371ನೇ (ಜೆ) ಕಲಂ ವರದಾನ
Team Udayavani, Sep 4, 2017, 10:49 AM IST
ಚಿಂಚೋಳಿ: ಮಾಜಿ ಸಚಿವ ವೈಜನಾಥ ಪಾಟೀಲ ಅವರ ಹೋರಾಟದ ಫಲವಾಗಿ ಸಂವಿಧಾನದ 371ನೇ(ಜೆ) ಕಲಂ ತಿದ್ದಪಡಿ ಹೈದರಾಬಾದ ಕರ್ನಾಟಕ ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ವರದಾನವಾಗಿದೆ. ಇದರ ಪರಿಣಾಮದಿಂದಾಗಿ ಚಿಂಚೋಳಿ ಮೀಸಲು ವಿಧಾನಸಭಾ ಮತಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳು ಪ್ರಗತಿಯಲ್ಲಿವೆ ಎಂದು ಸಂಸದೀಯ ಕಾರ್ಯದರ್ಶಿ ಡಾ|ಉಮೇಶ ಜಾಧವ ಹೇಳಿದರು.
ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕ್ರೀಡೆ, ಸಾಂಸ್ಕೃತಿಕ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ
ವಿದ್ಯಾರ್ಥಿ ಸಂಘ ಉದ್ಘಾಟಿಸಿ ಅವರು ಮಾತನಾಡಿದರು.
ಕಲಂ 371ನೇ (ಜೆ) ಜಾರಿಯಿಂದಾಗಿ ಹಿಂದುಳಿದ ಹೈದರಾಬಾದ ಕರ್ನಾಟಕ ಪ್ರದೇಶದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ತಾಲೂಕಿನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕಾಗಿ ಕಲಬುರಗಿ, ಬೀದರ, ಸೇಡಂ, ಯಾದಗಿರಿಗೆ ಹೋಗಬೇಕಾಗಿತ್ತು. ಆರ್ಥಿಕ ಸಮಸ್ಯೆಗಳಿಂದಾಗಿ ಹೋಗಲಾಗದೇ ಮಧ್ಯೆದಲ್ಲಿಯೇ
ಶಿಕ್ಷಣ ಮೊಟಕುಗೊಳಿಸುವಂತಾಗಿತ್ತು. ಇದನ್ನು ಅರಿತು ಸಾವಿರಾರು ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಎಚ್‌ಕೆಆರ್‌ಡಿಬಿ ಅನುದಾನದಿಂದ ಚಿಂಚೋಳಿಯಲ್ಲಿ ಪ್ರಥಮ ದರ್ಜೆ ಕಾಲೇಜಿಗೆ ವಿವಿಧ ಸೌಕರ್ಯ ಒದಗಿಸಲು 2
ಕೋಟಿ ರೂ. ಮಂಜೂರು ಮಾಡಲಾಗಿದೆ. ಅಲ್ಲದೇ 11 ಕೋಣೆ ಮತ್ತು ಕಂಪ್ಯೂಟರ್, ಡೆಸ್ಕ್, ಅಟದ ಮೈದಾನ, ಪೀಠೊಪಕರಣ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಿದೆ ಎಂದು ಹೇಳಿದರು.
ಜಿಪಂ ಸದಸ್ಯ ಗೌತಮ ವೈಜನಾಥ ಪಾಟೀಲ, ಕಾಡಾ ನಿರ್ದೇಶಕ ಕೆ.ಎಂ. ಬಾರಿ ಮಾತನಾಡಿದರು. ತಾಪಂ
ಅಧ್ಯಕ್ಷೆ ರೇಣುಕಾ ಅಶೋಕ ಚವ್ಹಾಣ, ತಾಪಂ ಅಧಿಕಾರಿ ಅನೀಲಕುಮಾರ ರಾಠೊಡ, ವಿಶ್ವಕರ್ಮ ಇದ್ದರು.
ಪ್ರಾಚಾರ್ಯ ಶ್ರೀನಿವಾಸ ನಾಯನೋರ ಸ್ವಾಗತಿಸಿದರು. ಮಂಜುನಾಥ ದೇಶಪಾಂಡೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.