ಶಹಾಬಾದ್‌ನಲ್ಲಿ ಮಾನ್ಪಡೆ ಸೇರಿ 8 ಮಂದಿ ಬಂಧನ-ಬಿಡುಗಡೆ
Team Udayavani, Nov 11, 2017, 10:23 AM IST
ಶಹಾಬಾದ: ಟಿಪ್ಪು ಸುಲ್ತಾನ್ ಜಯಂತಿ ಸಾರ್ವಜನಿಕವಾಗಿ ಆಚರಿಸದಂತೆ ರಾಜ್ಯ ಸರ್ಕಾರದ ನಿಷೇಧಾಜ್ಞೆ ಜಾರಿಗೊಳಿಸಿದ್ದರೂ ಶುಕ್ರವಾರ ಟಿಪ್ಪು ಜಯಂತಿ ಆಚರಿಸಿದ್ದರಿಂದ ಸಿಪಿಐಎಂ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ಸೇರಿದಂತೆ ಎಂಟು ಮುಖಂಡರನ್ನು ಪೊಲೀಸರು ಬಂಧಿಸಿ,
ತಹಶೀಲ್ದಾರ್ ಕಚೇರಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದರು.
ನಗರದಲ್ಲಿ ಸಾರ್ವಜನಿಕವಾಗಿ ಜಯಂತಿ ಆಚರಣೆ ಮಾಡದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ರೈತ ಮುಖಂಡ ಮಾರುತಿ ಮಾನ್ಪಡೆ ವಿರುದ್ಧ ಜಯಂತಿ ಮಾಡದಂತೆ ನೋಟಿಸ್ ಜಾರಿ ಮಾಡಲಾಗಿತ್ತು.
ಆದರೂ ಸಾರ್ವಜನಿಕವಾಗಿ ಟಿಪ್ಪು ಜಯಂತಿ ಆಚರಣೆ ಮಾಡೇ ಮಾಡ್ತಿವಿ ಎಂದು ಹೇಳಿಕೆ ನೀಡಿ, ಪೊಲೀಸರ
ಸರ್ಪಗಾವಲು ಮಧ್ಯೆಯೇ ನಗರದ ಮಡ್ಡಿ 1ರ ಮಗುªಮ್ ಭವನದ ಎಐಟಿಯುಸಿ ಕಚೇರಿಯಲ್ಲಿ ಶುಕ್ರವಾರ ಸಾರ್ವಜನಿಕವಾಗಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಿದರು.
ಮಾಹಿತಿ ಅರಿತ ಪೊಲೀಸರು ಸ್ಥಳಕ್ಕೆ ಆಗಮಿಸಿ ಆಚರಣೆಯಲ್ಲಿ ಭಾಗಿಯಾದ ಮಾರುತಿ ಮಾನ್ಪಡೆ, ಶರಣಬಸಪ್ಪ
ಮಮಶಟ್ಟಿ, ಅಶೋಕ ಮ್ಯಾಗೇರಿ, ವಿರಯ್ನಾ ಸ್ವಾಮಿ, ಪಾಂಡುರಂಗ ಮಾವಿನ, ಸಿಪಿಐ ಮುಖಂಡ ಮೌಲಾಮುಲ್ಲಾ
ಸೇರಿದಂತೆ ಒಟ್ಟು ಎಂಟು ಜನರನ್ನು ವಶಕ್ಕೆ ಪಡೆದು ಪೊಲೀಸ್ ವಾಹನದಲ್ಲಿ ಠಾಣೆಗೆ ಕರೆದೊಯ್ಯಲಾಯಿತು. ನಂತರ ಚಿತ್ತಾಪುರ ತಹಶೀಲ್ದಾರ್ ಕಚೇರಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.
ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನು ಸಾರ್ವಜನಿಕವಾಗಿ ಆಚರಿಸದಂತೆ ನಿಷೇಧಾಜ್ಞೆ ಜಾರಿ ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಬಿಜೆಪಿಗೆ ಹೆದರಿ ಸಾರ್ವಜನಿಕರಿಗೆ ಜಯಂತಿಗೆ ಅವಕಾಶ ನೀಡಿಲ್ಲ. ತಾಲೂಕು ಮಟ್ಟದಲ್ಲಿ ಜಯಂತಿ ಆಚರಣೆ ಮಾಡುತ್ತಿರುವುದು ಕೇವಲ ರಾಜಕಾರಣವಾಗಿದೆ. ಟಿಪ್ಪು ಒಬ್ಬ ದೇಶ ಪ್ರೇಮಿ, ಬ್ರಿಟಿಷರ ವಿರುದ್ಧ ಹೋರಾಟ ಮಾಡಿದಧಿಧೀರ. ಅವರ ದೇಶ ಸೇವೆ ಅರಿತು ನಾವು ಅವರ ಜಯಂತಿ ಆಚರಣೆಗೆ ಮುಂದಾಗಿದ್ದೇವೆ. ಯಾವುದೇ ರಾಜಕೀಯ ಉದ್ದೇಶವಿಲ್ಲ. ಆದರೂ ಜಯಂತಿ ಆಚರಣೆ ಹತ್ತಿಕ್ಕುವ ಸರ್ಕಾರದ ನಡೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ.
ಮಾರುತಿ ಮಾನ್ಪಡೆ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.