ಈಡಿಗ ಸಮಾಜಕ್ಕೆ ನಿಗಮ ಮಂಡಳಿ ಘೋಷಿಸಿ
Team Udayavani, Feb 24, 2022, 12:28 PM IST
ಚಿಂಚೋಳಿ: ಆರ್ಯ ಈಡಿಗ ಸಮಾಜಕ್ಕೆ ನಿಗಮ ಮಂಡಳಿ ಘೋಷಿಸಿ, 500 ಕೋಟಿ ರೂ. ಮೀಸಲಿಡಬೇಕು ಎಂದು ಆರ್ಯ ಈಡಿಗ ಮಹಾ ಮಂಡಳಿ ರಾಷ್ಟ್ರೀಯ ಅಧ್ಯಕ್ಷ ಡಾ|ಪ್ರಣವಾನಂದ ಸ್ವಾಮೀಜಿ ಸರ್ಕಾರಕ್ಕೆ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಯ ಈಡಿಗ ಸಮಾಜ ಕುಲಕಸುಬಾದ ಸೇಂದಿ ಇಳಿಸುವ ಕೆಲಸ ಮಾಡುತ್ತಿದ್ದಾಗ 1990ರಲ್ಲಿ ಸರ್ಕಾರ ಸೇಂದಿ ಇಳಿಸುವುದನ್ನು ನಿಷೇಧಿಸಿತು. ಈಗ ಪರ್ಯಾಯವಾಗಿ ಯಾವ ಕಸುಬು ಇಲ್ಲದಂತಾಗಿ. ಆರ್ಥಿಕ ಸಂಕಷ್ಟ ಉಂಟಾಗಿದೆ. ಸದ್ಯ 16 ಶಾಸಕರು, ಆರು ಸಂಸದರು ಇದ್ದರೂ ಸಮುದಾಯ ತೀರಾ ಹಿಂದುಳಿದಿದೆ ಎಂದರು.
ಮಾಜಿ ಮುಖ್ಯಮಂತ್ರಿ ದಿ| ಎಸ್. ಬಂಗಾರಪ್ಪ ನಂತರ ನಮ್ಮ ಸಮಾಜಕ್ಕೆ ಸರ್ಕಾರ ಯಾವುದೇ ನ್ಯಾಯ ದೊರಕಿಸುವ ಪ್ರಯತ್ನ ಮಾಡುತ್ತಿಲ್ಲ. ರಾಜ್ಯ ಸರ್ಕಾರ ಈಡಿಗ ಸಮಾಜವನ್ನು ಕಡೆಗಾಣಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
28 ಒಳ ಪಂಗಡ ಹೊಂದಿರುವ ಆರ್ಯ ಈಡಿಗ ಸಮುದಾಯ 78ಲಕ್ಷ ಜನಸಂಖ್ಯೆ ಹೊಂದಿದೆ. ಆಡಳಿತರೂಢ ಬಿಜೆಪಿ ಸರ್ಕಾರದಲ್ಲಿ ಏಳು ಜನ ಶಾಸಕರು ಮತ್ತು ಇಬ್ಬರು ಸಚಿವರು ಇದ್ದಾರೆ. ಈಡಿಗ ಸಮುದಾಯಕ್ಕೆ ನಿಗಮ ಮಂಡಳಿ ಸ್ಥಾಪನೆ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಬೇಡಿಕೆ ಈಡೇರಿಲ್ಲ ಎಂದರು.
108 ಅಡಿ ಎತ್ತರದ ಬ್ರಹ್ಮಶ್ರೀ ನಾರಾಯಣಗುರು ಮೂರ್ತಿ ನಿರ್ಮಾಣಕ್ಕೆ, ಹೆಂಡದ ಮಾರಯ್ಯ ಪೀಠ, ರೇಣುಕಾ ಯಲ್ಲಮ್ಮದೇವಿ ಪೀಠಕ್ಕೆ ಸರಕಾರ 10 ಕೋಟಿ ರೂ. ಮಂಜೂರಿ ಮಾಡಬೇಕೆಂದು ಒತ್ತಾಯಿಸಿದರು.
ಮುಖಂಡರಾದ ಚಂದ್ರಶೇಖರ ಗುತ್ತೇದಾರ, ಮಹೇಶ ಗುತ್ತೇದಾರ, ಭೀಮಯ್ಯ ಗುತ್ತೇದಾರ, ಸಿದ್ಧಯ್ಯಗೌಡ ಮಿರಿಯಾಣ, ನರವೀರ ಗುತ್ತೇದಾರ, ಗುಂಡಯ್ಯ ಎಂಪಳ್ಳಿ, ಉದಯಕುಮಾರ ದೇಗಲಮಡಿ, ರಾಘವೇಂದ್ರ ಕಲ್ಲೂರ, ಮೋಹನ ಗುತ್ತೇದಾರ, ಪ್ರಕಾಶ ಗುತ್ತೇದಾರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.