕೊಳ್ಳಲಾಗಿದೆ. ಅದರೊಂದಿಗೆ 52,297 ಹೆಕ್ಟೇರ್‌ನಲ್ಲಿ ಹೆಸರು, 32,451 ಹೆಕ್ಟೇರ್‌ನಲ್ಲಿ ಉದ್ದು ಬೆಳೆಯಲು ಯೋಜಿಸಲಾಗಿದೆ. ವಾಣಿಜ್ಯ ಬೆಳೆಗಳಾದ ಸೂರ್ಯಕಾಂತಿ, ಶೇಂಗಾ, ಸೋಯಾಬೀನ್, ಔಡಲ ಎಲ್ಲವೂ ಸೇರಿ ಒಟ್ಟು 35,691 ಹೆಕ್ಟೇರ್‌ನಲ್ಲಿ ಬೆಳೆ ಬೆಳೆಯಲಾಗುತ್ತಿದೆ. ಇದರಿಂದ ಒಟ್ಟು 34,962 ಮೆ.ಟನ್ ಉತ್ಪಾದನೆ ನಿರೀಕ್ಷೆ ಹೊಂದಲಾಗಿದೆ.
ಕಬ್ಬು, ಹತ್ತಿ ಕ್ಷೇತ್ರ ಹೆಚ್ಚಳ: ಈ ಬಾರಿ ಮುಂಗಾರು ಹಂಗಾಮಿನಲ್ಲಿ ರೈತರು ಕಬ್ಬಿಗೆ ಹೆಚ್ಚು ಜೋತು ಬೀಳುವ ಲಕ್ಷಣಗಳು ಕಾಣಿಸಿವೆ. ಅಂದಾಜು 29,683 ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬೆಳೆಯುವ ಸಾಧ್ಯತೆಗಳು ನಿಚ್ಚಳವಾಗಿವೆ. ಇದೇ ವೇಳೆ ಹತ್ತಿ ಕ್ಷೇತ್ರದಲ್ಲೂ ವಿಸ್ತರಣೆ ಕಾಣುತ್ತಿದೆ. ಒಟ್ಟು 63,458 ಹೆಕ್ಟೇರ್‌ನಲ್ಲಿ ಬೆಳೆಯುವ ಯೋಜನೆ ಹೊಂದಲಾಗಿದೆ. ಕಳೆದ ವರ್ಷ ಹತ್ತಿಗೆ ಭಾರಿ ಬೆಲೆ ಬಂದ ಹಿನ್ನೆಲೆಯಲ್ಲಿ ರೈತರು ಸಹಜವಾಗಿಯೇ ಹತ್ತಿ ಬೆಳೆಯತ್ತ ಆಕರ್ಷಿತರಾಗಿದ್ದಾರೆ ಎನ್ನುತ್ತಾರೆ ಕೃಷಿ ಅಧಿಕಾರಿಗಳು.
ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಇದು ಸಾಂಪ್ರದಾಯಿಕ ಮುಂಗಾರಿನ ಆರಂಭವಲ್ಲದೇ ಇದ್ದರೂ, ರೈತರು ಹೊಲ ಸಜ್ಜು ಮಾಡುತ್ತಿದ್ದಾರೆ. ಇದರಿಂದಾಗಿ ಕೃಷಿ ಚಟುವಟಿಕೆ ಆರಂಭಗೊಂಡಿವೆ. ಒಟ್ಟು 7.84 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ಬೆಳೆಯುವ ಗುರಿ ಹೊಂದಿದ್ದು, 31,30,483 ಮೆಟ್ರಿಕ್ ಟನ್ ಆಹಾರ ಉತ್ಪಾದನೆಯ ಗುರಿ ಹೊಂದಲಾಗಿದೆ. ಕಬ್ಬು, ಸೋಯಾಬೀನ್ ಕ್ಷೇತ್ರ ವಿಸ್ತರಣೆ ಆಗುತ್ತಿದೆ. –ರತೇಂದ್ರನಾಥ ಸೂಗೂರು, ಜೆಡಿ ಕೃಷಿ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.