ಅಂಬೇಡ್ಕರ್‌ ಭವನ ಕಟ್ಟಡ ಕಾಮಗಾರಿ ಮತ್ತೆ ಸ್ಥಗಿತ

ಮೂರು ವರ್ಷದಿಂದ ಕಟ್ಟಡ ಸ್ಮಾರಕದಂತೆ ಅನಾಥ

Team Udayavani, Jul 30, 2019, 9:57 AM IST

gb-tdy-4

ವಾಡಿ: ಕಳೆದ ಐದಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಅಂಬೇಡ್ಕರ್‌ ಭವನ ಕಟ್ಟಡ ಕಾಮಗಾರಿ ಸ್ಥಳದಲ್ಲಿ ನಿಂತ ಕೊಳಚೆ ನೀರು.

ವಾಡಿ: ಸುಮಾರು 12 ಕೋಟಿ ರೂ.ಗೂ ಹೆಚ್ಚು ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್‌ ಭವನ ಕಾಮಗಾರಿ ಕಳೆದ ಐದು ವರ್ಷಗಳಿಂದ ಕುಂಟುತ್ತ ಸಾಗಿದೆ. ಸಂಬಂಧಿಸಿದವರ ನಿರ್ಲಕ್ಷ್ಯಕ್ಕೆ ಗುರಿಯಾಗಿ ಕಟ್ಟಡ ಕಾಮಗಾರಿ ಸಂಪೂರ್ಣ ಸ್ಥಗಿತಗೊಂಡಿದೆ. ಸಂವಿಧಾನ ಶಿಲ್ಪಿ ಹೆಸರಿನ ಜಾಗ ಈಗ ಸಾರ್ವಜನಿಕ ಶೌಚಾಲ ಯವಾಗಿ ಮಾರ್ಪಟ್ಟಿದ್ದು ಬೇಸರದ ಸಂಗತಿ.

ಕಾಂಗ್ರೆಸ್‌ ಹಿರಿಯ ಮುಖಂಡ ಡಾ| ಮಲ್ಲಿಕಾರ್ಜುನ ಖರ್ಗೆ ಅವರು ಸಂಸದರಾಗಿದ್ದಾಗ ಪಟ್ಟಣದ ಇಂದಿರಾ ಕಾಲೋನಿ ಖಾಲಿ ಜಾಗದಲ್ಲಿ ಅಂಬೇಡ್ಕರ್‌ ಭವನ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ಹಾಕಿ ಅಭಿವೃದ್ಧಿಗೆ ಚಾಲನೆ ನೀಡಿದ್ದರು. ಮಾಜಿ ಸಚಿವ, ಹಾಲಿ ಶಾಸಕ ಪ್ರಿಯಾಂಕ್‌ ಖರ್ಗೆ ಇದಕ್ಕೆ ಸರಕಾರದ ಅನುದಾನ ಒದಗಿಸಿ ಭವನದ ಸುಂದರ ನೀಲನಕ್ಷೆ ಬಿಡುಗಡೆ ಮಾಡಿದ್ದರು. ಆರಂಭದಲ್ಲಿ ವೇಗದ ಗತಿ ಪಡೆದುಕೊಂಡಿದ್ದ ಕಾಮಗಾರಿ, ನಂತರದ ದಿನಗಳಲ್ಲಿ ಕುಂಟುತ್ತ ಸಾಗಿ ದಲಿತರ ಆಕ್ರೋಶಕ್ಕೆ ಗುರಿಯಾಯಿತು. ಸದ್ಯ ನೆಲ ಮಾಳಿಗೆ ಹಂತದ ಕಾಮಗಾರಿ ಪೂರ್ಣಗೊಂಡಿದೆ. ಮೊದಲನೇ ಮಹಡಿ ಕಾರ್ಯ ಆರಂಭಕ್ಕೂ ಮೊದಲೇ ಕಾರ್ಮಿಕರು ಇಲ್ಲಿಂದ ಕಾಲ್ಕಿತ್ತಿದ್ದು, ಮೂರು ವರ್ಷದಿಂದ ಕಟ್ಟಡ ಸ್ಮಾರಕದಂತೆ ಅನಾಥವಾಗಿ ನಿಂತಿದೆ.

