ಗಡಿ ಚೆಕ್ ಪೋಸ್ಟ್ ಗಳಲ್ಲಿ ಮೂಲ ಸೌಲಭ್ಯ
Team Udayavani, Apr 28, 2021, 4:28 PM IST
ಅಫಜಲಪುರ: ಕೋವಿಡ್ ನಿಯಂತ್ರಣಕ್ಕಾಗಿ ತಾಲೂಕಿನ ಅರ್ಜುಣಗಿ, ಮಾಶಾಳ, ಬಳೂರ್ಗಿ ಗ್ರಾಮಗಳಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್‌ಗಳು ನಾಮಕೇವಾಸ್ತೆ ಎನ್ನುವಂತಾಗಿದ್ದು, ಮೂಲಭೂತ ಸೌಲಭ್ಯ ಕಲ್ಪಿಸುವ ಅವಶ್ಯಕತೆಯಿದೆ. ಹೊರರಾಜ್ಯಗಳಿಂದ ತಾಲೂಕಿಗೆ ಪ್ರವೇಶ ಪಡೆಯುವ ಜನರ ಮೇಲೆ ಚೆಕ್ ಪೋಸ್ಟ್ ಸಿಬ್ಬಂದಿ ನಿಗಾ ಇಡುತ್ತಿದ್ದಾರೆ.
ಆದರೆ ಚೆಕ್‌ಪೋಸ್ಟ್‌ಗಳಲ್ಲಿ ಸಮರ್ಪಕ ಸೌಲಭ್ಯಗಳು ಇಲ್ಲದ್ದರಿಂದ ಸಿಬ್ಬಂದಿ ಪರದಾಡುವಂತೆ ಆಗಿದೆ. ಸಂಬಂಧಪಟ್ಟವರು ಕೂಡಲೇ ಚೆಕ್ ಪೋಸ್ಟ್‌ಗಳಲ್ಲಿ ಸಕಲ ರೀತಿಯ ಸೌಲಭ್ಯ ಕಲ್ಪಿಸಬೇಕು. ಅಂದಾಗ ಎಲ್ಲರ ಮೇಲೂ ನಿಗಾ ಇಡಲು ಮತ್ತು ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಸಾಧ್ಯವಾಗುತ್ತದೆ. ವಿದ್ಯುತ್-ಟಾರ್ಚ್ ಸಮಸ್ಯೆ: ತಾಲೂಕಿನ ಮೂರು ಚೆಕ್‌ಪೋಸ್ಟ್ ಪೈಕಿ ಅರ್ಜುಣಗಿ ಚೆಕ್‌ಪೋಸ್ಟ್‌ನಲ್ಲಿ ವಿದ್ಯುತ್ ಸಮಸ್ಯೆಯಿದೆ. ಇಲ್ಲಿ ಕೇವಲ ಸೋಲಾರ ವಿದ್ಯುತ್ ಬಲ್ಬ್ ಅಳವಡಿಸಿದ್ದರಿಂದ ರಾತ್ರಿ ಸರಿಯಾಗಿ ಬೆಳಕು ನೀಡುತ್ತಿಲ್ಲ. ಅರ್ಧಂಬರ್ಧ ಬೆಳಕಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ.
ದೂರದಿಂದ ಬರುವ ವಾಹನಗಳನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ. ಇನ್ನೊಂದೆಡೆ ಮಾಶಾಳ, ಬಳೂರ್ಗಿ ಚೆಕ್‌ಪೋಸ್ rಗಳಲ್ಲಿ ವಿದ್ಯುತ್ ಸಂಪರ್ಕವಿದ್ದರೂ ಸಿಬ್ಬಂದಿ ಕೈಯಲ್ಲೊಂದು ಟಾರ್ಚ್ ವ್ಯವಸ್ಥೆ ಆಗಬೇಕು. ದೂರದಿಂದ ಬರುವ ವಾಹನಗಳ ಮೇಲೆ ನಿಗಾ ಇಡಲು ಟಾರ್ಚ್ ಅವಶ್ಯಕತೆ ಇದೆ. ಅಲ್ಲದೇ ವಾಹನಗಳ ನಂಬರ್ ನೋಡಲು ಟಾರ್ಚ್ ಬೇಕೇ ಬೇಕು. ಮಳೆಗಾಲದಲ್ಲಿ ತೊಂದರೆ: ಬೇಸಿಗೆ ಬಿರು ಬಿಸಿಲಿನಲ್ಲಿ ತಗಡಿನ ಶೆಡ್‌ಗಳಲ್ಲೇ ಮೈಯೊಡ್ಡಿ ಕೆಲಸ ಮಾಡಿದ ಸಿಬ್ಬಂದಿ ಇನ್ನು ಮಳೆಗಾಲದಲ್ಲಿ ಇನ್ನೊಂದು ಸಮಸ್ಯೆ ಅನುಭವಿಸುವಂತೆ ಆಗುತ್ತದೆ. ಮಳೆ ನೀರು ಚೆಕ್‌ಪೋಸ್ಟ್ ತುಂಬಾ ತುಂಬಿಕೊಳ್ಳುತ್ತದೆ. ಇರುವ ಶೆಡ್ ಗಳಿಗೆ ಹಿಂಬದಿ ಮತ್ತು ಅಕ್ಕ ಪಕ್ಕ ಕಿಟಕಿ ವ್ಯವಸ್ಥೆ ಮಾಡಿದರೆ, ಮಳೆ ನೀರು ಒಳಗೆ ಬರುವುದಿಲ್ಲ.
ಈ ನಿಟ್ಟಿನಲ್ಲಿ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಿದೆ. ಈಡೇರಿಲ್ಲ ಸಂಸದರ ಭರವಸೆ: ಕಳೆದ ವರ್ಷ ನಿರ್ಮಿಸಿದ್ದ ಚೆಕ್‌ಪೋಸ್ಟ್ ಮಳೆ ಮತ್ತು ಬಿರುಗಾಳಿ ಹೊಡೆತಕ್ಕೆ ಸಿಲುಕಿ ಹಾರಿ ಹೋಗಿತ್ತು. ಅಲ್ಲದೇ ಚೆಕ್‌ಪೋಸ್ಟ್ ಸಿಬ್ಬಂದಿಗೆ ಗಾಯಗಳಾಗಿದ್ದವು. ಈ ವೇಳೆ ಗುಣಮಟ್ಟದ ಹೊಸ ಚೆಕ್ ಪೋಸ್ಟ್ ನಿರ್ಮಿಸಲಾಗುತ್ತದೆ. ಸಿಬ್ಬಂದಿಗೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ಸಂಸದ ಡಾ| ಉಮೇಶ ಜಾಧವ ಭರವಸೆ ನೀಡಿದ್ದರು. ಈ ಭರವಸೆ ಇನ್ನೂ ಈಡೇರಿಲ್ಲ. ಸಂಬಂಧಪಟ್ಟವರು ಕೂಡಲೇ ಕ್ರಮ ಕೈಗೊಳ್ಳಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.