ಕೋವಿಡ್ ವಾರಿಯರ್ಸ್ ಮೇಲೆ ಸೋಂಕಿತರ ಕುಟುಂಬದಿಂದ ಹಲ್ಲೆ
Team Udayavani, Jun 13, 2020, 5:09 PM IST
ಕಲಬುರಗಿ: ಕೋವಿಡ್ ಕರ್ತವ್ಯದಲ್ಲಿರುವ ಆಶಾ ಕಾರ್ಯಕರ್ತೆ ಮತ್ತು ಆಕೆಯ ಪತಿಯ ಮೇಲೆ ಸೋಂಕಿತ ವ್ಯಕ್ತಿಗಳ ಕುಟುಂಬದವರು ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಶಾಂಪೂರಹಳ್ಳಿಯಲ್ಲಿ ನಡೆದಿದೆ.
ವಾಡಿ ಪೊಲೀಸ್ ಠಾಣೆಯ ಶಾಂಪೂರಹಳ್ಳಿಯಲ್ಲಿ ಎರಡು ದಿನಗಳ ಹಿಂದೆ ಒಂದೇ ಕುಟುಂಬದ ಮೂವರಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ಮುಂಬೈನಿಂದ ಆಗಮಿಸಿದ ಇವರಿಗೆ ಸರ್ಕಾರಿ ಕ್ವಾರಂಟೈನ್ ನಿಂದ ಮನೆಗೆ ತೆರಳಿ ಮೇಲೆ ಪಾಸಿಟಿವ್ ಎಂದು ವರದಿ ಬಂದಿದೆ. ಅಂದೇ ಮೂವರು ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆದರೆ, ಕ್ವಾರಂಟೈನ್ ಅವಧಿ ಮುಗಿಸಿ ಬಂದಿರುವ ಮೂವರೂ ಆರೋಗ್ಯವಾಗಿಯೇ ಇದ್ದಾರೆ. ಅವರಲ್ಲಿ ಕೋವಿಡ್ ಲಕ್ಷಣಗಳು ಇಲ್ಲ. ಸುಖಾಸುಮ್ಮನೆ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದಕ್ಕೆಲ್ಲ ನೀನೆ ಕಾರಣ ಎಂದು ಅದೇ ಗ್ರಾಮದ ಆಶಾ ಕಾರ್ಯಕರ್ತೆ ಜ್ಯೋತಿ ಮೇಲೆ ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆ. ಪತ್ನಿಗೆ ಹಲ್ಲೆ ಮಾಡುವುದನ್ನು ಸಹಿಸದ ಸ್ಥಳದಲ್ಲೇ ಇದ್ದ ಪತಿ ತಾರಾಸಿಂಗ್ ಪವಾರ್ ಜ್ಯೋತಿ ರಕ್ಷಣೆಗೆ ಹೋಗಿದ್ದಾರೆ. ಆಗ ಆತನ ಮೇಲೂ ಸೋಂಕಿತರ ಕುಟುಂಬದವರು ಹಲ್ಲೆ ಮಾಡಿದ್ದಾರೆ.
ಈ ಘಟನೆ ಬಗ್ಗೆ ಆಶಾ ಕಾರ್ಯಕರ್ತೆಯರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.