![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 8, 2020, 1:04 PM IST
ಕಲಬುರಗಿ: ಕೋವಿಡ್ -19 ಸೋಂಕಿಗೆ ದೇಶದಲ್ಲೇ ಮೊದಲು ಬಲಿಯಾದ ಕಲಬುರಗಿಯಲ್ಲಿ ಮತ್ತೋರ್ವ ಸಾವನ್ನಪ್ಪಿದ್ದಾನೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 65 ವರ್ಷದ ವ್ಯಕ್ತಿ ಮಹಾಮಾರಿ ಸೋಂಕಿಗೆ ಬಲಿಯಾಗಿದ್ದಾನೆ.
ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈತನನ್ನು ಕೋವಿಡ್-19 ರೋಗಿಗಳಿಗೆ ಮೀಸಲಿಟ್ಟಿರುವ ಇಎಸ್ಐ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿ ಈತನ ಸಾವನ್ನಪ್ಪಿದ್ದಾನೆ.
ಖಾಸಗಿ ಆಸ್ಪತ್ರೆ ಸೀಜ್: ಸಾವಿಗೂ ಮುನ್ನ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದ ಆಸ್ಪತ್ರೆಯನ್ನು ಜಿಲ್ಲಾಡಳಿತ ಸೀಜ್ ಮಾಡಿದೆ. ಅಲ್ಲಿನ ವೈದ್ಯರು ಮತ್ತು ಸಿಬ್ಬಂದಿ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ವ್ಯಕ್ತಿಗೆ ಕೋವಿಡ್-19 ಲಕ್ಷಣಗಳು ಕಂಡು ಬಂದರೂ ಆಸ್ಪತ್ರೆಯವರು ಜಿಲ್ಲಾಡಳಿತದ ಗಮನಕ್ಕೆ ತಂದಿರಲಿಲ್ಲ ಎಂದು ಹೇಳಲಾಗಿದೆ.
ಎರಡನೇ ಸಾವು: ಸೌದಿ ಅರೇಬಿಯಾದಿಂದ ಮರಳಿದ್ದ 76 ವರ್ಷದ ವೃದ್ದ ಮಾ.10ರಂದು ಸಾವನ್ನಪ್ಪಿದ್ದ. ಸಾವಿಗೂ ಆತನ ಗಂಟಲು ದ್ರಾವಣ ಮಾದರಿಯನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಮಾ.12ರಂದು ಹೊರ ಬಂದ ವರದಿಯಲ್ಲಿ ವೃದ್ಧ ಕೋವಿಡ್- 19 ಸೋಂಕಿನಿಂದ ಸಾವನ್ನಪ್ಪಿದ್ದು ಬಹಿರಂಗಗೊಂಡಿತ್ತು. ಈ ಮೂಲಕ ದೇಶದಲ್ಲೇ ಕೋವಿಡ್-19ಗೆ ಮೊದಲ ಸಾವು ದಾಖಲಾಗಿತ್ತು.
ಇದಾದ 29 ದಿನದೊಳಗೆ ಜಿಲ್ಲೆಯಲ್ಲಿ ಎರಡನೇ ಸಾವು ದಾಖಲಾಗಿದೆ. ಆತಂಕಕಾರಿ ಅಂಶವೆಂದರೆ ಈತ ಸೋಂಕಿತರ ಸಂಪರ್ಕಕ್ಕೆ ಬಂದಿರುವ ಬಗ್ಗೆ ಮಾಹಿತಿ ಇಲ್ಲ. ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದಾನೆ ಎಂದು ಸರ್ಕಾರ ಹೇಳಿದೆ.
ಸೋಂಕಿತನ ತಾಯಿಗೂ ಕೋವಿಡ್-19: ಜಿಲ್ಲೆಯಲ್ಲಿ ಇಂದು ಮತ್ತೊಂದು ಹೊಸ ಕೋವಿಡ್-19 ಪ್ರಕರಣ ಕೂಡ ಪತ್ತೆಯಾಗಿದೆ. ಕಲಬುರಗಿ ನಗರದ 57 ವರ್ಷದ ವ್ಯಕ್ತಿಗೆ ಮಂಗಳವಾರ ಸೋಂಕು ದೃಢಪಟ್ಟಿತ್ತು. ಇವತ್ತು ಆತನ ತಾಯಿಗೆ ಕೋವಿಡ್-19 ಇರೋದು ಖಚಿತವಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ ಕೋವಿಡ್-19 ಪೀಡಿತರ ಸಂಖ್ಯೆ 9ಕ್ಕೆ ಏರಿಕೆ ಆಗಿದೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.