![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 9, 2020, 1:23 PM IST
ಕಲಬುರಗಿ: ಹತ್ತಿ ಖರೀದಿಯಲ್ಲಿ ರೈತರಿಗೆ ಮೋಸವಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿನ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ| ಅಜಯಸಿಂಗ್ ಕೇಳಲಾದ ಪ್ರಶ್ನೆಗೆ ಸಚಿವರು ಲಿಖೀತವಾಗಿ ಉತ್ತರ ನೀಡಿದ್ದಾರೆ. ಈಗ ಜೇವರ್ಗಿತಾಲೂಕಿನಲ್ಲಿ ಮೂರು ಖರೀದಿ ಕೇಂದ್ರಗಳ ಮೂಲಕ ಖರೀದಿ ಮಾಡಲಾಗುತ್ತಿದೆ. ಜೇವರ್ಗಿ ತಾಲೂಕಿನಲ್ಲಿ ಹತ್ತಿ ಉತ್ಪನ್ನವನ್ನು ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸಲು ಈ ಬಾರಿ ಸಿದ್ದಾರ್ಥ ಫೈಬರ್ಸ್, ಮಂಜೀತ ಕಾಟನ್ ಮಿಲ್ ಮತ್ತು ಶ್ರೀ ಇಂಡಸ್ಟ್ರೀಸ್ ಜಿನ್ನಿಂಗ್ ಕಾರ್ಖಾನೆಗಳನ್ನು ಖರೀದಿ ಕೇಂದ್ರಗಳನ್ನಾಗಿಘೋಷಿಸಲಾಗಿದೆ. ಭಾರತೀಯ ಹತ್ತಿ ನಿಗಮದ ವತಿಯಿಂದ ಡಿ. 4ರ ಅಂತ್ಯಕ್ಕೆ 8,212 ಕ್ವಿಂಟಲ್ ಹತ್ತಿ ಖರೀದಿಸಲಾಗಿದೆ, ಖರೀದಿ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದರು.
ಖರೀದಿ ಕೇಂದ್ರದಲ್ಲಿನ ತೂಕದ ಯಂತ್ರಗಳು ಅಧಿ ಕೃತ ತೂಕದ ಯಂತ್ರಗಳಾಗಿವೆ. ಮೇಲ್ವಿಚಾರಣೆಯನ್ನು ಭಾರತೀಯ ಹತ್ತಿ ನಿಗಮ ನಿರ್ವಹಿಸುತ್ತದೆ. ಜಿನ್ನಿಂಗ್ ಕಾರ್ಖಾನೆ ಮಾಲೀಕರು, ಎಪಿಎಂಸಿ ಸಿಬ್ಬಂದಿ ಉಸ್ತುವಾರಿ ನೋಡುತ್ತಾರೆ. ರೈತರಿಗೆ ಈ ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಮೋಸವಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.
ಜೇವರ್ಗಿಯಲ್ಲಿ ಹೋಬಳಿಗೊಂದರಂತೆ ಖರೀದಿ ಕೇಂದ್ರ ಆರಂಭಿಸಬೇಕು, ದಲ್ಲಾಳಿಗಳಿಂದ ಆಗುತ್ತಿರುವ ಮೋಸತಪ್ಪಿಸಬೇಕೆಂದು ಸದನದಲ್ಲಿ ಸಚಿವರನ್ನು ಆಗ್ರಹಿಸಿದರು.
ಎಫ್ಎಕ್ಯೂ ಗುಣಮಟ್ಟದ ಹತ್ತಿ ಪ್ರತಿ ಕ್ವಿಂಟಲ್‌ಗೆ 5,515 ರೂ. ಹತ್ತಿ, ಲಾಂಗ್ ಸ್ಪೆಷಲ್ 5,825ರೂ. ಗಳಂತೆ ಬೆಂಬಲ ಬೆಲೆ ನೀಡಿ ಖರೀದಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಹೊಸ ಸರ್ಕಾರಿ ತೋಟಗಾರಿಕಾ ಕ್ಷೇತ್ರ ನಿರ್ಮಿಸುವ ಪ್ರಸ್ತಾಪವಿಲ್ಲ :
ಕಲಬುರಗಿ: ಹೊಸ ಸರ್ಕಾರಿ ತೋಟಗಾರಿಕಾ ಕ್ಷೇತ್ರಗಳನ್ನು ನಿರ್ಮಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಪೌರಾಡಳಿತ ಹಾಗೂ ತೋಟಗಾರಿಕಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು,
ಕಲಬುರಗಿ-ಯಾದಗಿರಿ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ತೋಟಗಾರಿಕೆ ಅಭಿವೃದ್ಧಿಗೆ 274 ಲಕ್ಷ ರೂ. ಖರ್ಚು ಮಾಡಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ 182 ಲಕ್ಷ ಹಾಗೂ ಯಾದಗಿರಿ ಜಿಲ್ಲೆಯಲ್ಲಿ 92 ಲಕ್ಷ ರೂ. ಅನುದಾನ ನೀಡಲಾಗಿದೆ ಎಂದು ವಿವರಣೆ ನೀಡಿದ್ದಾರೆ. 14 ಸರ್ಕಾರಿ ತೋಟಗಾರಿಕಾ ಕ್ಷೇತ್ರ ಮತ್ತು ನರ್ಸರಿಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಚಿತ್ತಾಪುರ ತಾಲೂಕಿನ ಗೋಳಾ ಕೆ, ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ, ಅಫಜಲಪುರ ತಾಲೂಕಿನ ಗುಡೂರ, ಆಳಂದ ತಾಲೂಕಿನ ಹಳ್ಳಿ ಸಲಗರ, ಸೇಡಂದಲ್ಲಿ ಕಚೇರಿ ನರ್ಸರಿ, ಕಲಬುರಗಿ ತಾಲೂಕಿನ ಕೆಸರಟಗಿ, ಬಡೆಪುರ, ಮಾಲಗತ್ತಿ, ಕಲ್ಲಹಂಗರಗಾ, ಯಾದಗಿರಿ ತಾಲೂಕಿನ ಹತ್ತಿಕುಣಿ, ಹುಣಸಗಿ ತಾಲೂಕಿನ ನಾರಾಯಣಪುರ, ಯಾದಗಿರಿ ಹಾಗೂ ಸುರಪುರ ಕಚೇರಿ ನರ್ಸರಿಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.