ಭ್ರಷ್ಟಾಚಾರ ತಡೆಗೆ ಜಾಗೃತಿ ಸಪ್ತಾಹ


Team Udayavani, Oct 28, 2020, 3:34 PM IST

gb-tdy-2

ಕಲಬುರಗಿ: ಸಾರ್ವಜನಿಕರು ಭೃಷ್ಟ ಅಧಿಕಾರಿಗಳ ವಿರುದ್ಧ ನೀಡುವ ಮಾಹಿತಿ ಸೋರಿಕೆ ತಡೆಗಟ್ಟುವ ಹಾಗೂ ಭ್ರಷ್ಟಾಚಾರ ನಿಗ್ರಹ ದಳ ಬಲಪಡಿಸಲು ದಳದಲ್ಲಿನಬಹುತೇಕ ಪೊಲೀಸ್‌ ಸಿಬ್ಬಂದಿ ಬದಲಾವಣೆಗೆ ತುರ್ತಾಗಿ ಕ್ರಮ ಕೈಗೊಳ್ಳುವುದಾಗಿ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್‌ ಠಾಣೆಯ ಪೊಲೀಸ್‌ ವರಿಷ್ಠಾಧಿ ಕಾರಿಮಹೇಶ್‌ ಮೇಘಣ್ಣನವರ್‌ ತಿಳಿಸಿದರು.

ನಗರದ ಐವಾನ್‌-ಇ-ಶಾಹಿ ಅತಿಥಿ ಗೃಹದಲ್ಲಿ ಮಂಗಳವಾರ ಪ್ರತಿಜ್ಞಾ ವಿ ಧಿ ಸ್ವೀಕರಿಸಿ ನಂತರ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಅ.27ರಿಂದ ನವೆಂಬರ್‌ 5ವರೆಗೆ ಹಮ್ಮಿಕೊಳ್ಳಲಾದ ಅರಿವು ಸಪ್ತಾಹ-2020 ಕಾರ್ಯಕ್ರಮ ಕುರಿತು ವಿವರಿಸಲು ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ಸಾರ್ವಜನಿಕರು ಭೃಷ್ಟಾಚಾರ ಅಧಿಕಾರಿಗಳಿಂದ ಬೇಸತ್ತು ಕೊನೆಗೆ ತಮ್ಮ (ಎಸಿಬಿ) ಬಳಿ ಬರುತ್ತಾರೆ. ಆದರೆ ಕೆಲ ಸಿಬ್ಬಂದಿಯಿಂದ ದಳಕ್ಕೆ ಬಂದಿರುವ ದೂರುಗಳ ಹಾಗೂ ಇತರೆ ಮಾಹಿತಿ ಸೋರಿಕೆ ಎಂಬುದು ಮಾಧ್ಯಮಗಳಿಂದ ಗೊತ್ತಾಗುತ್ತಿದೆ. ಹೀಗಾಗಿ ಶೀಘ್ರವೇ ಸಿಬ್ಬಂದಿ ಬದಲಾವಣೆಗೆ ಮುಂದಾಗಲಾಗುವುದು. ಪ್ರಮುಖವಾಗಿ ನಿಗ್ರಹ ದಳ ಬಲಪಡಿಸಲಾಗುವುದು ಎಂದು ಎಸ್‌ಪಿ ಪ್ರಕಟಿಸಿದರು.

