ಪ್ರತಿಕಾ ಸ್ವಾತಂತ್ರ್ಯ ಉಳಿವಿಗೆ ಒತ್ತಾಸೆಯಾಗಿ: ಮಣ್ಣೂರ
Team Udayavani, Aug 25, 2022, 3:21 PM IST
ಕಲಬುರಗಿ: ಪತ್ರಕರ್ತರದ್ದು ಕತ್ತಿಯ ಅಲುಗಿನ ಮೇಲಿನ ನಡಿಗೆಯಾಗಿದ್ದು, ಪತ್ರಿಕಾ ಸ್ವಾತಂತ್ರ್ಯ ಉಳಿವಿಗೆ ಒತ್ತಾಸೆಯಾಗಿ ಬಗ್ಗದೇ, ಕುಗ್ಗದೇ ನಿಲ್ಲಬೇಕು ಎಂದು ಹಿರಿಯ ಪತ್ರಕರ್ತ ಪಿ.ಎಂ. ಮಣ್ಣೂರ ಹೇಳಿದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಬಸವೇಶ್ವರ ನಗರದ ತಮ್ಮ ನಿವಾಸದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿರುವ “ಮನೆ ಅಂಗಳದಲ್ಲಿ ಗೌರವಿಸುವ’ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
1968-19ರಲ್ಲಿ ನಾನು “ಸತ್ಯಕಾಮ’ ಎನ್ನುವ ವಾರಪತ್ರಿಕೆ ಆರಂಭಿಸಿದೆ. 1972ರಲ್ಲಿ ಜರುಗಿದ ಲೋಕಸಭೆ ಚುನಾವಣೆ ವೇಳೆ ಧರ್ಮರಾವ್ ಅಫಜಲಪುರಕರ್ ಕಾಂಗ್ರೆಸ್ (ಐ) ಅಭ್ಯರ್ಥಿಯಾಗಿದ್ದರು. ತಮ್ಮ ಸುದ್ದಿ ಕವರೇಜ್ ಮಾಡಲು ಅವರು 10ಸಾವಿರ ರೂ. ಕೊಟ್ಟಿದ್ದರು. ಹಣ ತೆಗೆದುಕೊಳ್ಳುವ ವೇಳೆಯಲ್ಲೇ ಡಾ| ಶರಣಬಸವಪ್ಪ ಅಪ್ಪ ಸ್ಪರ್ಧಿಸಿದ್ದು ನಾನು ಅವರ ಬಗ್ಗೆಯೂ ಬರೆಯಬೇಕಾಗುತ್ತದೆ ಎಂದು ಹೇಳಿದ್ದರಿಂದ ಪ್ರಿಂಟ್ ಆದ ಪತ್ರಿಕೆ ಅವರಿಗೆ ಕೊಟ್ಟು, ಉಳಿದ ಹಣ ವಾಪಸ್ ಕೊಡಲು ಹೋಗಿದ್ದೆ. ಅವರು ನನ್ನ ಪ್ರಾಮಾಣಿಕತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ನಂತರ “ಸತ್ಯಕಾಮ’ ಪತ್ರಿಕೆ ದಿನಪತ್ರಿಕೆಯಾಗಿ ಪರಿವರ್ತಿಸಿದೆ ಎಂದು ತಮ್ಮ ಪತ್ರಿಕಾಲೋಕದ ಪದಾರ್ಪಣೆ ಕುರಿತು ಮೆಲುಕು ಹಾಕಿದರು.
ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬರಾವ್ ಯಡ್ರಾಮಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಡಾ|ಶಿವರಂಜನ ಸತ್ಯಂಪೇಟೆ, ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ, ಉಪಾಧ್ಯಕ್ಷ ದೇವಿಂದ್ರಪ್ಪ ಆವಂಟಿ, ಕಾರ್ಯಕಾರಿ ಸಮಿತಿ ಸದಸ್ಯ ರಾಜು ಕೋಷ್ಠಿ, ಪತ್ರಕರ್ತ ಜಗದೀಶ ಕುಂಬಾರ ಮತ್ತು ಪದಾಧಿಕಾರಿಗಳು ಈ ಸಂದರ್ಭದಲ್ಲಿದ್ದರು.
ಸ್ಥಳೀಯ ಸಣ್ಣ ಪತ್ರಿಕೆಗಳ ಉಳಿವಿಗಾಗಿ ಪ್ಯಾಕೇಜ್ ಘೋಷಣೆ ಮಾಡಬೇಕು. ನಿವೃತ್ತ ಪತ್ರಕರ್ತರಿಗೆ 10 ಸಾವಿರ ರೂ. ಮಾಸಾಶನ ನೀಡಬೇಕು. ಸ್ಥಳೀಯ ಮತ್ತು ಪ್ರಾದೇಶಿಕ ಪತ್ರಿಕೆಗಳಿಂದ ಮಾತ್ರ ಅಸ್ಮಿತೆ ಉಳಿದಿದೆ ಎನ್ನುವುದು ಸರ್ಕಾರ ಮತ್ತು ಆಯಾ ಭಾಗದ ಜನಪ್ರತಿನಿಧಿಗಳು ತಿಳಿಯಬೇಕು. –ಪಿ.ಎಂ. ಮಣ್ಣೂರ, ಹಿರಿಯ ಪತ್ರಕರ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.