ಮನೆಗೆ ಆಕಸ್ಮಿಕ ಬೆಂಕಿ: ಆಭರಣ-ನಗದು ಆಹುತಿ
Team Udayavani, Dec 8, 2018, 10:36 AM IST
ಚಿಂಚೋಳಿ: ತಾಲೂಕಿನ ಕೋಡ್ಲಿ ಗ್ರಾಮದಲ್ಲಿ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದ 6 ತೊಲೆ ಬಂಗಾರ, 25 ತೊಲೆ ಬೆಳ್ಳಿ ಹಾಗೂ ನಗದು ಲಕ್ಷಾಂತರ ರೂ. ಬೆಂಕಿಗೆ ಆಹುತಿ ಆಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಚಂದ್ರಕಾಂತ ಭೀಮಶಾ ಭಜಂತ್ರಿ ಎನ್ನುವರ ಮನೆಯೇ ಬೆಂಕಿಗೆ ಆಹುತಿಯಾಗಿದ್ದು. ಮನೆಯವರೆಲ್ಲ ಪಕ್ಕದಲ್ಲಿ ನೂತನವಾಗಿ ನಿರ್ಮಿಸಿದ ಮನೆಯೊಂದರ ಗೃಹಪ್ರವೇಶಕ್ಕೆ ಹೋಗಿ ಅಲ್ಲಿಯೇ ತಂಗಿದ್ದರು. ಈ ವೇಳೆ ಘಟನೆ ನಡೆದಿದೆ.
ಆಕಸ್ಮಿಕವಾಗಿ ಮನೆಗೆ ಬೆಂಕಿ ಹೊತ್ತಿಕೊಂಡಿದ್ದನ್ನು ನೋಡಿದ ಗ್ರಾಮಸ್ಥರು ಬೆಂಕಿ ಆರಿಸುವ ಮೊದಲೇ ಮನೆಯಲ್ಲಿದ್ದ ಬೆಲೆ ಬಾಳುವ ವಸ್ತುಗಳು, ದಿನ ಬಳಕೆ ಆಹಾರ ಧಾನ್ಯ, ಬಟ್ಟೆ ಹಾಗೂ ಮಗಳ ಮದುವೆ ಸಂಗ್ರಹಿಸಿಟ್ಟಿದ್ದ ಕಿವಿಯೋಲೆ, ತಾಳಿ ಹಾಗೂ ಇನ್ನಿತರ ಒಡವೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಶಾಸಕರ ಭೇಟಿ: ಬೆಂಕಿಗೆ ಮನೆಯೊಳಗಿದ್ದ ಬೆಲೆ ಬಾಳುವ ವಸ್ತುಗಳು ಹಾನಿಯಾಗಿದ್ದು ಹಾಗೂ ಲಕ್ಷಾಂತರ ರೂ.ಗಳು ಸುಟ್ಟ ಬಗ್ಗೆ ಕಂದಾಯ ಅಧಿಕಾರಿಗಳಿಗೆ ಮತ್ತು ರಟಕಲ್ ಪೊಲೀಸರಿಗೆ ವರದಿ ನೀಡುವಂತೆ ತಿಳಿಸಲಾಗಿದೆ. ಶೀಘ್ರವೇ ಸರ್ಕಾರದಿಂದ ಪರಿಹಾರ ಕೊಡಿಸುತ್ತೇನೆ ಎಂದು ಶಾಸಕ ಡಾ| ಉಮೇಶ ಜಾಧವ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಭರವಸೆ ನೀಡಿದರು.
ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ, ಪಿಎಸ್‌ಐ ಇಂದಿರಾ ಪಾಟೀಲ ಚಂದಾಪುರ, ಮಾರುತಿ ಜಮಾದಾರ, ಅಲಿಮ ನಾಯಕೋಡಿ, ಮಲ್ಲಿಕಾರ್ಜುನ ಚಿಂತಕುಂಟ, ಬಸವರಾಜ ಕೋಲಕುಂದಿ, ದೇವಲಾ ನಾಯಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.