ಆಳಂದ ಪ್ರಕರಣ; ಪೊಲೀಸರ ಹದ್ದಿನ ಕಣ್ಣು
Team Udayavani, Mar 3, 2022, 11:11 AM IST
ಆಳಂದ: ಪಟ್ಟಣದಲ್ಲಿ 144ನೇ ಕಲಂ ನಿಷೇಧಾಜ್ಞೆ ನಡುವೆ ಮಂಗಳವಾರ ಲಾಡ್ಲೆ ಮಶಾಕ್ ದರ್ಗಾದಲ್ಲಿ ಸಂದಲ್ ಮತ್ತು ರಾಘವಚೈತನ್ಯ ಲಿಂಗಕ್ಕೆ ಪೂಜೆ ಹಾಗೂ ಶುದ್ಧೀಕರಣ ಕೈಗೊಳ್ಳುವ ವಿಷಯಕ್ಕೆ ಉಲ್ಬಣಿಸಿದ್ದ ಪ್ರಕ್ಷುಬ್ಧ ಪರಿಸ್ಥಿತಿ ಹಿನ್ನೆಲೆಯಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ನಾಲ್ಕು ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದ್ದು, ಸಂಜೆವರೆಗೆ ಹಲವರ ಮನೆಗೆ ನುಗ್ಗಿ 167 ಜನರನ್ನು ಬಂಧಿಸಲಾಗಿದ್ದು, ಪೊಲೀಸ್ ಕಾರ್ಯಾಚರಣೆ ಮುಂದುವರಿದೆ. ಈ ನಡುವೆ ಮಾ.5ರವರೆಗೆ ನಿಷೇಧಾಜ್ಞೆ ಮುಂದುವರಿದ ಹಿನ್ನೆಲೆಯಲ್ಲಿ ಬುಧವಾರ ಪಟ್ಟಣದಲ್ಲಿ ಔಷಧ, ತರಕಾರಿ ವ್ಯಾಪಾರ ಬಿಟ್ಟರೆ ಇನ್ನಿತರ ವ್ಯಾಪಾರ-ವಹಿವಾಟು ನಡೆಯದೇ ಎಲ್ಲ ಅಂಗಡಿ, ಹೋಟೆಲ್‌ಗಳು ಮುಚ್ಚಿದ್ದವು. ಜನರ ಓಡಾಟವಿಲ್ಲದೆ ಪ್ರಮುಖ ರಸ್ತೆ, ಬಡಾವಣೆಗಳು ಬಿಕೋ ಎನ್ನುತ್ತಿವೆ.
ಲಾಡ್ಲೆಮಶಾಕ್ ದರ್ಗಾ, ಬಸ್ ನಿಲ್ದಾಣ, ಶ್ರೀರಾಮ ಮಾರುಕಟ್ಟೆ ಹಾಗೂ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಎಂದಿನಂತೆ ಸಾರಿಗೆ ಸಂಸ್ಥೆಯ ಬಸ್ ಸಂಚಾರವಿತ್ತು. ಆದರೆ ಜೀಪು, ಮ್ಯಾಕ್ಸಿಕ್ಯಾಬ್‌ಗಳು ಸಂಚರಿಸಲಿಲ್ಲ. ಮಂಗಳವಾರ ಘಟನೆ ಹೊರತುಪಡಿಸಿದರೆ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಪರಿಸ್ಥಿತಿ ಶಾಂತವಾಗಿದೆ. ಇನ್ನಿತರ ಆರೋಪಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.
ಪಟ್ಟಣದಲ್ಲಿ ಮಂಗಳವಾರ ಪರಿಸ್ಥಿತಿ ಅತಿ ಸೂಕ್ಷ್ಮವಾಗಿತ್ತು. ಈಗ ನಿಯಂತ್ರಣದಲ್ಲಿದೆ. ಇಂಥ ಘಟನೆ ಆಗಬಾರದಿತ್ತು. ಬುಧವಾರ ಪರಿಸ್ಥಿತಿ ಸಂಪೂರ್ಣ ತಿಳಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ಕು ಪ್ರಕರಣ ದಾಖಲಾಗಿದ್ದು 167 ಜನರನ್ನು ಪೊಲೀಸರು ಬಂಧಿಸಿದ್ದಾರೆ. ನಿಷೇಧಾಜ್ಞೆ ಮುಂದುವರಿಸಲಾಗಿದೆ. ನಾಗರಿಕರು ಶಾಂತಿ-ಸೌಹಾದರ್ತೆ ಕಾಪಾಡಬೇಕು. -ಯಲ್ಲಪ್ಪಾ ಸುಬೇದಾರ, ತಹಶೀಲ್ದಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.