ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಕಳೆದ ವರ್ಷ 772ಕೋಟಿ ನೆರವು
Team Udayavani, Aug 25, 2022, 2:53 PM IST
ಕಲಬುರಗಿ: ಪಿಎಂ-ಕಿಸಾನ್ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಆರ್ಥಿಕ ಸೌಲಭ್ಯ ಪಡೆಯಲು ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಆಗಸ್ಟ್ 31ರೊಳಗೆ ಕೆವೈಸಿ ಮಾಡಿಸುವಂತೆ ಜಿಲ್ಲೆಯ ರೈತರಲ್ಲಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್‌ಮನವಿ ಮಾಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪಿಎಂ ಕಿಸಾನ್ ಯೋಜನೆಯಡಿ ಜಿಲ್ಲೆಯಲ್ಲಿ ನೋಂದಣಿಯಾದ 2,68,015 ರೈತರ ಪೈಕಿ 99,545 ರೈತರು ಮಾತ್ರ ನೋಂದಣಿ ಮಾಡಿದ್ದಾರೆ. ಉಳಿದ ರೈತರು ನಿಗದಿತ ಅವಧಿಯಲ್ಲಿ “ಗ್ರಾಮ ಒನ್’ ಅಥವಾ ನಾಗರಿಕ ಸೇವಾ ಕೇಂದ್ರಗಳ ಮೂಲಕ ಕೆವೈಸಿ ಮಾಡಿಕೊಳ್ಳದಿದ್ದಲ್ಲಿ ಅಂತಹ ರೈತರಿಗೆ ಆರ್ಥಿಕ ಸೌಲಭ್ಯ ದೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಕಳೆದ ವರ್ಷ ಈ ಯೋಜನೆಯಡಿ ರೈತರಿಗೆ 772ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ ಎಂದರು.
ಪ್ರಸಕ್ತ 2022-23ನೇ ಸಾಲಿಗೆ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 2,14,749ರೈತರು ದಾಖಲೆ ಪ್ರಮಾಣದಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಸ್ಥಳೀಯ ನಿರ್ದಿಷ್ಟ ವಿಕೋಪದಡಿ 40,527ರೈತರು ದೂರು ನೀಡಿರುವ ಹಿನ್ನೆಲೆಯಲ್ಲಿ 24,551ರೈತರ ಹೊಲದಲ್ಲಿ ಜಂಟಿ ಸಮೀಕ್ಷೆ ನಡೆಸಿದ್ದು, 16,476ರೈತರ ಬೆಳೆಗಳು ಸಮೀಕ್ಷೆಗೆ ಬಾಕಿ ಇವೆ. ಮಳೆ ಬಿದ್ದ ನಂತರ 72ಗಂಟೆ ಒಳಗಾಗಿ ರೈತರು ಟೋಲ್ ಫ್ರೀ ಸಂಖ್ಯೆ 100-200-5142ಗೆ ಕರೆ ಮಾಡಿ ದೂರು ನೀಡಿದಲ್ಲಿ ವಿಮಾ ಕಂಪನಿಯವರು ಸಮೀಕ್ಷೆಗೆ ಬರುತ್ತಾರೆ. ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಜಿಲ್ಲಾ ಕೇಂದ್ರದಲ್ಲಿ ಕಾಲ್ ಸೆಂಟರ್ ತೆರೆಯಲಾಗುವುದು. ಕಳೆದ ವರ್ಷ ಈ ವಿಮೆ ಯೋಜನೆಯಡಿ ಜಿಲ್ಲೆಯ ಒಂಭತ್ತು ಸಾವಿರ ಜನರಿಗೆ ಪರಿಹಾರ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಕೃಷಿ ಉಪನಿರ್ದೇಶಕ ಸಮದ್ ಪಟೇಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Desi Swara: ಮುದ್ದಣ್ಣನ ಶ್ರೀ ರಾಮಾಶ್ವಮೇಧಂ ಪುಸ್ತಕ ಸಮರ್ಪಣೆ
ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
Bengaluru: ಕಬ್ಬನ್ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ
S.Africa: ಫಿಕ್ಸಿಂಗ್ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್ 1 ಬೌಲರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.