ಅಮರಶಿಲ್ಪಿ ಜಕಣಾಚಾರಿ ಶ್ರೇಷ್ಠ ಶಿಲ್ಪಕಲಾಕಾರ: ದೊಡ್ಡೆಂದ್ರ ಶ್ರೀ
Team Udayavani, Jan 14, 2019, 7:18 AM IST
ಕಲಬುರಗಿ: ಅಮರಶಿಲ್ಪಿ ಜಕಣಾಚಾರಿ ಕಟ್ಟಿಗೆ, ಕಲ್ಲು ಬಂಡೆಗಳಿಂದ ತಾವು ತಯಾರಿಸಿದ ಶಿಲ್ಪಕಲೆಗಳ ಮೂಲಕ ಇಂದಿಗೂ ಜೀವಂತವಾಗಿದ್ದಾರೆ ಎಂದು ಸುಲೇಪೇಟ ದೊಡ್ಡೆಂದ್ರ ಮಹಾಸ್ವಾಮೀಜಿ ಹೇಳಿದರು.
ನಗರದಲ್ಲಿ ಹಮ್ಮಿಕೊಂಡಿದ್ದ ಅಮರಶಿಲ್ಪಿ ಜಕಣಾಚಾರಿಯವರ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಮರಶಿಲ್ಪಿ ಜಕಣಾಚಾರ್ಯರು ಉತ್ತಮ ಕಲಾಕೃತಿಗಳನ್ನು ನಿರ್ಮಿಸಿ ನಾಡಿನ ಅಲಂಕಾರ ಹೆಚ್ಚಿಸಿದ್ದಾರೆ. ಅವರ ಪರಿಶ್ರಮದ ಫಲವಾಗಿ ನಾಡಿನಾದ್ಯಂತ ಇರುವ ಕಲಾಕೃತಿಗಳನ್ನು ವೀಕ್ಷಿಸಲು ದೇಶ ವಿದೇಶಗಳಿಂದ ಯಾತ್ರಿಕರು ಆಗಮಿಸುವಂತೆ ಮಾಡಿದ್ದಾರೆ ಎಂದರು.
ಅಮರ ಶಿಲ್ಪಿ ಜಕಣಾಚಾರಿ ಅವರಂತಹ ಶಿಲ್ಪಿ ಇನ್ನು ಯಾರೂ ಜನಿಸಿಲ್ಲ. ಕಲ್ಲಿನಲ್ಲಿ ಕಸೂತಿ ಮಾಡಿ ಕಲ್ಲಹರಿಸಿ ಹೂ ಮಾಡಿದ ಮಹಾನ್ ವ್ಯಕ್ತಿ. ಬೇಲೂರು, ಹಳೆಬೀಡು, ಹಂಪಿ, ಐಹೊಳೆ, ಪಟ್ಟದಕಲ್ಲು ಮುಂತಾದ ಅನೇಕ ಯಾತ್ರಾ ಸ್ಥಳಗಳಲ್ಲಿ ಅವರು ಶಿಲೆಯಲ್ಲಿ ಜೀವಂತ ಕಲೆ ನಿರ್ಮಾಣ ಮಾಡಿದ್ದಾರೆ ಎಂದು ಹೇಳಿದರು. ಜಗತ್ ವೃತ್ತದಿಂದ ಸಂತ್ರಾಸವಾಡಿ ಕಾಳಿಕಾ ಮಂದಿರದವರೆಗೆ ಅಮರಶಿಲ್ಪಿ ಜಕಣಾಚಾರಿ ಭಾವಚಿತ್ರದ ಮೆರವಣಿಗೆ ನಡೆಯಿತು. ದೇವಿಂದ್ರಪ್ಪ ವಿಶ್ವಕರ್ಮ, ಅಮೃತ ಹಳ್ಳಿ, ಶರಣು ಎಂ. ಪಂಚಾಳ, ಈರಣ್ಣ ಕವಲಗಾ, ಸುಧಾಕರ ಮುತ್ಯಾನ ಬಬಲಾದ, ಶರಣು ರಾಮನಗರ, ಶರಣು ಫಿಲ್ಟರಬೆಡ್ ಸುಲ್ತಾನಪೂರ, ವಿಠಲರಾವ್ ಸುತಾರ, ಭೀಮರಾವ್ ಬಡಿಗೇರ, ದತ್ತಾತ್ರೇಯ ವಿಶ್ವಕರ್ಮ, ಮಲ್ಲಿಕಾರ್ಜುನ ದಣ್ಣೂರ, ಹಣಮಂತರಾವ್ ರಾಜಾಪೂರ, ನಾಗಮೂರ್ತಿ ದೇವನತೆಗನೂರ, ಸುಮೀತ ಆರ್. ಪಾಟೀಲ ಹಾಗೂ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.