ಎಪಿಎಂಸಿ ಚುನಾವಣೆ ಸೆಮಿಫೈನಲ್ ಇದ್ದಂತೆ
Team Udayavani, Feb 17, 2017, 3:33 PM IST
ಸೇಡಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಈಗ ನಡೆಯಲಿರುವ ಎಪಿಎಂಸಿ ಚುನಾವಣೆ ಸೆಮಿಫೈನಲ್ ಇದ್ದಂತೆ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರಾಜಕುಮಾರ ಪಾಟೀಲ ತೆಲ್ಕೂರ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ತಾಲೂಕು ಬಿಜೆಪಿ ಘಟಕ ಆಯೋಜಿಸಿದ್ದ ಎಪಿಎಂಸಿ ಚುನಾವಣೆ ಪೂರ್ವಭಾವಿ ಸಭೆ ಮತ್ತು ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು.
ಮುಂದಿನ ವಿಧಾನಸಭೆ ಚುನಾವಣೆ ಎಪಿಎಂಸಿ ಚುನಾವಣೆ ಫಲಿತಾಂಶದ ಮೇಲೆ ಅವಲಂಬಿತವಾಗುತ್ತದೆ. ಆಯಾ ಕ್ಷೇತ್ರಗಳ ಜನರ ಅಭಿಪ್ರಾಯದ ಮೇರೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಉದ್ದೇಶ ಹೊಂದಲಾಗಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು.
ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆ, ರೈತರ ಶ್ರೇಯಸ್ಸಿಗಾಗಿ ಜಾರಿಗೊಳಿಸಿರುವ ಯೋಜನೆಗಳನ್ನು ಪ್ರತಿ ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ನಡೆದಿದೆ ಎಂದು ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಮಿಷನ್ 150 ಕನಸು ನನಸು ಮಾಡುವ ಮಹತ್ತರ ಜವಾಬ್ದಾರಿ ಪ್ರತಿಯೊಬ್ಬ ಪಕ್ಷದ ಕಾರ್ಯಕರ್ತನ ಮೇಲಿದೆ.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಕೇವಲ ಕಾಲಹರಣ ಮಾಡುತ್ತಿದೆ. ಇಂತಹ ಸರ್ಕಾರ ಕಿತ್ತೂಗೆಯುವ ಪಣ ತೊಡಬೇಕು ಎಂದು ಹೇಳಿದರು. ಮಾಜಿ ಉಪ ಸಭಾಪತಿ ಚಂದ್ರಶೇಖರರೆಡ್ಡಿ ದೇಶಮುಖ ಮದನಾ, ಮುಖಂಡ ಬಸವರಾಜ ರೇವಗೊಂಡ ಮಾತನಾಡಿದರು.
ಪಕ್ಷದ ತಾಲೂಕು ಅಧ್ಯಕ್ಷ ನಾಗಪ್ಪ ಕೊಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ ನಿಲಂಗಿ, ನಗರಾಧ್ಯಕ್ಷ ಅನೀಲ ಐನಾಪುರ, ಜಿಪಂ ಮಾಜಿ ಸದಸ್ಯ ಶ್ರೀನಾಥ ಪಿಲ್ಲಿ, ಪುರಸಭೆ ಅಧ್ಯಕ್ಷೆ ಮಲ್ಲಮ್ಮ ಚವ್ಹಾಣ, ಉಪಾಧ್ಯಕ್ಷೆ ಕಮಲಾಬಾಯಿ ಹೂಗಾರ, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ನಾಗರೆಡ್ಡಿ ಮದನಾ,
ತಾಲೂಕು ಅಧ್ಯಕ್ಷ ಡಾ| ಮುರುಗೇಂದ್ರರೆಡ್ಡಿ ಬಿಲಾಕಲ್, ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ಗಂಗಮ್ಮ ನಿಷ್ಠಿ, ತಾಲೂಕು ಅಧ್ಯಕ್ಷೆ ಪಲ್ಲವಿ ಪಾಟೀಲ, ಮುಖಂಡರಾದ ಚನ್ನಬಸಪ್ಪ ನಿರ್ಣಿ, ಡಾ| ಮೋಹನರೆಡ್ಡಿ ಇಟಕಾಲ, ಡಾ| ಸಿರಾಜೋದ್ದಿನ್ ಇದ್ದರು. ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿ ಓಂಪ್ರಕಾಶ ಪಾಟೀಲ ಸ್ವಾಗತಿಸಿದರು. ಹಣಮಂತರೆಡ್ಡಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
MUST WATCH
ಹೊಸ ಸೇರ್ಪಡೆ
C.T.Ravi ಪ್ರಕರಣ ಸಿಐಡಿಗೆ ನೀಡಿದ್ದಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಆಕ್ಷೇಪ
Donald Trump ಸೋಲಿಸುತ್ತಿದ್ದೆ, ಪಕ್ಷಕ್ಕಾಗಿ ಹಿಂದೆ ಸರಿದೆ: ಅಧ್ಯಕ್ಷ ಜೋ ಬೈಡೆನ್
ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.