ಮತದಾನ ಜಾಗೃತಿಗೆ ಬೃಹತ್ ವಾಕಥಾನ್ ರ್ಯಾಲಿ
Team Udayavani, Jan 29, 2018, 10:43 AM IST
ಕಲಬುರಗಿ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಮತದಾನದ ಮಹತ್ವ ಕುರಿತು ಜನರಲ್ಲಿ ಅರಿವು ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿಯಿಂದ ಬೃಹತ್ ವಾಕಥಾನ್ ರ್ಯಾಲಿ ನಡೆಯಿತು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅ ಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಹೆಪ್ಸಿಬಾರಾಣಿ ಕೊರ್ಲಪಾಟಿ, ಕಲಬುರಗಿ ಸಹಾಯಕ ಆಯುಕ್ತೆ ಬಿ. ಸುಶೀಲಾ ಹಾಗೂ ಜೇವರ್ಗಿ ತಹಶೀಲ್ದಾರ ಅಕೃತಿ ಸಾಗರ ಅವರು ನಾಡಿನ ಮಣ್ಣಿನ ಸಂಸ್ಕೃತಿ ಹಾಗೂ ಪರಂಪರೆಯ ಪ್ರತೀಕವಾದ ನೀಲಿ ಇಳಕಲ್ ಸೀರೆ ಧರಿಸಿ ಕಂಗೊಳಿಸಿದರು.
ಜಿಲ್ಲಾ ಸ್ವೀಪ್ ಸಮಿತಿಯಿಂದ ಗುಲಬರ್ಗಾ ವಿಶ್ವವಿದ್ಯಾಲಯ, ಪೊಲೀಸ್ ತರಬೇತಿ ಕೇಂದ್ರ, ಗೃಹ ರಕ್ಷಕದಳ, ಪದವಿ
ಮಹಾವಿದ್ಯಾಲಯಗಳ, ಪಿಡಿಎ ಇಂಜಿನಿಯರಿಂಗ್ ಕಾಲೇಜು, ವೈದ್ಯಕೀಯ ಮಹಾವಿದ್ಯಾಲಯ ಹಾಗೂ ನರ್ಸಿಂಗ್ ಕಾಲೇಜು, ವಸತಿ ನಿಲಯಗಳು, ಪದವಿ ಪೂರ್ವ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸೇರಿದಂತೆ ಸುಮಾರು 10,000 ವಿದ್ಯಾರ್ಥಿ ಹಾಗೂ ನೌಕರರ ಬೃಹತ್ ವಾಕಥಾನ್ ರ್ಯಾಲಿ ಆಯೋಜಿಸುವಲ್ಲಿ ಈ ಮೂರು ಮಹಿಳಾ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಪ್ರಾರಂಭವಾದ ವಾಕಥಾನ್ ರ್ಯಾಲಿ ಡಾ| ಎಸ್.ಎಂ. ಪಂಡಿತ ರಂಗಮಂದಿರ ತಲುಪಿದ್ದರೂ ವಲ್ಲಭ ಭಾಯಿ ಪಟೇಲ್ ವೃತ್ತದಲ್ಲಿ ಜನಸಾಂದ್ರತೆ ಕಡಿಮೆಯಾಗಿರಲಿಲ್ಲ.
ನೀಲಿ ಸೀರೆ ಧರಿಸಿದ ಮೂವರು ಮಹಿಳಾ ಅಧಿಕಾರಿಗಳು ವಾಕಥಾನ್ ದಲ್ಲಿ ಪಾಲ್ಗೊಂಡಿದ್ದ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ ಹಾಗೂ ಮಹಾನಗರ ಪಾಲಿಕೆ ಆಯುಕ್ತ ರಘುನಂದನಮೂರ್ತಿ ಅವರೊಂದಿಗೆ ಸರಿಸಮಾನವಾಗಿ ಪಾದರಸದಂತೆ ಸಂಚರಿಸಿ ವಾಕಥಾನ್‌ಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಂಡರು. ರಂಗಮಂದಿರದ ಮುಂದೆ ಮತದಾರರ ಪ್ರತಿಜ್ಞಾವಿಧಿ ಬೋಧಿಸಲಾಯಿತು. ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಸಹಿ ಸಂಗ್ರಹ ಅಭಿಯಾನದಲ್ಲಿ ಮೂವರು ಮಹಿಳಾ ಅಧಿಕಾರಿಗಳು ಒಟ್ಟಿಗೆ ಸಹಿ ಮಾಡಿದ್ದು ವಿಶೇಷವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.