371ನೇ ಕಲಂ ಸಮರ್ಪಕ ಜಾರಿಗೊಳಿಸಿ
Team Udayavani, Dec 20, 2018, 11:58 AM IST
ಕಲಬುರಗಿ: ಹೈದ್ರಾಬಾದ-ಕರ್ನಾಟಕ ಭಾಗಕ್ಕೆ ಜಾರಿಯಾಗಿರುವ ವಿಶೇಷ ಸ್ಥಾನಮಾನ 371 (ಜೆ)ನೇ ಕಲಂನ್ನು ಸಂಪೂರ್ಣ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಅಹಿಂದ ಚಿಂತರ ವೇದಿಕೆ ವತಿಯಿಂದ ಬುಧವಾರ
ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
371 (ಜೆ)ನೇ ಕಲಂ ಜಾರಿಯಾಗಿ ಐದು ವರ್ಷಗಳಾಗುತ್ತಿದೆ. ಆದರೂ, ಸಂವಿಧಾನ ಬದ್ಧವಾಗಿ ಅನುಷ್ಠಾನಗೊಳಿಸದೇ ಈ ಭಾಗದ ಅಭಿವೃದ್ಧಿಯಲ್ಲಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ಈ ಭಾಗದಲ್ಲಿ ನೇಮಕಾತಿ ಬಗ್ಗೆ ಸುಳ್ಳು ಮಾಹಿತಿ ನೀಡಿ ಜನರ ದಾರಿ ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿದರು.
ಇತ್ತೀಚೆಗೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳು ಆಯಾ ಇಲಾಖೆಯಲ್ಲಿ ಖಾಲಿ ಇರುವ ಮಾಹಿತಿ ಪಟ್ಟಿ ಕಳಿಸಿಕೊಟ್ಟಿದ್ದಾರೆ. ಇದರ ಬದಲು ಆಯಾ ಇಲಾಖೆಯಲ್ಲಿ 371 (ಜೆ)ನೇ ಕಲಂ ಅನುಷ್ಠಾನವಾಗಿರುವ ಬಗ್ಗೆ ಪರಿಶೀಲನೆ ನಡೆಸಿ, ಅನುಷ್ಠಾನ ಪಾಲಿಸದೇ ಇರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಖಾಲಿ ಹುದ್ದೆಗಳ ಪಟ್ಟಿ ಸಂಪೂರ್ಣ ದೋಷ ಪೂರಿತವಾಗಿದ್ದು, ಅಂಕಿ-ಅಂಶಗಳು ವಾಸ್ತವಕ್ಕೆ ದೂರವಾಗಿವೆ ಎಂದು ದೂರಿದರು.
ಹೈ.ಕ ಪ್ರದೇಶಾಭಿವೃದ್ಧಿ ಮಂಡಳಿಗೆ ಇಲ್ಲಿಯವರೆಗೆ ಘೋಷಿಸಿದ ಅನುದಾನ ಬಿಡುಗಡೆಗೊಳಿಸದೇ ಸರ್ಕಾರ ವಂಚಿಸುತ್ತ ಬಂದಿದೆ. ಕಳೆದ 2017-2018ನೇ ಸಾಲಿನ ಬಜೆಟ್‌ನಲ್ಲಿ 1,500 ಕೋಟಿ ರೂ.ಗಳ ಅನುದಾನ ಘೋಷಣೆ ಮಾಡಿ, ಮಂಡಳಿಗೆ ಒಂದು ಸಾವಿರ ಕೋಟಿ ರೂ. ಮಾತ್ರ ನಿಗದಿಗೊಳಿಸಿದ್ದು ಖಂಡನೀಯ ಎಂದು ಪ್ರತಿಭಟನಾಕಾರರು
ಕಿಡಿಕಾರಿದರು.
371 (ಜೆ) ಕಲಂ ನಿಯಮದಂತೆ ಖಾಲಿ ಇರುವ ಹುದ್ದೆಗಳನ್ನು ಗುರುತಿಸಿ ನೇಮಕಾತಿ ಮಾಡಬೇಕು ಮತ್ತು ಎಚ್‌ಕೆಆರ್‌ಡಿಬಿಗೆ ನಿಗದಿ ಪಡಿಸಿದ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ವೇದಿಕೆ
ರಾಜ್ಯಾಧ್ಯಕ್ಷ ಸಾಯಿಬಣ್ಣ ಜಮಾದಾರ, ರಮೇಶ ಹಡಪದ, ಸಂಜು ಹೊಡಲಕರ, ರಾಚಣ್ಣ ಯಡ್ರಾಮಿ, ಇಸ್ಮಾಯಿಲ್ ಮಾಲಗತ್ತಿ, ರಾಜು ನೂಲಕರ, ವಿಶ್ವನಾಥ ಮದನಕರ, ಕೈಲಾಶ್ ಮೇಟಿ ಮುಂತಾದವರು ಪಾಲ್ಗೊಂಡಿದ್ದರು.
ಸರ್ಕಾರಕ್ಕೆ ಪ್ರಸ್ತಾವನೆ ಪಶು ಸಂಗೋಪನಾ ಇಲಾಖೆ ನಾಲ್ಕೂ ಡಿಡಿ ಹುದ್ದೆ ಖಾಲಿ ಇರುವ ಕುರಿತು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪ್ರವಾಸೋದ್ಯಮ ಸೇರಿದಂತೆ ಜಿಲ್ಲೆಯಲ್ಲಿ ಖಾಲಿ ಇರುವ ಜಿಲ್ಲಾ ಮಟ್ಟದ ಉಪನಿರ್ದೇಶಕ ಹುದ್ದೆಗಳ ನಿಯೋಜನೆ ಸಂಬಂಧ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಕಳುಹಿಸಲಾಗಿದೆ.
ಆರ್. ವೆಂಕಟೇಶಕುಮಾರ, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.