ಭಾವಾಂತರ ಯೋಜನೆಗೆ ಆಗ್ರಹಿಸಿ ಎಪಿಎಂಸಿ ಬಂದ್-ಪ್ರತಿಭಟನೆ
Team Udayavani, Jan 8, 2019, 11:52 AM IST
ಕಲಬುರಗಿ: ತೊಗರಿ ಸೇರಿದಂತೆ ಇತರ ದವಸ ಧಾನ್ಯಗಳನ್ನು ಭಾವಾಂತರ ಯೋಜನೆಯಡಿ ಸೇರಿಸುವ ಮೂಲಕ ರೈತರು ಹಾಗೂ ವ್ಯಾಪಾರೀಗಳ ಜತೆಗೆ ದಾಲ್‌ಮಿಲ್‌ಗಳ ಹಿತ ಕಾಪಾಡುವಂತೆ ಆಗ್ರಹಿಸಿ ನಗರದ ನೆಹರು ಗಂಜ್‌ನ ಎಲ್ಲ ಎಪಿಎಂಸಿ ಎಲ್ಲ ವಹಿವಾಟು ಬಂದ್ ಮಾಡಿ ವ್ಯಾಪಾರಿಗಳು, ದಾಲ್‌ಮಿಲ್‌ದವರು ಹಾಗೂ ರೈತ ಸಂಘಟನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಭಾವಾಂತರ ಯೋಜನೆ ಜಾರಿಗೆ ಆಗ್ರಹಿಸಿ ಈಗಾಗಲೇ ಮುಖ್ಯಮಂತ್ರಿ ಸೇರಿದಂತೆ ಇತರ ಸಚಿವರು ಹಾಗೂ ಅಧಿಕಾರಿಗಳ ಜತೆಗೆ ಇತರ ಸಂಬಂಧಪಟ್ಟವರ ಗಮನಕ್ಕೆ ತರಲಾಗಿದ್ದರೂ ಬೇಡಿಕೆ ಕಾರ್ಯರೂಪಕ್ಕೆ ಬಾರದೇ ಇರುವುದರಿಂದ ಸೋಮವಾರ ರಾಜ್ಯದ ಅರ್ಧಕ ಭಾಗಕ್ಕಿಂತಲೂ ಹೆಚ್ಚಿನ ಭಾಗದಲ್ಲಿ ಎಪಿಎಂಸಿ ಬಂದ್ ಮಾಡಿ ಪ್ರತಿಭಟನೆಗೆ ಇಳಿಯಲಾಗಿದೆ. ಈಗಲಾದರೂ ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದೇ ಮೀನಾ ಮೇಷ ಏಣಿಸಲು ಮುಂದಾದರೆ ಹೋರಾಟ ಮತ್ತಷ್ಟು ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ರೈತ ಸಂಘಗಳು, ಕೃಷಿ ಮಾರುಕಟ್ಟೆ ವ್ಯಾಪಾರಸ್ಥರು ಹಾಗೂ ದಾಲ್‌ಮಿಲ್ ಮಾಲೀಕರು, ಹೈದರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಇತರ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ನೆಹರು ಗಂಜ್‌ನ ಹನುಮಾನ ಮಂದಿರದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಚ್‌ಕೆಸಿಸಿಐ ಅಧ್ಯಕ್ಷ ಅಮರನಾಥ ಪಾಟೀಲ, ಗುಲಬರ್ಗಾ ದಾಲ್‌ಮಿಲ್ಲರ್ಸ್ ಅಸೋಸಿಯೇಶನ್ ಅಧ್ಯಕ್ಷ ಚಿತಂಬರರಾವ್ ಪಾಟೀಲ ಮರಗುತ್ತಿ, ಸರ್ಕಾರ ಈಗಲೇ ಭಾವಾಂತರ ಯೋಜನೆಗೆ ತೊಗರಿ ಅಳವಡಿಸುವುದರ ಮೂಲಕ ರೈತರಿಗೆ ಹಾಗೂ ವ್ಯಾಪಾರಿಗಳನ್ನು ಸಂರಕ್ಷಿಸಬೇಕು. ಬೆಂಬಲ ಬೆಲೆಯಲ್ಲಿ ಖರೀದಿ ಮಾಡುವುದರಕ್ಕಿಂತ ಭಾವಾಂತರ ಯೋಜನೆಯೇ ಸರಳವಾಗಿದೆ.
ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು. ಬೆಂಬಲ ಬೆಲೆಯಲ್ಲಿ ಶೇ. 25ರಷ್ಟು ತೊಗರಿ ಮಾತ್ರ ಖರೀದಿಸಲಾಗುತ್ತಿದೆ. ಈ ಮೂಲಕ ರೈತರನ್ನು ಶೋಷಣೆ ಮಾಡುವಂತಾಗುತ್ತಿದೆ. ಹೀಗಾಗಿ ಎಲ್ಲರಿಗೂ ಅನುಕೂಲವಾಗಿರುವ ಭಾವಾಂತರ ಯೋಜನೆ ಕಾರ್ಯರೂಪಕ್ಕೆ ತಂದು ರೈತರು, ವ್ಯಾಪಾರಿಗಳ ಹಿತ ಕಾಪಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಮುಖಂಡರಾದ ಬಸವರಾಜ ಇಂಗಿನ್, ಶಿವಶರಣಪ್ಪ ನಿಗ್ಗುಡಗಿ, ಎಚ್‌ಕೆಸಿಸಿಐ ಗೌರವ ಕಾರ್ಯದರ್ಶಿ ಶಶಿಕಾಂತ ಬಿ. ಪಾಟೀಲ, ಎಪಿಎಂಸಿ ಉಪ ಸಮಿತಿ ಅಧ್ಯಕ್ಷ ಶಿವರಾಜ ಇಂಗಿನಶೆಟ್ಟಿ, ಪ್ರಮುಖ ಪದಾಧಿಕಾರಿಗಳಾದ ಚನ್ನಮಲ್ಲಿಕಾರ್ಜುನ ಅಕ್ಕಿ, ಶ್ರೀಮಂತ ಉದನೂರ, ಶಿವಕುಮಾರ ಘಂಟಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Sullia: ಜಾಕ್‌ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.