ವಿದ್ಯಾರ್ಥಿನಿಯ ಮೇಲೆ ಸಂಬಂಧಿಯಿಂದ ಅತ್ಯಾಚಾರ ಯತ್ನ: ಧೃತಿಗೆಡದೆ ಪರೀಕ್ಷೆ ಬರೆದ ದಿಟ್ಟೆ
Team Udayavani, Jun 27, 2020, 12:32 PM IST
ಕಲಬುರಗಿ: ಜಿಲ್ಲೆಯಲ್ಲಿ ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಯತ್ನಿಸಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಮಲಾಪೂರ ತಾಲೂಕಿನ ತಾಂಡಾವೊಂದರಲ್ಲಿ ಜೂ.24ರಂದು ರಾತ್ರಿ ಈ ಘಟನೆ ನಡೆದಿದ್ದು, 16 ವರ್ಷದ ವಿದ್ಯಾರ್ಥಿನಿ ಮೇಲೆ 25 ವರ್ಷದ ವಿವಾಹಿತ ರಾಮು ಚವ್ಹಾಣ್ ಎಂಬಾತ ಹೀನ ಕೃತ್ಯಕ್ಕೆ ಯತ್ನಿಸಿದ್ದಾನೆ.
ಹಾಸ್ಟೆಲ್ ನಲ್ಲಿದ್ದು ಓದುತ್ತಿದ್ದ ವಿದ್ಯಾರ್ಥಿನಿ ಕೋವಿಡ್ ಹಿನ್ನೆಲೆಯಲ್ಲಿ ಮನೆಗೆ ಬಂದಿದ್ದಳು. ಜೂ.25ರಂದು ಪರೀಕ್ಷೆ ಇದ್ದ ಕಾರಣ ರಾತ್ರಿಯವರೆಗೆ ಮನೆ ಅಂಗಳದಲ್ಲಿ ಓದಿ ಅಲ್ಲಿಯೇ ಮಲಗಿಕೊಂಡಿದ್ದಳು. ಈ ವೇಳೆ ರಾತ್ರಿ 11:30ರ ಸುಮಾರಿಗೆ ಆರೋಪಿ ರಾಮು ವಿದ್ಯಾರ್ಥಿನಿಯ ಬಾಯಿ ಮುಚ್ಚಿ ಪಕ್ಕದ ನಿರ್ಜನ ಪ್ರದೇಶಕ್ಕೆ ಹೊತ್ತೊಯ್ಯಲು ಮುಂದಾಗಿದ್ದಾನೆ.
ಇದರಿಂದ ಗಾಬರಿಯಾದ ವಿದ್ಯಾರ್ಥಿನಿ ಕೂಗಿಕೊಂಡಿದ್ದು, ಕುಟುಂಬಸ್ಥರು ಮತ್ತು ನೆರೆ ಹೊರೆಯವರು ಎಚ್ಚರಗೊಂಡಿದ್ದಾರೆ. ಆಗ ವಿದ್ಯಾರ್ಥಿನಿಯನ್ನು ಕಾಮುಕ ಅಲ್ಲೇ ಬಿಟ್ಟು ಓಡಿ ಹೋಗಿದ್ದಾನೆ. ಆರೋಪಿ ವಿದ್ಯಾರ್ಥಿನಿಯ ದೂರದ ಸಂಬಂಧಿ ಎಂದು ಹೇಳಲಾಗಿದ್ದು, ಲಾಕ್ ಡೌನ್ ಕಾರಣ ಮುಂಬೈನಿಂದ ಮರಳಿ ಬಂದಿದ್ದ ಎಂದು ಗೊತ್ತಾಗಿದೆ.
ಪರೀಕ್ಷೆಗೆ ಬರೆದ ದಿಟ್ಟೆ: ರಾತ್ರಿ ತನ್ನ ಮೇಲೆ ಬಲಾತ್ಕಾರದ ಪ್ರಯತ್ನ ನಡೆದರೂ ವಿದ್ಯಾರ್ಥಿನಿ ಧೃತಿಗೆಡದೆ 25ರಂದು ಬೆಳಿಗ್ಗೆ ಪರೀಕ್ಷೆಗೆ ಹಾಜರಾಗಿ ಪರೀಕ್ಷೆ ಬರೆದಿದ್ದಾಳೆ.
ಪರೀಕ್ಷೆ ಮುಗಿಸಿ ಮನೆಗೆ ಬಂದ ನಂತರ ಕುಟುಂಬದವರೊಂದಿಗೆ ಚರ್ಚಿಸಿ ಮಗಳ ಸುರಕ್ಷತೆ ದೃಷ್ಟಿಯಿಂದ ರಟಕಲ್ ಪೊಲೀಸ್ ಠಾಣೆಗೆ ವಿದ್ಯಾರ್ಥಿನಿಯ ತಾಯಿ ದೂರು ನೀಡಿದ್ದಾಳೆ. ಪೋಕ್ಸೊ ಕಾಯ್ದೆ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
Kalaburagi: ವಕ್ಫ್ ರದ್ದುಗೊಳಿಸಿ ಸನಾತನ ಮಂಡಳಿ ರಚಿಸುವಂತೆ ಆಗ್ರಹಿಸಿ ಬೀದಿಗಿಳಿದ ಮಠಾಧೀಶರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.