Aland; 11 ವರ್ಷದ ಬಾಲಕಿಯ ಅತ್ಯಾಚಾರಗೈದು ಬಾವಿಗೆ ಎಸೆದರು
Team Udayavani, Jul 17, 2023, 9:53 PM IST
ಕಲಬುರಗಿ: ಆಳಂದ ತಾಲೂಕಿನ ಗ್ರಾಮವೊಂದರಲ್ಲಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆಗೈದಿರುವ ಅಮಾನುಷ ಘಟನೆ ನಡೆದಿದೆ.
ಬಾಲಕಿಯನ್ನು ಅತ್ಯಾಚಾರಗೈದು ಬಾವಿಗೆ ಎಸೆಯಲಾಗಿದೆ ಎಂದು ಬಾಲಕಿಯ ಪಾಲಕರು ದೂರು ನೀಡಿದ್ದಾರೆ. ಎರಡು ದಿನಗಳ ಹಿಂದೆ ಮನೆ ಪಕ್ಕದಲ್ಲಿ ಓದಲು ಹೋಗಿದ್ದ ಬಾಲಕಿ ಮನೆಗೆ ಬಾರದಿದ್ದಾಗ ಒಂದು ದಿನದ ನಂತರ ಪೊಲೀಸ್ ಠಾಣೆಗೆ ಹೋಗಿ ಕಾಣೆಯಾಗಿದ್ದಾಳೆಂದು ದೂರು ಸಲ್ಲಿಸಿದ್ದಾರೆ. ಸೋಮವಾರ ಗ್ರಾಮದ ಸೀಮಾಂತರದ ಬಾವಿಯಲ್ಲಿ ಶವ ಪತ್ತೆಯಾಗಿದೆ.
ಈ ಘಟನೆ ತಲ್ಲಣಗೊಳಿಸಿದ್ದು, ವರ್ಷದ ಹಿಂದೆ ಇದೇ ಆಳಂದ ತಾಲೂಕಿನ ಗ್ರಾಮವೊಂದರ ಕಬ್ಬಿನ ಗದ್ದೆಯಲ್ಲಿ ಅತ್ಯಾಚಾರಗೈದು ಕೊಲೆ ಮಾಡಲಾಗಿರುವ ಅಮಾನುಷ ಕೃತ್ಯ ಮಾಸುವ ಮುನ್ನವೇ ಈ ಘಟನೆ ನಡೆದಿರುವುದು ಮಾನವಂತ ಸಮಾಜ ತಲೆ ತಗ್ಗಿ ಸುವಂತಾಗಿದೆ.
ಅತ್ಯಾಚಾರ ಹಾಗೂ ಕೊಲೆ ಎಂದು ದೂರು ಸ್ವೀಕರಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ನಿರೀಕ್ಷಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಅತ್ಯಾಚಾರ ಹಾಗೂ ಕೊಲೆಗೈದ ಆರೋಪಗಳನ್ನು ಈ ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಕುಟುಂಬಸ್ಥರೊಡನೆ ಗ್ರಾಮಸ್ಥರು, ಸಮಾಜದ ಮುಖಂಡರು, ರಾಜಕೀಯ ನಾಯಕರು ಜಿಲ್ಲಾಧಿಕಾರಿ ಕಚೇರಿ ಎದರುಗಡೆ ಸೋಮವಾರ ಸಂಜೆ ಪ್ರತಿಭಟನೆ ನಡೆಸಿದರು.ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ ಪ್ರತಿಭಟನಾಕಾರರ ಬಳಿ ಬಂದು ಮನವಿ ಸ್ವೀಕರಿಸಿ ಆರೋಪಿಗಳನ್ನು ತಕ್ಷಣವೇ ಬಂಧಿಸುವುದಾಗಿ ತಿಳಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಭಗವಂತರಾಯಗೌಡ ಪಾಟೀಲ್, ಗುರುನಾಥ ಪೂಜಾರಿ, ಹರ್ಷಾನಂದ ಗುತ್ತೇದಾರ, ರವಿ ಪೂಜಾರಿ, ಭೀಮಾಶಂಕರ ಮಾಡ್ಯಾಳ, ಪರಮೇಶ್ವರ ಆಲಗೂಡ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.