ಬೌದ್ದ ವಿಹಾರ ವಿಶ್ವದರ್ಜೆಗೇರಿಸಲು ಕ್ರಮ: ಡಿಸಿ
Team Udayavani, Jun 8, 2022, 12:31 PM IST
ಚಿತ್ತಾಪುರ: ಕನಗನಳ್ಳಿ ಬೌದ್ಧ ವಿಹಾರ ವಿಶ್ವ ದರ್ಜೆಗೆ ಏರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ತಿಳಿಸಿದರು.
ತಹಶೀಲ್ದಾರ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಚೇರಿಯಲ್ಲಿ ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಕೆಲವೇ ದಿನಗಳಲ್ಲಿ ಅಭಿವೃದ್ಧಿಪಡಿಸುವ ಮುಖಾಂತರ ವಿಶ್ವದರ್ಜೆಗೆ ಏರಿಸಲಾಗುವುದು ಎಂದರು. ಕನಗನಳ್ಳಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಬೌದ್ಧ ವಿಹಾರದಲ್ಲಿ ಗೈಡ್ ನೇಮಕ ಮಾಡಬೇಕೆಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕರ್ ಮಾಡಿದ ಮನವಿಗೆ ಜಿಲ್ಲಾಧಿಕಾರಿಗಳು ಮೇಲಿನಂತೆ ಉತ್ತರಿಸಿದರು.
ಆನಂತರ ತಾಲೂಕಿನ ಜಮೀನು, ರಸ್ತೆ, ಕುಡಿಯುವ ನೀರು, ಆರೋಗ್ಯ, ರಸಗೊಬ್ಬರ, ಬಸ್ ವ್ಯವಸ್ಥೆ, ಪಹಣಿ ತಿದ್ದುಪಡಿ ಸೇರಿದಂತೆ ಸಾರ್ವಜನಿಕರ ಅನೇಕ ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು ಸ್ಥಳದಲ್ಲೇ ಕೆಲವು ಸಮಸ್ಯೆಗಳಿಗೆ ಪರಿಹಾರ ನೀಡಿ, ಇನ್ನು ಕೆಲವು ಸಮಸ್ಯೆಗಳಿಗೆ ಎರಡು ದಿವಸದಲ್ಲಿ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತದನಂತರ ಸಾರ್ವಜನಿಕರಿಂದ 26 ಅರ್ಜಿಗಳ ಅಹವಾಲು ಸ್ವೀಕರಿಸಿ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಸ್ಥಳದಲ್ಲೇ ನೀಡುವ ವ್ಯವಸ್ಥೆ ಕಲ್ಪಿಸಿದರು. ಹಲಕರ್ಟಿ ಗ್ರಾಮದ ಪಹಣಿ ದೋಷ ಕೆಲವು ದಿನಗಳಲ್ಲಿ ಬಗೆಹರಿಸಲಾಗುತ್ತದೆ ಎಂದು ತಿಳಿಸಿದರು.
ತಾಲೂಕಿನಲ್ಲಿ ಈಗಾಗಲೇ ಮುಂಗಾರು ಬಿತ್ತನೆ ಕಾರ್ಯ ಕೆಲವೇ ದಿನಗಳಲ್ಲಿ ಆರಂಭವಾಗುತ್ತಿದ್ದು, ರಸಗೊಬ್ಬರ ಕೊರತೆ ಆಗದಂತೆ 450 ಟನ್ ಪೂರೈಕೆ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಅನೇಕ ಗ್ರಾಮಗಳಲ್ಲಿ ಕೆಲ ಸಾರ್ವಜನಿಕರ ಜಮೀನುಗಳ ಕುರಿತು ಉಪ ನೋಂದಣಾಧಿಕಾರಿ ಕಚೇರಿಗಳ ಕಂಪ್ಯೂಟ್‌ರ್‌ಗಳಲ್ಲಿ ಸರ್ಕಾರಿ ಜಮೀನು ಎಂದು ತೋರಿಸುತ್ತಿದೆ. ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಡಿಸಿಗೆ ಮನವಿ ಸಲ್ಲಿಸಿ, ಗಮನ ಸೆಳೆದರು.
ಇದೇ ವೆಳೆ ತಹಶೀಲ್ದಾರ್ ಕಚೇರಿಯಲ್ಲಿನ ಕೋಣೆಗಳ ಸ್ವತ್ಛತೆ ಮತ್ತು ಕಾರ್ಯವೈಖರಿ ವೀಕ್ಷಿಸಿದರು. ತಹಶೀಲ್ದಾರ್ ಉಮಾಕಾಂತ ಹಳ್ಳೆ, ಭೂಮಾಪನ ಇಲಾಖೆ ಜಿಲ್ಲಾ ನಿರ್ದೇಶಕ ಶಂಕರ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.