ಅಂಬೇಡ್ಕರ್‌ ಭವನ ಅಭಿವೃದ್ಧಿ ಕಾಮಗಾರಿ ದೀರ್ಘ‌ಕಾಲ ಸ್ಥಗಿತಗೊಂಡ ಪರಿಣಾಮ ಮಳೆ ನೀರು ಮತ್ತು ಚರಂಡಿ ನೀರು ಕಟ್ಟದೊಳಗೆ ನುಗ್ಗಿ ಪಾಚಿಗಟ್ಟಿದೆ. ಸಾರ್ವಜನಿಕರು ರಾತ್ರಿ ವೇಳೆ ಮಲ ಮೂತ್ರ ವಿಸರ್ಜನೆ ಮಾಡುತ್ತಿದ್ದು, ಕಾಮಗಾರಿ ಜಾಗ ಗಬ್ಬೆದ್ದು ನಾರುತ್ತಿದೆ. ಹಂದಿಗಳು ವಾಸಸ್ಥಾನವನ್ನಾಗಿ ಮಾಡಿಕೊಂಡು ಪರಿಸರ ಕಲುಷಿತಗೊಳಿಸಿವೆ. ಕಟ್ಟಡ ಪೂರ್ಣಗೊಂಡು ಸಾಮಾಜಿಕ ಚಟುವಟಿಕೆಗಳ ಕೇಂದ್ರಸ್ಥಾನವಾಗಿ ಮಾನಸಿಕ ಆರೋಗ್ಯಕ್ಕೆ ಕಾರಣವಾಗಬೇಕಿದ್ದ ಅಂಬೇಡ್ಕರ್‌ ಭವನದ ಕಾಮಗಾರಿ ನನೆಗುದಿಗೆ ಬೀಳುವ ಮೂಲಕ ಅನಾರೋಗ್ಯದ ಗೂಡಾಗಿ ಪರಿವರ್ತನೆಯಾಗಿದೆ. ಕ್ಷೇತ್ರದ ಶಾಸಕ ಪ್ರಿಯಾಂಕ್‌ ಖರ್ಗೆ ಅವರು ಬಾಕಿ ಅನುದಾನ ಬಿಡುಗಡೆ ಮಾಡುವ ಮೂಲಕ ಭವನದ ಅಭಿವೃದ್ಧಿಗೆ ಮುಂದಾಗಬೇಕು ಎಂಬುದು ದಲಿತರ ಆಗ್ರಹವಾಗಿದೆ.

ಅಂಬೇಡ್ಕರ್‌ ಭವನ ಕಾಮಗಾರಿ ಸ್ಥಗಿತಗೊಳ್ಳಲು ಅನುದಾನ ಕೊರತೆಯೇ ಕಾರಣ ಎನ್ನಲಾಗುತ್ತಿದೆ. ಐದಾರು ವರ್ಷಗಳಿಂದ ಚಾಲನೆಯಲ್ಲಿರುವ ಕಾಮಗಾರಿ ಏಕಾಏಕಿ ಸ್ಥಗಿತಗೊಂಡಿದೆ. ಎರಡು ವರ್ಷಗಳಿಂದ ಅಧಿಕಾರಿಗಳು ಇತ್ತ ಸುಳಿದಿಲ್ಲ. ಅಂಬೇಡ್ಕರ್‌ ಹೆಸರಿನಲ್ಲಿರುವ ಕಟ್ಟಡದ ಜಾಗ ಜನರ ಶೌಚಕ್ಕೆ ಬಳಕೆಯಾಗುತ್ತಿದೆ. ಪ್ರಜ್ಞಾವಂತ ದಲಿತರು ತಲೆತಗ್ಗಿಸುವಂತಾಗಿದೆ. ಕೂಡಲೇ ಕಾಮಗಾರಿ ಆರಂಭಿಸದಿದ್ದರೆ ಹೋರಾಟಕ್ಕೆ ಕರೆ ನೀಡಲಾಗುವುದು.•ರವಿ ಬಡಿಗೇರ,ಕರಾದಸಂಸ ಸಂಚಾಲಕ

 

•ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.