26ರಿಂದ ತೊಗರಿ ಖರೀದಿ ಆರಂಭ: ಪಾಟೀಲ
Team Udayavani, Dec 21, 2017, 7:10 AM IST
ಕಲಬುರಗಿ: ಪ್ರಸಕ್ತ ಸಾಲಿನಲ್ಲೂ ತೊಗರಿ ಬೆಳೆದ ರೈತರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಆದೇಶದಂತೆ ಡಿ.26ರಿಂದ ಕೇಂದ್ರ 5450 ರೂ. ಮತ್ತು ರಾಜ್ಯ ಸರ್ಕಾರದ 550 ರೂ. ಸಹಾಯ ಧನ ಸೇರಿ ಪ್ರತಿ ಕ್ವಿಂಟಲ್‌ಗೆ ಒಟ್ಟು 6 ಸಾವಿರ ರೂ. ಗಳಂತೆ 1.65 ಲಕ್ಷ ಟನ್ ತೊಗರಿ ಖರೀದಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಪ್ರತಿ ರೈತರಿಂದ ಕೇವಲ 20 ಕ್ವಿಂಟಲ್ ತೊಗರಿ ಖರೀದಿಸಲು ನಿರ್ಧರಿಸಲಾಗಿದೆ. ಕಳೆದ ವರ್ಷ ನ್ಯಾಫೆಡ್ ಮೂಲಕ ಖರೀದಿಸಿರುವ ತೊಗರಿ ಇನ್ನೂ ರಾಜ್ಯದ ಗೋದಾಮುಗಳಲ್ಲಿಯೇ ಇದೆ. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದಂತೆ ಖರೀದಿ ಮಾಡಲಾಗುತ್ತಿದೆ ಎಂದರು.
ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ತೊಗರಿ ಖರೀದಿ ಕೇಂದ್ರಗಳು ಆರಂಭವಾಗಲಿವೆ. ತೊಗರಿಯನ್ನು 8.85 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದ್ದು, 7.08 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆ ನಿರೀಕ್ಷಿಸಲಾಗಿದೆ. ತೊಗರಿ ಖರೀದಿಗೆ ರೈತರಿಗೆ ಹಣ ಪಾವತಿಸಲು ಆವರ್ತ ನಿ ಧಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಕ್ಕೆ 25 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.