ಬಾಕಿ ವೇತನಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಧರಣಿ
Team Udayavani, Sep 3, 2022, 2:14 PM IST
ಕಲಬುರಗಿ: ಬಾಕಿ ವೇತನವೂ ಸೇರಿದಂತೆ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯ ಕರ್ತರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನಾ ಧರಣಿ ನಡೆಸಿದರು.
ಪ್ರತಿಭಟನೆಕಾರರು ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಂಘದ ಮುಖಂಡರು, ನಮ್ಮ ಬಾಕಿ ವೇತನ ಸೇರಿದಂತೆ ಇತರೆ ಸಮಸ್ಯೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಈಗಾಗಲೇ 15 ಬಾರಿ ಇಲಾಖೆಗೆ ಮನವಿ ಪತ್ರ ಸಲ್ಲಿಸಲಾಗಿದೆ. ಅಲ್ಲದೇ ಎರಡು ಬಾರಿ ಕುಂದು ಕೊರತೆ ಸಭೆಯನ್ನು ಮಾಡಲಾಗಿದೆ. ಆದರೂ ನಮ್ಮ ಸಮಸ್ಯೆಗಳು ಪರಿಹಾರ ವಾಗಿಲ್ಲ ಎಂದರು.
ಸುಮಾರು 2019-2020ರಿಂದಲೇ ನೂರಾರು ಆಶಾ ಕಾರ್ಯಕರ್ತೆಯರ ವೇತನವು ಬಾಕಿ ಉಳಿದಿದೆ. ಇತ್ತೀಚೆಯ ದಿನಗಳಲ್ಲಿ ಹಲವಾರು ಆಶಾಗಳ ವೇತನ ಬಂದಿಲ್ಲ. ಇವುಗಳ ಕುರಿತು ಇಲಾಖೆಗೆ ವೇತನ ಬಾಕಿ ಇರುವ ಆಶಾಗಳ ಪಟ್ಟಿಯನ್ನು ಸಲ್ಲಿಸಲಾಗಿದೆ. ಇಲಾಖೆಯಿಂದ ಬಾಕಿ ಇರುವ ವೇತನವನ್ನು ಪಾವತಿಸುವುದಾಗಿ ಒಪ್ಪಿಕೊಂಡು ಕೊಡುವುದಾಗಿ ಹೇಳುತ್ತಲೇ ದಿನಗಳನ್ನು ಮುಂದೂಡುತ್ತಿದ್ದಾರೆ. ಇನ್ನೊಂದೆಡೆ ಆಶಾಗಳು ನಿರಂತರವಾಗಿ ಕೆಲಸಗಳನ್ನು ಮಾಡುತ್ತಿದ್ದರೂ ಹಣ ಬರುತ್ತಿಲ್ಲ. ಮತ್ತೂಂದೆಡೆ ಆಶಾಗಳಿಲ್ಲದೇ ಇನ್ನಿತರ ಕೆಲಸಗಳಿಗೆ ಒತ್ತಾಯಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಘದ ಜಿಲ್ಲಾ ಸಂಚಾಲಕ ವಿ.ಜಿ. ದೇಸಾಯಿ, ಮುಖಂಡೆ ಶಿವಲಿಂಗಮ್ಮ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.