ಸರ್ವ ರೋಗಕ್ಕೂಆಯುರ್ವೇದ ಮದ್ದು
Team Udayavani, Nov 11, 2018, 11:36 AM IST
ಕಲಬುರಗಿ: ದೇಶದಲ್ಲಿ ಆಯುರ್ವೇದ ಚಿಕಿತ್ಸೆಗೆ ವಿಶಿಷ್ಟ ಸ್ಥಾನಮಾನ ಇದೆ. ಆಯುರ್ವೇದ ಚಿಕಿತ್ಸೆಯಿಂದ ಯಾವುದೇ ಅಡ್ಡ ಪರಿಣಾಮಗಳು ಉಂಟಾಗದೇ ಎಲ್ಲ ರೋಗಕ್ಕೂ ಚಿಕಿತ್ಸೆ ಲಭ್ಯವಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾವ್ ಮಲಾಜಿ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಆಯುಷ್ ಕಚೇರಿಗಳ ಸಹಯೋಗದೊಂದಿಗೆ ನಗರದ ಕನ್ನಡ ಸಾಹಿತ್ಯ ಸಂಘದಲ್ಲಿ ಏರ್ಪಡಿಸಲಾಗಿದ್ದ ಮೂರನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಆಯುರ್ವೇದ ಚಿಕಿತ್ಸೆಯಿಂದ ರೋಗಗಳಿಗೆ ಶಾಶ್ವತ ಫಲಿತಾಂಶ ದೊರೆಯುವುದು ಹಾಗೂ ಚಿಕಿತ್ಸೆಯು ದುಬಾರಿ ಇರುವುದಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಆಯುಷ್ ಶಾಖೆಗಳನ್ನು ತೆರೆದಿದ್ದು, ಅಲ್ಲಿ ಉಚಿತ ಆಯುರ್ವೇದ ಚಿಕಿತ್ಸೆ ನೀಡಲಾಗುತ್ತದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ| ನಾಗರತ್ನ ಚಿಮ್ಮಲಗಿ ಮಾತನಾಡಿ, ಇಂದಿನ ಒತ್ತಡದ ದಿನಮಾನಗಳಲ್ಲಿ ಆಯುರ್ವೇದ ಹಾಗೂ ಯೋಗ ಬಹುಮುಖ್ಯವಾಗಿದೆ ಎಂದರು.
ಆಯುಷ್ ವೈದ್ಯ ಸುಧೀರ ಕುಳಗೇರಿ ಸಾರ್ವಜನಿಕ ಆರೋಗ್ಯದಲ್ಲಿ ಆಯುರ್ವೇದದ ಪಾತ್ರದ ಕುರಿತು ಮಾತನಾಡಿದರು. ರಾಷ್ಟ್ರೀಯ ಆಯುರ್ವೇದ
ದಿನಾಚರಣೆ ಅಂಗವಾಗಿ ಚೇತನ ಪ್ರೌಢಶಾಲೆ, ಕಮಲಾಪುರ ಸರ್ಕಾರಿ ಕನ್ಯಾಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಇದೇ ವೇಳೆ ಆಯುರ್ವೇದ ಸಸ್ಯಗಳ ಪ್ರದರ್ಶನ ಏರ್ಪಡಿಸಲಾಗಿತ್ತು.
ಪಾಲಿಕೆ ಮಹಾಪೌರ ಮಲ್ಲಮ್ಮ ಎಸ್. ವಳಕೇರಿ, ಜಿಪಂ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಐಎಎಸ್ ಪ್ರೊಬೇಷನರಿ ಅಧಿಕಾರಿ ಸ್ನೇಹಲ ಸುಧಾಕರ ಲೋಖಂಡೆ, ಡಾ| ಮಲ್ಲಾರಾವ್ ಮಲ್ಲೆ, ಡಾ| ಬಿ.ಆರ್. ವೈದ್ಯ, ಡಾ| ಎ.ಎಸ್. ಪಾಟೀಲ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.