ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಸ್ವಾಗತ ಸಮಿತಿ ರಚನೆ
ಸಮ್ಮೇಳನಾಧ್ಯಕ್ಷರ ಬದಲಾವಣೆಗೆ ಹೆಚ್ಚಿದ ಕೂಗು
Team Udayavani, Dec 12, 2019, 5:58 PM IST
ಕಲಬುರಗಿ: ಬರುವ ಫೆಬ್ರವರಿ 5ರಿಂದ ಮೂರು ದಿನಗಳ ಕಾಲ ನಡೆಯುವ ಅಖಿಲ ಭಾರತ 85ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ರಚಿಸಲಾಗಿದೆ. ಉಪಮುಖ್ಯಮಂತ್ರಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರ ಅಧ್ಯಕ್ಷ ತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸ್ವಾಗತ ಸಮಿತಿಗಳ ರಚನೆಯನ್ನು ಪ್ರಕಟಿಸಲಾಯಿತು.
ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹಾಗೂ ಕಾರ್ಯಾಧ್ಯಕ್ಷರಾಗಿ ಕಲಬುರಗಿ ಗ್ರಾಮೀಣ ಮೀಸಲು ಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮಡು ಅವರ ಆಯ್ಕೆಯನ್ನು ಸಭೆಯಲ್ಲಿ ಘೋಷಿಸಲಾಯಿತು.
ಅದೇ ರೀತಿ ಆಹಾರ ಸಮಿತಿ, ಮೆರವಣಿಗೆ ಸಮಿತಿ, ವಸತಿ ಮತ್ತು ಸಾರಿಗೆ ಸಮಿತಿ, ಪ್ರಚಾರ ಸಮಿತಿ ಸೇರಿದಂತೆ ಒಟ್ಟಾರೆ 16 ಸಮಿತಿಗಳನ್ನು ರಚಿಸಲಾಯಿತು. ಸ್ವಾಗತ ಸಮಿತಿಯ ಪದಾಧಿಕಾರಿಗಳ ಈಗಿನ ಪಟ್ಟಿಯೇ ಅಂತೀಮವಲ್ಲ. ಕೆಲಸ ಮಾಡುವ ಇನ್ನಷ್ಟು ಸದಸ್ಯರನ್ನು ಸೇರ್ಪಡೆ ಮಾಡಬಹುದಾಗಿದೆ ಎಂದು ಡಿಸಿಎಂ ಸಭೆ ಗಮನಕ್ಕೆ ತಂದರಲ್ಲದೇ ಕೆಲವರ ಹೆಸರು ತೆಗೆಯಬೇಕೆನ್ನುವ ವಿಷಯ ಮುಂದಿಟ್ಟುಕೊಂಡು ವಿನಾಕಾರಣ ವಿವಾದ ಮಾಡಬೇಡಿ ಎಂದು ಕಿವಿ ಮಾತು ಹೇಳಿದರು.
ಹಸ್ತಕ್ಷೇಪ ಇಲ್ಲ: ಸಭೆಯಲ್ಲಿ ಸಮ್ಮೇಳನ ಕ್ಕೆ ಕಡಿಮೆ ಅವಧಿ ಇರುವುದರಿಂದ ಸಮ್ಮೇಳನ ಸ್ವಲ್ಪ ದಿನ ಕಾಲ ಮುಂದೂಡಬೇಕು ಜತೆಗೆ ಸಮ್ಮೇಳನಾಧ್ಯಕ್ಷರಾಗಿ ಡಾ. ಎಚ್.ಎಸ್. ವೆಂಕಟೇಶ್ ಮೂರ್ತಿ ಆಯ್ಕೆಗೆ ವಿರೋಧ ವಿರುವುದರಿಂದ ಕಲ್ಯಾಣ ಕರ್ನಾಟಕದ ಭಾಗದವರನ್ನು ಆಯ್ಕೆ ಮಾಡಬೇಕೆಂದು ಸಭೆಯಲ್ಲಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು.
ಇದಕ್ಕೆ ಗೋವಿಂದ ಕಾರಜೋಳ ಅವರು ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ಣಯಕ್ಕರ ಸಂಬಂಧಿಸಿದಂತೆ ತಾವು ಹಸ್ತಕ್ಷೇಪ ಮಾಡುವುದಿಲ್ಲ. ಹೀಗಾಗಿ ದಿನಾಂಕ ಬದಲಾವಣೆ ಹಾಗೂ ಸಮ್ಮೇಳನ ಅಧ್ಯಕ್ಷರ ಬದಲಾವಣೆ ತಮ್ಮದು ಯಾವುದೇ ಪ್ರಯತ್ನ ಬರೋದಿಲ್ಲ. ಈ ಹಿಂದೆ 1995ರಲ್ಲಿ ಮುಧೋಳದಲ್ಲಿ ಅಖಿಲ ಭಾರತ 64ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಾಧ್ಯಕ್ಷರಾಗಿ ನೆರವೇರಿಸಿದಾಗ ಸಮ್ಮೇಳನ ಹಾಗೂ ವೇದಿಕೆ ಎಲ್ಲ ಜವಾಬ್ದಾರಿ ಕನ್ನಡ ಸಾಹಿತ್ಯ ಪರಿಷತ್ತಿನವರಿಗೆ ಸಂಪೂರ್ಣ ಅವಕಾಶ ಕಲ್ಪಿಸಲಾಗಿತ್ತು. ಕನ್ನಡ ಮತ್ತು ಸಂಸ್ಕೃತಿ ಸಚಿವನಾಗಿದ್ದಾಗಲೂ ಪರಿಷತ್ತಿನ ಕಾರ್ಯಚಟುವಟಿಕೆಗಲ್ಲಿ ಹಸ್ತಕ್ಷೇಪ ವಹಿಸಿರಲಿಲ್ಲ.ಹೀಗಾಗಿ ಕಲಬುರಗಿಯ ಸಮ್ಮೇಳನದಲ್ಲೂ ಹಸ್ತಕ್ಷೇಪ ಮಾಡುವುದಿಲ್ಲ. ಆದರೆ ಸಿದ್ದತೆ ಹಾಗೂ ಅಗತ್ಯ ಅನುದಾನ ಕಲ್ಪಿಸಲು ಹೆಚ್ಚಿನ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ವಿವರಣೆ ನೀಡಿದರು.
ಸಭೆಯಲ್ಲಿ ಪಾಲ್ಗೊಂಡ ಸಾಹಿತಿಗಳು ಹಲವು ಸಲಹೆಗಳನ್ನು ನೀಡಿದರು.ಇತ್ತೀಚಿಗೆ ಅಗಲಿದ ಹಿರಿಯ ಸಾಹಿತಿ ಡಾ. ಚೆನ್ನಣ್ಣ ವಾಲೀಕಾರ ಅವರಿಗೆ ಸಭೆಯಲ್ಲಿ ಎರಡು ನಿಮಿಷ ಮೌನಾಚರಿಸಿ ಶೃದ್ಧಾಂಜಲಿ ಸಲ್ಲಿಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಬಿ. ಶರತ್, ಜಿಲ್ಲಾ ಕಸಾಪ ಅಧ್ಯಕ್ಷ ವೀರಭದ್ರ ಸಿಂಪಿ, ಹಿರಿಯ ಸಾಹಿತಿಗಳಾದ ಪ್ರೊ. ವಸಂತ ಕುಷ್ಠಗಿ, ಡಾ. ಸ್ವಾಮಿರಾವ ಕುಲಕರ್ಣಿ, ಅಪ್ಪಾರಾವ ಅಕ್ಕೋಣಿ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.