ಅಂಗನವಾಡಿಗೆ ಕಳಪೆ ಆಹಾರ: ಕೋಲಾಹಲ
Team Udayavani, Feb 16, 2017, 3:17 PM IST
ಕಲಬುರಗಿ: ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪೂರೈಕೆಯಾಗುತ್ತಿರುವುದನ್ನು ಬುಧವಾರ ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸದಸ್ಯರೆಲ್ಲರೂ ಪಕ್ಷ ಭೇದ ಮರೆತು ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನರೋಣಾ ಕ್ಷೇತ್ರದ ಸದಸ್ಯೆ ವಿಜಯಲಕ್ಷ್ಮೀ ರಾಗಿ ಅವರು ಆಳಂದ ತಾಲೂಕಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ಅತ್ಯಂತ ಕಳಪೆ ಆಹಾರ ಧಾನ್ಯಗಳನ್ನು ಪೂರೈಸಲಾಗುತ್ತಿದೆ. ಬೇಕಿದ್ದರೆ ಎಲ್ಲ ಮಾದರಿಗಳನ್ನು ತರಲಾಗಿದೆ.
ಮುಂದಿನ ಕ್ರಮ ತಮಗೆ ಬಿಟ್ಟದ್ದು ಎಂದು ಅಧ್ಯಕ್ಷರ ಮುಂದೆ ಹೋಗಿ ದವಸ ಧಾನ್ಯಗಳ ಪೊಟ್ಟಣಗಳನ್ನು ಪ್ರದರ್ಶಿಸಿದರು. ಇದನ್ನು ಹಿಂದಿನ ಸಭೆಯಲ್ಲೂ ಗಮನ ಸೆಳೆದಿದ್ದರೂ ಯಾವುದೇ ಬದಲಾವಣೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಡದಾಳ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯೆ ರತ್ನವ್ವ ಪೂಜಾರಿ ಸಹ ಅಫಜಲಪುರ ತಾಲೂಕಿನ ಮಲ್ಲಾಬಾದ್‌ನಲ್ಲಿ ಕೂಡಾ ಕಳಪೆ ಆಹಾರ ನೀಡಲಾಗುತ್ತಿದೆ. ತಮ್ಮ ಅಳಲಿಗೆ ಕಿಮ್ಮತ್ತು ಇಲ್ಲದಂತಾಗಿದೆ ಎಂದರು. ಇದಕ್ಕೆ ಇತರ ಸದಸ್ಯರು ಧ್ವನಿಗೂಡಿಸಿದರು.
ಅರಳಗುಂಡಗಿ ಕ್ಷೇತ್ರದ ಸದಸ್ಯ ಶಿವರಾಜ ಪಾಟೀಲ ರದ್ದೇವಾಡಗಿ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪೂರೈಸಲಾಗುತ್ತಿದೆ ಎಂಬುದರಾಗಿ ಸದಸ್ಯರು ಈಗ ಮೂರನೇ ಸಲ ದಾಖಲೆ ಸಮೇತ ದೂರು ನೀಡಿದ್ದರೂ ಯಾವುದೇ ಕ್ರಮವಾಗಲಿಲ್ಲ ಎಂದಾದ ಮೇಲೆ ಸಾಮಾನ್ಯ ಸಭೆ ಯಾಕೆ ನಡೆಸಬೇಕು,
ತಾವು ಸಮಸ್ಯೆಗಳನ್ನು ಬಗೆಹರಿಯಲೆಂದು ಬಡಿದಾಡುತ್ತೇವೆ. ಆದರೆ ತಮ್ಮ ಧ್ವನಿ ಕೋಣನ ಮುಂದೆ ಕಿನ್ನೂರಿ ಬಾರಿಸಿದಂತಾದರೆ ಹೇಗೆ? ಜಿ.ಪಂ ಸದಸ್ಯರಾಗಿ ಇಂದಿಗೆ ವರ್ಷವಾಗುತ್ತಾ ಬಂದರೂ ಸದಸ್ಯರು ಆರೋಪ ಮಾಡಿರುವ ಯಾವುದೇ ಒಬ್ಬ ಅಧಿಕಾರಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಿಲ್ಲ ಎನ್ನುವುದಾರೆ ಸಭೆ ನಡೆಸುವುದೇ ವ್ಯರ್ಥ ಎನಿಸುತ್ತದೆ ಎಂದರು.
ಸದಸ್ಯ ಹರ್ಷಾನಂದ ಗುತ್ತೇದಾರ ಮಾತನಾಡಿ, ಸದಸ್ಯರೆಲ್ಲರೂ ಸಮರ್ಪಕವಾಗಿ ವಾದ ಮಂಡಿಸದೇ ಇರುವುದು ಹಾಗೂ ಈ ಕುರಿತು ಸಭೆಯಲ್ಲಿ ನಿರ್ಣಯ ಕೈಗೊಳ್ಳದೇ ಇರುವುದು ತಮ್ಮೆಲ್ಲರ ಲೋಪ ಎಂದು ವಾಸ್ತವ ಅಂಶ ಬಿಚ್ಚಿಟ್ಟರು.
ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ ಆಗುತ್ತಿರುವುದನ್ನು ಪ್ರಯೋಗಾಲಯಕ್ಕೆ ಕಳುಹಿಸಿ. ವರದಿ ಬಂದ ನಂತರ ಅಧಿಕಾರಿಗಳ ಹಾಗೂ ಪೂರೈಕೆದಾರರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಇಒ ಅನಿರುದ್ಧ ಶ್ರವಣ ಸಭೆ ಗಮನಕ್ಕೆ ತಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.