2020ರಲ್ಲಿ 09 ಭ್ರಷ್ಟಾಚಾರ ಕೇಸ್‌ಗಳನ್ನು ಟ್ರ್ಯಾಪ್‌ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಪ್ರವೃತ್ತವಾಗುವುದಾಗಿ ತಿಳಿಸಿದ ಅವರು, ಅಧಿಕಾರಿಗಳು ಲಂಚ ಪಡೆಯುತ್ತಿರುವುದಕ್ಕೆ ಪೂರಕ ದಾಖಲಾತಿ ಸಂಗ್ರಹಿಸಿ ಮಾಹಿತಿ ನೀಡಿದರೆ, ದಾಳಿಯಂತಹ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಇಂದಿನಿಂದ ಸಪ್ತಾಹ: ನ.28ರಂದು ಕಲಬುರಗಿ ತಾಲೂಕು ತಹಶೀಲ್ದಾರ್‌ ಕಚೇರಿ ಮತ್ತು ಜಿಲ್ಲಾ ಧಿಕಾರಿಗಳ ಕಚೇರಿ, ನ.29ರಂದು ಕಮಲಾಪುರ ತಾಪಂ ಕಚೇರಿ ಮತ್ತು ಜೇವರ್ಗಿ ತಾಪಂ ಕಚೇರಿ, ನ.2ರಂದು ಚಿತ್ತಾಪುರ ತಾಪಂ ಕಚೇರಿ ಮತ್ತು ಆಳಂದ ತಾಪಂ ಕಚೇರಿಯಲ್ಲಿ  ಸಾರ್ವಜನಿಕರಿಗೆ ತಿಳಿವಳಿಕೆ ಮೂಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ನ.3ರಂದು ಕಲಬುರಗಿ ಎಸಿಬಿ ಪೊಲೀಸ್‌ ಠಾಣೆ ಸಿಬ್ಬಂದಿಗಾಗಿ ತಿಳಿವಳಿಕೆ ರಸಪ್ರಶ್ನೆ ಸ್ಪರ್ಧೆ, ನ.4ರಂದು ಕಮಲಾಪುರ ಪಂಚಾಯತ್‌ ಕಚೇರಿಯಲ್ಲಿ ಸಾರ್ವಜನಿಕರಿಗೆ ತಿಳಿವಳಿಕೆ ಕಾರ್ಯಕ್ರಮ ಹಾಗೂ ನ.5ರಂದು ಕಲಬುರಗಿ ರೈಲ್ವೆ ಸ್ಟೇಷನ್‌ ಕೇಂದ್ರ ಬಸ್‌ ನಿಲ್ದಾಣ, ಶರಣಬಸವೇಶ್ವರ ಗುಡಿ, ಖಾಜಾ ಬಂದೇನವಾಜ್‌ ದರ್ಗಾ, ಮಹಾನಗರ ಪಾಲಿಕೆ ಕಚೇರಿಗಳಲ್ಲಿ ಕರಪತ್ರ ಹಂಚಿಕೆ ಮತ್ತು ಅಂಟಿಸುವ ಕಾರ್ಯಕ್ರಮ ನಡೆಸಲಾಗುವುದು ಎಂದರು.

ಡಿಎಸ್‌ಪಿ ವಿರೇಶ್‌ ಕರಡಿಗುಡ್ಡ ಮಾತನಾಡಿ, ಭ್ರಷ್ಟಾಚಾರದ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಜಾಥಾ ಮತ್ತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗುತ್ತಿದ್ದು, ಈ ವರ್ಷ ಕೋವಿಡ್‌-19ಹಿನ್ನೆಲೆಯಲ್ಲಿ ಯಾವುದೇ ಜಾಥಾ ಮತ್ತು ಪ್ರಬಂಧ  ಸ್ಪರ್ಧೆ ಆಯೋಜಿಸಿರುವುದಿಲ್ಲ. ಬದಲಾಗಿ ಆಯಾ ತಾಲೂಕಿನಲ್ಲಿನ ಜನನಿಬಿಡ ಪ್ರದೇಶದಲ್ಲಿ ಅ ಧಿಕಾರಿಗಳು ಭೇಟಿ ನೀಡಿ ಭ್ರಷ್ಟಾಚಾರದ ನಿರ್ಮೂಲನೆ ಕುರಿತು ಅರಿವು ಮೂಡಿಸುವ ಕೆಲಸ ಮಾಡಲಿದ್ದಾರೆ ಎಂದರು.

ಭ್ರಷ್ಟಾಚಾರ ನಿರ್ಮೂಲನೆ ನಿಟ್ಟಿನಲ್ಲಿ ನಾಗರಿಕರು ಮತ್ತು ಖಾಸಗಿ ವಲಯದ ಎಲ್ಲಾ ಪಾಲುದಾರರು ಸೇರಿ ಕೆಲಸ ಮಾಡಿದಾಗ ಮಾತ್ರ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬಹುದು. ಭ್ರಷ್ಟಾಚಾರಕ್ಕೆ ಸಹಕಾರ ನೀಡುವುದು ಸಹ ಅಪರಾಧ. ಇದನ್ನೆಲ್ಲ ಸಾರ್ವಜನಿಕರು ಅರಿತುಕೊಳ್ಳುವುದು ಮುಖ್ಯವಾಗಿದೆ. ಮಹೇಶ್‌ ಮೇಘಣ್ಣನವರ್‌, ಎಸ್ಪಿ , ಭ್ರಷ್ಟಾಚಾರ ನಿಗ್ರಹ ದಳ.

ಟಾಪ್ ನ್ಯೂಸ್

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.