ಸಮಸ್ಯೆಗೆ ಆತ್ಮಹತ್ಯೆಯೇ ಪರಿಹಾರವಲ್ಲ

Team Udayavani, Feb 27, 2017, 3:54 PM IST

gul5.jpg

ಕಲಬುರಗಿ: ನಗರದ ಕೋಟನೂರ ಡಿ ಸಿದ್ಧರಾಮೇಶ್ವರ ದೇವಾಲಯದ ಕಲ್ಯಾಣ ಮಂಟಪದಲ್ಲಿ ಯಶ್‌ ಅಭಿಮಾನಿಗಳ ಸಂಘ ಹಾಗೂ ರೈತರಿಂದ ಆಯೋಜಿಸಲಾದ ಸಮಾರಂಭದಲ್ಲಿ ಯಶ್‌ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು. ರೈತರ ಕೃಷಿ ಉತ್ಪನ್ನಗಳಿಗೆ ಸರಕಾರ ಉತ್ತಮ ಬೆಂಬಲ ಬೆಲೆ ಕೊಡಲಿ ಎಂದು ಯಶ್‌ ಈ ವೇಳೆ ಆಗ್ರಹಿಸಿದರು. 

ಮಾಜಿ ಸಚಿವ ರಾಜುಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಯುವ ಘಟಕದ ಅಧ್ಯಕ್ಷ ಪ್ರವೀಣ ತೆಗನೂರ, ಜಿಲ್ಲಾ ಪಂಚಾಯಿತಿ ಸದಸ್ಯ ದಿಲೀಪ ಪಾಟೀಲ, ಶರಣರಾಜ ಇದ್ದರು. ತಮ್ಮ ನೆಚ್ಚಿನ ಚಿತ್ರನಟ ಆಗಮಿಸುವುದನ್ನು ಮೊದಲೇ ಅರಿತ ಸಾವಿರಾರು ಅಭಿಮಾನಿಗಳು ನಿರೀಕ್ಷೆ ಮೀರಿ ಆಗಮಿಸಿದ್ದರಿಂದ ಇಡೀ ಕಲ್ಯಾಣ ಮಂಟಪ ತುಂಬಿ ತುಳುಕಿತ್ತಲ್ಲದೇ ಹೊರಗಡೆಯೂ ಸಾವಿರಾರು ಜನರು ನಿಂತಿದ್ದರು.

ಯಶ್‌ ಆಗಮನ ಹಿನ್ನೆಲೆಯಲ್ಲಿ ರಸ್ತೆ ಸಂಚಾರಕ್ಕೆ ವ್ಯತ್ಯಯ ಉಂಟಾಗಿತ್ತು. ಸೆಲ್ಪಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದರು. ಚಿತ್ರನಟ ಯಶ್‌ರನ್ನು ಕಾರ್ಯಕ್ರಮದ ವೇದಿಕೆಗೆ ಕರೆ ತರಲು ಆಯೋಜಕರು ಹಾಗೂ ಪೊಲೀಸ್‌ರು ಹರ ಸಾಹಸ ಪಟ್ಟರು. 

ಕಾರ್ಯಕ್ರಮ ಕೆಇಬಿ ಕಲ್ಯಾಣ ಮಂಟಪದ ಎದುರಿನ ವಿಶಾಲವಾದ ಜಾಗದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಪೊಲೀಸ್‌ರು ಅನುಮತಿ ನೀಡದ ಹಿನ್ನೆಲೆಯಲ್ಲಿ ಕೊನೆ ಘಳಿಗೆಯಲ್ಲಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ನೋಡಲು ಪರದಾಡಿದರು. 

