8.50 ಲಕ್ಷ ಮಕ್ಕಳಿಗೆ ಅಲ್ಟೆಂಡಾಜೋಲ್ ಮಾತ್ರೆ ನುಂಗಿಸುವ ಗುರಿ


Team Udayavani, Aug 10, 2018, 10:16 AM IST

gul-3.jpg

ಕಲಬುರಗಿ: ಜಿಲ್ಲಾದ್ಯಂತ ಆ. 10ರಂದು ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. 19 ವರ್ಷದೊಳಗಿನ ಒಟ್ಟು 8.50 ಲಕ್ಷ ಮಕ್ಕಳಿಗೆ ಅಲ್ಟೆಂಡಾಜೋಲ್ ಮಾತ್ರೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಎಂ.ಕೆ. ಪಾಟೀಲ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ 3098 ಅಂಗನವಾಡಿ ಕೇಂದ್ರಗಳು, 3604 ಶಾಲೆಗಳು, 191 ಕಾಲೇಜುಗಳ ಮೂಲಕ 1 ರಿಂದ 2 ವರ್ಷದೊಳಗಿನ 69,493 ಹಾಗೂ 3ರಿಂದ 19 ವರ್ಷದೊಳಗಿನ 7,81,088 ಮಕ್ಕಳಿಗೆ ಜಂತು ನಿವಾರಕ ಮಾತ್ರೆ ನುಂಗಿಸಲಾಗುವುದು. ಈ ಬಾರಿ ಖಾಸಗಿ ಶಾಲೆ ಮಕ್ಕಳಿಗೂ ಮಾತ್ರೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಜಂತು ಹುಳು ರೋಗ ಮುಖ್ಯವಾಗಿ ಕಲುಷಿತ ನೀರು, ಬರಿಗಾಲಿನಿಂದ ನಡೆಯುವುದು, ಅಶುದ್ಧ ಆಹಾರ ಸೇವನೆಯಿಂದ ಹರಡುತ್ತದೆ. ಜಂತು ಹುಳು ಬಾಧೆಯಿಂದ ಬಳಲುವ ಮಕ್ಕಳು ಸದಾ ಅನಾರೋಗ್ಯ ಪೀಡಿತರಾಗಿ ದೈಹಿಕ ಬೆಳವಣಿಗೆ ಕುಂಠಿತವಾಗುತ್ತದೆ. ಇದರಿಂದಾಗಿ ಕಲಿಕೆ ಕ್ಷಮತೆ ಕಡಿಮೆಯಾಗಿ ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಮಕ್ಕಳಿಗೆ 6 ತಿಂಗಳಿಗೊಂದು ಬಾರಿ ಅಲ್ಟೆಂಡಾಜೋಲ್ ಮಾತ್ರೆ ನುಂಗಿಸುವ ಮೂಲಕ ರೋಗ ನಿವಾರಣೆಗೆ ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.

ಎಲ್ಲ ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಮಾತ್ರೆ ನುಂಗಿಸುವಾಗ ಶೌಚದ ನಂತರ ಹಾಗೂ ಊಟಕ್ಕೆ ಮೊದಲು ಸ್ವತ್ಛವಾಗಿ ಕೈ ತೊಳೆಯುವ ಕ್ರಮಗಳನ್ನು ತಿಳಿಸಲಾಗುತ್ತಿದೆ. ವೈಯಕ್ತಿಕ ಸ್ವತ್ಛತೆ ಕುರಿತು ಸಹ ಜಾಗೃತಿ ಮೂಡಿಸಲಾಗುತ್ತಿದೆ. ಎರಡು ವರ್ಷದ ಒಳಗಿನ ಮಕ್ಕಳಿಗೆ ಅರ್ಧ ಹಾಗೂ ಮೂರು ವರ್ಷ ಮೇಲ್ಪಟ್ಟ ಮಕ್ಕಳಿಗೆ ಒಂದು ಅಲ್ಟೆಂಡಾಜೋಲ್ಮಾತ್ರೆ ನುಂಗಿಸಲಾಗುತ್ತದೆ. ಜಿಲ್ಲೆಯಲ್ಲಿ ಅಲ್ಟೆಂಡಾಜೋಲ್ ಮಾತ್ರೆ ಸಾಕಷ್ಟು ದಾಸ್ತಾನು ಇದ್ದು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಶಿಕ್ಷಕರಿಗೆ ಮಾತ್ರೆ ನುಂಗಿಸುವ ತರಬೇತಿ ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಮುಂದುವರಿದ ಗ್ರಾಮ ಸ್ವರಾಜ್‌ ಅಭಿಯಾನದಡಿ ತೀವ್ರಗೊಂಡ ಮಿಷನ್‌ ಇಂದ್ರಧನುಷ ಮೊದಲ ಸುತ್ತು ಕಾರ್ಯಕ್ರಮವನ್ನು ಆ. 13, 14, 17 ಹಾಗೂ 18ರಂದು ಹಮ್ಮಿಕೊಳ್ಳಲಾಗಿದೆ. ಜಿಲ್ಲಾದ್ಯಂತ 28,82,478 ಜನರ ಸಮೀಕ್ಷೆ ಕೈಗೊಂಡು 1975 ಗರ್ಭಿಣಿಯರು, 2 ವರ್ಷದೊಳಗಿನ 9730 ಮಕ್ಕಳು, 5-6 ವರ್ಷದೊಳಗಿನ 6067 ಮಕ್ಕಳಿಗೆ ಲಸಿಕೆ ನೀಡಲು ಕ್ರಿಯಾ ಯೋಜನೆ ರೂಪಿಸಲಾಗಿದೆ.

ಇದಕ್ಕಾಗಿ 1026 ಲಸಿಕಾ ಕೇಂದ್ರ ಹಾಗೂ 287 ಸಂಚಾರಿ ಲಸಿಕಾ ತಂಡ ಸಹ ಸಿದ್ಧಪಡಿಸಲಾಗಿದೆ. ಸೆಪ್ಟೆಂಬರ್‌ ತಿಂಗಳಲ್ಲಿ 10, 11, 12 ಮತ್ತು 14ರಂದು ಎರಡನೇ ಸುತ್ತು ಹಾಗೂ ಅಕ್ಟೋಬರ್‌ ತಿಂಗಳಲ್ಲಿ 9, 10, 12 ಮತ್ತು 15ರಂದು ಮೂರನೇ ಸುತ್ತಿನ ತೀವ್ರಗೊಂಡ ಇಂದ್ರಧನುಷ ಲಸಿಕಾ ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದರು. ಆರ್‌ಸಿಎಚ್‌ ಅಧಿಕಾರಿ ಡಾ| ಅಂಬಾರಾಯ ರುದ್ರವಾಡಿ, ಸರ್ವೇಲನ್ಸ್‌ ಅಧಿಕಾರಿ ಡಾ| ತಾಳಿಕೋಟಿ, ತಾಲೂಕು ವೈದ್ಯಾಧಿಕಾರಿ ಡಾ| ರಾಜಕುಮಾರ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.