ಗವಿಸಿದ್ಧೇಶ್ವರ ಜಾತ್ರೆಯಲ್ಲಿ ಜಾಗೃತಿ ಜಪ


Team Udayavani, Jan 24, 2019, 6:54 AM IST

gul-7.jpg

ಕೊಪ್ಪಳ: ಶ್ರೀಗವಿಸಿದ್ಧೇಶ್ವರ ಜಾತ್ರೆ ಸಾಮಾಜಿಕ, ವೈಚಾರಿಕ ಜಾಗೃತಿಗೆ ಮುನ್ನುಡಿ ಬರೆಯುತ್ತಿದೆ. ಇದಕ್ಕೆ ಪೂರಕವೆಂಬಂತೆ ಜಾತ್ರೆಯಲ್ಲಿ ತಲೆ ಎತ್ತಿರುವ ಮಿಠಾಯಿ, ಆಟಿಕೆ ಸಾಮಗ್ರಿ ಅಂಗಡಿಗಳ ಮಾಲಿಕರು ಸಾಮಾಜಿಕ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಜಾತ್ರೆಯಲ್ಲಿ ಮಿಠಾಯಿ ಅಂಗಡಿಗಳ ಮಾಲಕರು ಜಾಗೃತಿ ಸಂದೇಶ ಸಾರುವ ಚಿತ್ರಗಳನ್ನು ಬಿಡಿಸಿದ್ದಲ್ಲದೇ, ಅಂಗಡಿಯಲ್ಲಿ ತಿಳಿವಳಿಕೆ ಮೂಡಿಸುವ ಫಲಕಗಳನ್ನು ಹಾಕಿಕೊಂಡಿದ್ದಾರೆ.

“ಓ ಬನ್ನಿ ನನ್ನ ದೇಶಬಾಂಧವರೇ ರೈತ ಸಾಮ್ರಾಜ್ಯ ಕಟ್ಟೋಣ ಬನ್ನಿ’, ಅಂಧರಿಗೆ ನೀಡಿದರೇ ನಿಮ್ಮ ದೃಷ್ಟಿ ಆಗುವುದು ಸುಂದರ ಲೋಕ ಸೃಷ್ಟಿ, ಡಾ| ಸ್ವಾಮಿನಾಥನ್‌ ಆಯೋಗ ಶಿಪಾರಸು ಜಾರಿಗೊಳಿಸಿ’, ರೈತರ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಪಡಿಸಿ, ವಿಜ್ಞಾನವನ್ನು ಬೆಂಬಲಿಸಿ ಭಾರತವನ್ನು ಬೆಳಗಿಸಿ, ಅಜ್ಞಾನದಿಂದ ಸುಜ್ಞಾನದಡೆಗೆ ನಡೆಸುವ ಕೊಪ್ಪಳ ಗವಿಮಠಕ್ಕೆ ಕೋಟಿ ಕೋಟಿ ನಮಸ್ಕಾರಗಳು, ಹೀಗೆ ಹತ್ತು ಹಲವು ಸಂದೇಶಗಳನ್ನು ಮಿಠಾಯಿ, ಸಿಹಿ ಪದಾರ್ಥಗಳ ಮೂಲಕ ಬರೆದು ಜನರನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಮಹತ್ವದ ಸಂದೇಶವನ್ನು ಸಾರುವ ಮೂಲಕ ತಮಗಿರುವ ಜವಾಬ್ದಾರಿಯನ್ನು ಮೆರೆದಿರುವುದು ಜಾತ್ರೆಯಲ್ಲಿ ಆಕರ್ಷಕವೆನಿಸಿದೆ.

ಗವಿಮಠದಿಂದ ಪ್ರತಿ ವರ್ಷ ನಾನಾ ಸಾಮಾಜಿಕ ಜಾಗೃತಿ, ಪರಿವರ್ತನೆಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದು ವ್ಯಾಪಾರಿಗಳ ಮೇಲೂ ಪ್ರಭಾವ ಬೀರಿದಂತಿದೆ. ಜನರು ಮಾನವೀಯ ಮೌಲ್ಯ ಎತ್ತಿ ಹಿಡಿಯುವ ಸಂದೇಶ ಕಂಡು ತಾವೂ ಬದಲಾಗುತ್ತೇವೆ ಎನ್ನುವ ಶಪಥ ಮಾಡುತ್ತಿದ್ದಾರೆ.

