ಬಸವಣ್ಣನ ವಿಚಾರಧಾರೆ ಅನುಷ್ಠಾನಕ್ಕೆ ಬರಲಿ
Team Udayavani, May 3, 2017, 4:23 PM IST
ಜೇವರ್ಗಿ: 12ನೇ ಶತಮಾನದಲ್ಲಿ ವಚನಗಳ ಮೂಲಕ ಸಾಮಾಜಿಕ ಸಮಾನತೆಗೆ ಹೋರಾಡಿದ ದಾರ್ಶನಿಕ ವಿಶ್ವಗುರು ಅಣ್ಣ ಬಸವಣ್ಣನ ವಿಚಾರಧಾರೆಗಳನ್ನು ಅನುಷ್ಠಾನಕ್ಕೆ ತರುವಂತಹ ಕೆಲಸವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಮಂಗಳವಾರ ಅಖೀಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ಬಸವ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
21ನೇ ಶತಮಾನ ಭಾರತೀಯರದ್ದಾಗಿದ್ದು, ಇದನ್ನು ಸಾಬೀತುಪಡಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕನ್ನಡ ನಾಡಿನ ಮಹಾಪುರುಷ ಬಸವಣ್ಣನವರ ವಚನಗಳನ್ನು 23 ಭಾಷೆಗಳಲ್ಲಿ ಪ್ರಕಟಿಸಿ ರಾಷ್ಟ್ರಕ್ಕೆ ಅರ್ಪಿಸಲಾಗಿದೆ ಎಂದರು.
ಸಚಿವ ಈಶ್ವರ ಖಂಡ್ರೆ ಮಾತನಾಡಿ, ಸ್ವಾರ್ಥ ಮನೋಭಾವನೆ ಬಿಟ್ಟು ಎಲ್ಲರೂ ನಮ್ಮವರೆಂದು ತಿಳಿದು ಗೌರವದಿಂದ ಬದುಕಬೇಕು. ಜಗತ್ತಿಗೆ ಮಾದರಿಯಾದ ಅನುಭವ ಮಂಟಪ ನಿರ್ಮಿಸಿ ಸರ್ವ ಜನಾಂಗದವರಿಗೆ ಅವಕಾಶ ಕಲ್ಪಿಸಿಕೊಟ್ಟವರು ಬಸವಣ್ಣ.
ರಾಜಕೀಯ ಎಂದರೆ ಸಮಾಜಸೇವೆ ಮಾಡುವುದು. ಆದರೆ ಇಂದು ಒಬ್ಬರನ್ನೊಬ್ಬರು ಟೀಕಿಸುವುದರಲ್ಲೇ ಕಾಲಹರಣ ಮಾಡುತ್ತಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರು. ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜೆಡಿಎಸ್ ಮುಖಂಡ ಡಿ.ಜಿ. ಸಾಗರ ಪುಸ್ತಕ ಬಿಡುಗಡೆ, ಶಾಸಕ ಡಾ| ಅಜಯಸಿಂಗ್ ಬಸವೇಶ್ವರರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಸೊನ್ನ ಮಠದ ಡಾ| ಶಿವಾನಂದ ಸ್ವಾಮೀಜಿ, ಜೇರಟಗಿಯ ಮಹಾಂತ ಶ್ರೀ, ಕೋಳಕೂರದ ಕೆಂಚಬಸವ ಶ್ರೀ, ಯಡ್ರಾಮಿ ಶ್ರೀ, ಕಟ್ಟಿ ಸಂಗಾವಿಯ ಸಿದ್ದಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಮಾಜಿ ಸಚಿವ ಗೋವಿಂದ ಕಾರಜೋಳ, ಸಿಂದಗಿ ಶಾಸಕ ರಮೇಶ ಬೂಸನೂರ, ದತ್ತಾತ್ರೆಯ ಪಾಟೀಲ ರೇವೂರ, ಬಿ.ಜಿ. ಪಾಟೀಲ, ರೇವುನಾಯಕ ಬೆಳಮಗಿ, ಬಾಬುರಾವ ಚವ್ಹಾಣ, ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಕೇದಾರಲಿಂಗಯ್ಯ ಹಿರೇಮಠ, ಅಲ್ಲಮಪ್ರಭು ಪಾಟೀಲ, ಇಂದುಮತಿ ಸಾಲಿಮಠ ಮುಖ್ಯ ಅತಿಥಿಗಳಾಗಿದ್ದರು.
ಇದೆ ವೇಳೆ ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣು ಮೋದಿ, ಪುರಸಭೆ ಅಧ್ಯಕ್ಷೆ ಮಲ್ಲಮ್ಮ ಮಲ್ಲಣ್ಣ ಅವುಂಟಿ, ಎಪಿಎಂಸಿ ಅಧ್ಯಕ್ಷ ಮಡಿವಾಳಪ್ಪಗೌಡ ಮಾಗಣಗೇರಿ ಅವರನ್ನು ಸತ್ಕರಿಸಲಾಯಿತು. ಸಮಾಜದ ಶಿವರಾಜ ಪಾಟೀಲ ಸ್ವಾಗತಿಸಿದರು, ಶಿಕ್ಷಕ ಗುರುಶಾಂತಪ್ಪ ಚಿಂಚೋಳಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
Chittapur: ತಾಯಿಯನ್ನೇ ಕೊ*ಲೆಗೈದ ಮಗ: ಆರೋಪಿಯ ಬಂಧನ
MUST WATCH
ಹೊಸ ಸೇರ್ಪಡೆ
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Udupi: ಗ್ಯಾರಂಟಿ ಯೋಜನೆಗಳ ಯಾವುದೇ ಕಾರಣಕ್ಕೂ ರದ್ದುಗೊಳಿಸಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Waqf Issue: ವಕ್ಫ್ ಭೀತಿಯಿಂದ ಕಡಕೋಳದಲ್ಲಿ ಕಲ್ಲು ತೂರಾಟ: 32 ಮಂದಿ ವಶ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.