ವಾಡಿ ಪೊಲೀಸರಿಂದ ಹದ್ದಿನ ಕಣ್ಣು-ಎಚ್ಚರ
Team Udayavani, Sep 16, 2022, 4:13 PM IST
ವಾಡಿ: ಕರ್ತವ್ಯಕ್ಕೆ ಹಾಜರಾದ ಕೆಲವೇ ದಿನಗಳಲ್ಲಿ ಪೊಲೀಸ್ ಠಾಣೆಗೆ ನೂತನ ಸ್ಪರ್ಶ ನೀಡಿ ಗಮನ ಸೆಳೆದಿದ್ದ ಪಿಎಸ್‌ಐ ಮಹಾಂತೇಶ ಜಿ.ಪಾಟೀಲ ಫೋಲೀಸ್ ಸಿಬ್ಬಂದಿಘೇ ಕ್ರೀಡಾಂಗಣ ನಿರ್ಮಿಸುವ ಜತೆಗೆ ಠಾಣೆಯ ಕೊಠಡಿಗಳಿಗೆ ನವೀಕರಣ ಭಾಗ್ಯ ಕರುಣಿಸಿ ಎಸ್‌ಪಿ ಇಶಾ ಪಂತ್ ಅವರಿಂದ ಮೆಚ್ಚುಗೆ ಗಳಿಸಿದ್ದರು. ಇದೀಗ ಪಟ್ಟಣದ ಪ್ರತಿಯೊಂದು ವೃತ್ತಕ್ಕೂ ಸಿಸಿ ಕ್ಯಾಮೆರಾ ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಇತ್ತೀಚೆಗೆ ನಗರ ಠಾಣೆ ವ್ಯಾಪ್ತಿಯಲ್ಲಿ ನಿರಂತರವಾಗಿ ಕೆಲವು ಕೊಲೆ ಘಟನೆಗಳು ನಡೆದಿದ್ದವು. ಹೀಗಾಗಿ ಎಚ್ಚೆತ್ತುಕೊಂಡಿರುವ ಠಾಣಾಧಿಕಾರಿ ಮಹಾಂತೇಶ ಜಿ.ಪಾಟೀಲ, ಪೋಲಿ ಹುಡುಗರ ಗುಂಪು ಘರ್ಷಣೆಗಳಿಗೆ ಕಡಿವಾಣ ಹಾಕಲು ಮತ್ತು ಗಾಂಜಾ ಮಾರಾಟ, ಮಟಕಾ ದಂಧೆ, ಅಕ್ರಮ ಮರಳು ಸಾಗಾಣಿಕೆ, ಜೂಜಾಟ, ಕಳ್ಳತನ, ದರೋಡೆ ಸೇರಿದಂತೆ ಇತರ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಸಿಸಿ ಕ್ಯಾಮೆರಾಗಳ ಮೊರೆ ಹೋಗಿದ್ದಾರೆ. ಮಾರುಕಟ್ಟೆ, ಬಸ್ ನಿಲ್ದಾಣ, ಬಸವೇಶ್ವರ ವೃತ್ತ, ಕಾಮ್ರೆಡ್ ಶ್ರೀನಿವಾಸಗುಡಿ ವೃತ್ತ, ಅಂಬೇಡ್ಕರ್ ವೃತ್ತ, ರೈಲು ನಿಲ್ದಾಣ, ಶಿವಾಜಿ ಚೌಕ್, ಮೌಲಾನಾ ಅಬ್ದುಲ್ ಕಲಾಂ ಆಜಾದ್ ವೃತ್ತ, ಚೌಡೇಶ್ವರ ಚೌಕ್, ರೆಸ್ಟ್‌ಕ್ಯಾಂಪ್ ತಾಂಡಾ, ಬಳಿರಾಮ ಚೌಕ್, ಇಂದಿರಾ ಕಾಲೋನಿ, ಶಿವರಾಯ ಚೌಕ್ ಹಾಗೂ ವಿವಿಧೆಡೆ ಒಟ್ಟು 60 ಸಿಸಿ ಕ್ಯಾಮೆರಾ ಅಳವಡಿಸಿದ್ದಾರೆ.
ಕಳೆದ ಐದಾರು ದಿನಗಳಿಂದ ನಗರದ ಕೆಲ ವೃತ್ತಗಳ ವಿದ್ಯುತ್ ಕಂಬಗಳಿಗೆ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗುತ್ತಿದೆ. ಹೀಗಾಗಿ ಠಾಣೆ ವ್ಯಾಪ್ತಿಯಲ್ಲಿ ನೂರಾರು ಸಂಖ್ಯೆಯಲ್ಲಿರುವ ರೌಡಿ ಶೀಟರ್‌ಗಳ ಮೇಲೂ ಈ ಸಿಸಿ ಕ್ಯಾಮೆರಾಗಳು ನಿಗಾವಹಿಸಲಿವೆ.
-ಮಡಿವಾಳಪ್ಪ ಹೇರೂರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.