ಜ್ಞಾನ ಪೀಠ ಪ್ರಶಸ್ತಿ ಪಡೆದ 8 ಜನ ಸಾಹಿತಿಗಳ ಭಾವಚಿತ್ರಗಳನ್ನು ಬಿಡಿಸುವ ಮೂಲಕ ಕನ್ನಡ ಸಾಹಿತ್ಯದ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ವ್ಯಾಪಾರಿಗಳ ಈ ಹೊಸ ಪ್ರಯತ್ನ ಜಾತ್ರೆಯಲ್ಲಿ ಎಲ್ಲರನ್ನೂ ಮೆಚ್ಚುವಂತಿದೆ.

ಬಳೆ ಅಂಗಡಿಗಳು: ಜಾಗೃತಿ ಸಂದೇಶಗಳ ಜತೆ ಜಾತ್ರೆಯಲ್ಲಿ ಮಹಿಳೆಯರ ಬಳೆ ಅಂಗಡಿಗಳು ರಾರಾಜಿಸುತ್ತಿವೆ. ಬಳೆ ಅಂಗಡಿಗಳಿಗೆ ಪ್ರತ್ಯೇಕ ಮಳಿಗೆ ನಿರ್ಮಾಣ ಮಾಡಲಾಗಿದೆ. ಈ ಅಂಗಡಿಗಳಲ್ಲೂ ನಾನಾ ಬರಹಗಳ ಫಲಕ ನೇತು ಹಾಕಲಾಗಿದೆ. ಮಕ್ಕಳ ಆಟವಾಡಲು ಪ್ರತ್ಯೇಕವಾದ ಸ್ಥಳವಿದ್ದು, ಜೋಕಾಲಿ, ಮಕ್ಕಳ ಸಣ್ಣ ಬೋಟಿಂಗ್‌ ಕೂಡ ಬಂದಿದೆ.

ಪ್ರತಿ ವರ್ಷ ಸಿಹಿ ಪದಾರ್ಥದೊಂದಿಗೆ ಸಂದೇಶ ಬರೆಸಿ ಹಾಕುತ್ತೇವೆ. ಕಾರಣ ನಾವು ಗ್ರಾಹಕರನ್ನು ಸೆಳೆಯುವುದಕ್ಕಾಗಿ ಅಲ್ಲ. ಈ ಮೂಲಕ ಜನರಲ್ಲಿ ಜನ ಜಾಗೃತಿ ಮೂಡಿಸುವ ಉದ್ದೇಶವಾಗಿದೆ. ಸುಮಾರು 20 ವರ್ಷಗಳಿಂದ ಅಂಗಡಿ ಹಾಕುತ್ತಿದ್ದೇವೆ. ಪ್ರತಿವರ್ಷ ಹೊಸ ಜಾಗೃತಿ ಸಂದೇಶ ಬರೆಯಿಸಿರುತ್ತೇವೆ.
ವಜೀರ ಹಂಚಿನಾಳ, ಮಿಠಾಯಿ ಅಂಗಡಿ ಮಾಲಿಕ

ಶ್ರೀಗವಿಸಿದ್ಧೇಶ್ವರ ಜಾತ್ರೆ ಒಂದಿಲ್ಲೊಂದು ವಿಶೇಷತೆಗಳಿಂದ ಗಮನ ಸೆಳೆಯುತ್ತಿದೆ. ಈ ಮೂಲಕ ಜಾತ್ರೆ ಜನರನ್ನು ತನ್ನತ್ತ ಕೈಬೀಸಿ ಕರೆಯುತ್ತಿದೆ. ಕೇವಲ ಧಾರ್ಮಿಕ ಆಚರಣೆಯಾಗದೆ ಸಾಮಾಜಿಕ ಪ್ರಜ್ಞೆ ಸಾಂಸ್ಕೃತಿಕ ಮೆರಗನ್ನು ಮೈಗೂಡಿಸಿಕೊಂಡಿದೆ. ಹೀಗಾಗಿ ಜಾತ್ರೆಯ ಖ್ಯಾತಿ ಎಲ್ಲಡೆ ಪಸರಿಸಿ, ಎಲ್ಲರಿಗೂ ಅಚ್ಚುಮೆಚ್ಚು ಎನಿಸಿದೆ.
ಶರಣು ಅಳ್ಳೊಳ್ಳಿ, ಕಟಗಿಹಳ್ಳಿ ಯುವಕ

ಟಾಪ್ ನ್ಯೂಸ್

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

2-kalburgi

Kalaburagi: ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ

Waqf

Kalaburagi: ಆಳಂದದ ಬೀರದೇವರ ಆಸ್ತಿ ಪಹಣಿಯಲ್ಲಿ “ವಕ್ಫ್’ ರದ್ದು

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

24-tma-pai

Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ

12(2)

Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ

11

Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

23-bng

Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.