ಪಿಡಬ್ಲುಡಿ ಸಹಾಯಕ ಅಭಿಯಂತರ ಮನೆ ಸೇರಿ ಐದು ಕಡೆ ಎಸಿಬಿ ದಾಳಿ
Team Udayavani, Dec 18, 2020, 8:48 PM IST
ಸಾಂದರ್ಭಿಕ ಚಿತ್ರ
ಬೆಳಗಾವಿ: ಲೋಕಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಹಾಯಕ ಅಭಿಯಂತರ ಮನೆ ಸೇರಿ ಐದು ಕಡೆಗೆ ಏಕಕಾಲಕ್ಕೆ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಹಾಯಕ ಅಭಿಯಂತ ಮನೋಜ ಸುರೇಶ ಕವಳೇಕರ ಎಂಬವರ ಮನೆ ಮೇಲೆ ದಾಳಿ ನಡೆಸಿದಾಗ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಪತ್ತೆಯಾಗಿದೆ. ತಮ್ಮ ಆದಾಯ ಮೂಲಕ್ಕಿಂತಲೂ ಹೆಚ್ಚಿನ ಆಸ್ತಿ-ಪಾಸ್ತಿ ಮಾಡಿರುವುದು ದಾಳಿ ವೇಳೆ ಗೊತ್ತಾಗಿದೆ.
ಮನೋಜ ಕವಳೇಕರ ಅವರ ಇಲ್ಲಿಯ ಆಯೋಧ್ಯೆ ನಗರದ ನಿವಾಸಿ, ಸಹೋದರಿ ಜ್ಯೋತಿ ಕವಳೇಕರ ಅವರ ನಿವಾಸ, ಮಹದ್ವಾರ ರಸ್ತೆಯಲ್ಲಿರುವ ಸಹೋದರಿ ರಾಜಶ್ರೀ ಕವಳೇಕರ ಅವರ ಪ್ಲ್ಯಾಟ್, ಮನೋಜ ಅವರ ಕಚೇರಿಯ ಕೊಠಡಿ ಹಾಗೂ ಸಹೋದರಿಯ ಹೆಸರಿನಲ್ಲಿರುವ ಖಾನಾಪುರ ತಾಲೂಕಿನ ಸಂಗರಗಾಳಿ ಗ್ರಾಮದ ಫರ‍್ಮ ಹೌಸ್ ಮೇಲೆ ಎಸಿಬಿ ದಾಳಿ ನಡೆಸಿದೆ.
ಬೆಳಗಾವಿ ಉತ್ತರ ವಲಯದ ಎಸಿಬಿ ತಂಡಗಳು ದಾಳಿ ನಡೆಸಿ ಆಸ್ತಿ-ಪಾಸ್ತಿಗಳ ಮೂಲದ ಬಗ್ಗೆ ತನಿಖೆ ಹಾಗೂ ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
UK ಚೆವನಿಂಗ್-ಕರ್ನಾಟಕ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಒಪ್ಪಂದಕ್ಕೆ ಸಹಿ
Kaup: ಸಹಕಾರಿ ಧುರೀಣ ಬಾಲಂ ವಿಶ್ವನಾಥ್ ರಾವ್ ಪಣಿಯೂರು ನಿಧನ
Zakir Hussain ; ಸರಸ್ವತಿ, ಗಣಪತಿಯ ಆರಾಧಕರಾಗಿದ್ದರು ತಬಲಾ ಮಾಂತ್ರಿಕ
RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.