ಜೇವರ್ಗಿ: ಎಲ್ಲ ಸಮಸ್ಯೆಗಳಿಗೂ ಆತ್ಮಹತ್ಯೆ ಪರಿಹಾರವಲ್ಲ. ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ನಟ ಯಶ್‌ ರೈತರಿಗೆ ಮನವಿ ಮಾಡಿದರು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ರವಿವಾರ ಜಿಪಂ ಮಾಜಿ ಸದಸ್ಯ ಅಶೋಕ ಸಾಹು ಗೋಗಿ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ರೈತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲ ಸಮಸ್ಯೆಗಳಿಗೂ ದೇವರಿದ್ದಾನೆ. ಪ್ರತಿಯೊಬ್ಬರು ಸ್ವಾಭಿಮಾನ ಬೆಳೆಸಿಕೊಂಡು ನಮ್ಮ ಬದುಕನ್ನು ನಾವೇ ರೂಪಿಸಿಕೊಳ್ಳಬೇಕು. ದೇವರು ಕಷ್ಟ ಕೊಡುತ್ತಿದ್ದಾನೆ ಎಂದರೆ ಭವಿಷ್ಯದಲ್ಲಿ ಅವನಿಗೆ ಒಳ್ಳೆಯದಾಗುತ್ತದೆ ಎಂದರ್ಥ. ನಾನು ಅನೇಕ ಕಷ್ಟ ಎದುರಿಸಿ ಮೇಲೆ ಬಂದಿದ್ದೇನೆ. ಉತ್ತರ ಕರ್ನಾಟಕದ ಜನರು ನಾನು ಕಷ್ಟದಲ್ಲಿದ್ದಾಗ ಕೈಹಿಡಿದು ಮೇಲಕ್ಕೆತ್ತಿದ್ದಾರೆ.

ಈ ಭಾಗದ ಜನರಿಗೆ ನಾನು ಚಿರಋಣಿಯಾಗಿರುತ್ತೇನೆ ಎಂದು ಹೇಳಿದರು. ಸತತವಾಗಿ ಕಾಡುತ್ತಿರುವ ಬರ ನೀಗಿಸಲು ಕೆರೆ ಸಂರಕ್ಷಣೆ ಹಾಗೂ ಕೆರೆ ಅಭಿವೃದ್ಧಿಯೇ ಪರಿಹಾರ. ರಾಜ್ಯದ ಪ್ರತಿ ಗ್ರಾಮಗಳಲ್ಲಿ ಕೆರೆಗಳು ಹಾಗೂ ಕೃಷಿ ಹೊಂಡ ನಿರ್ಮಿಸಬೇಕು. ಪ್ರತಿಯೊಬ್ಬರಲ್ಲಿ ಮಳೆ ನೀರಿನ ಮಹತ್ವ ಅದರ ಸಂರಕ್ಷಣೆ ಹಾಗೂ ಕೆರೆ ಅಗತ್ಯತೆ ಕುರಿತು ಜಾಗೃತಿ ಮೂಡಿಸುವ ಕಾರ್ಯವಾಗಬೇಕು.

ರೈತರು ಸಮಸ್ಯೆಗೆ ಸಿಲುಕಿದಾಗ ಧೈರ್ಯ ತುಂಬುವ ಜವಾಬ್ದಾರಿ ಪ್ರತಿಯೊಬ್ಬ ಕಲಾವಿದರ ಮೇಲಿರುತ್ತದೆ ಎಂದು ಹೇಳಿದರು. ಜಿಪಂ ಮಾಜಿ ಸದಸ್ಯ ಅಶೋಕ ಸಾಹು ಗೋಗಿ, ಕರವೇ ರಾಜ್ಯ ಸಂಚಾಲಕ ಬಸವರಾಜ ಪಡಕೋಟೆ, ಮುಖಂಡರಾದ ಮಲ್ಲಶೆಟ್ಟೆಪ್ಪಗೌಡ ಹಿರೇಗೌಡ, ಎಂ.ಎಸ್‌. ಪಾಟೀಲ ಹರವಾಳ, ವಿಎಚ್‌ಪಿ ಮುಖಂಡ ಮಲ್ಲಿಕಾರ್ಜುನ ಆದ್ವಾನಿ, ಶಿವಲಿಂಗ ಹಳ್ಳಿ ಇದ್ದರು. 

ಟಾಪ್ ನ್ಯೂಸ್

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.