ಹೆಚ್ಚು ಅಂಕದೊಂದಿಗೆ ಸಮಾಜಕ್ಕೆ ಮಾದರಿಯಾಗಿ
Team Udayavani, Nov 30, 2018, 11:15 AM IST
ಕಲಬುರಗಿ: ವಿದ್ಯಾರ್ಥಿಗಳು ಹೆಚ್ಚು ಅಂಕಗಳಿಸಿ ದುಡ್ಡು ಮಾಡಿದರೆ ಮಾತ್ರ ಸಾಲದು, ಸಮಾಜಕ್ಕೆ ದರಿಯಾಗಬೇಕು ಎಂದು ಅಫಜಲಪುರ ಶಾಸಕ ಎಂ.ವೈ. ಪಾಟೀಲ ಹೇಳಿದರು. ಅಫಜಲಪುರ ತಾಲೂಕಿನ ಸಾಗನೂರದ ಯುವ ಸಂಘಟಕ ಬಸವರಾಜ ಸಾಗನೂರ ಹಾಗೂ ಸಂಗಡಿಗರ ವತಿಯಿಂದ ಹಮ್ಮಿಕೊಂಡಿದ್ದ 63ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯೆ ಕಲಿಯುವುದು ಪ್ರತಿಯೊಬ್ಬರ ಹಕ್ಕು. ವಿದ್ಯೆ ಕಲಿತು ಸಮಾಜ, ನಾಡು, ನುಡಿ, ದೇಶದ ಬಗ್ಗೆ ಗೌರವ ಹಾಗೂ ಅಭಿಮಾನ ಹೊಂದಿರಬೇಕು ಎಂದು ಹೇಳಿದರು. ಜಿ.ಪಂ. ಮಾಜಿ ಸದಸ್ಯ ಪ್ರಕಾಶ ಜಮಾದಾರ ಮಾತನಾಡಿ, ಡಾ| ಅಂಬೇಡ್ಕರ್ ಹೇಳಿದಂತೆ ಶಿಕ್ಷಣ, ಸಂಘಟನೆ, ಹೋರಾಟ ಮುಖ್ಯವಾಗಿದೆ. ಶಿಕ್ಷಣವಿರದ ಸಂಘಟನೆಯ ಹೋರಾಟ ಕ್ರಮೇಣ ನಶಿಸಿ ಹೋಗುತ್ತದೆ ಎಂದಿದ್ದರು. ಅದಕ್ಕಾಗಿ ಮೊದಲು ಎಲ್ಲರೂ ಶಿಕ್ಷಿತರಾಗಬೇಕು ಎಂದರು.
ಬಿಜೆಪಿ ಯುವ ಮುಖಂಡ ಶಿವಾ ಅಷ್ಟಗಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯಾ ಸಿಕ್ಕ ನಂತರ ಬೇರೆ ಬೇರೆ ರಾಜ್ಯಗಳಲ್ಲಿ ಹರಿದು ಹಂಚಿ ಹೋಗಿದ್ದ ಕನ್ನಡಿಗರನ್ನು ಒಂದುಗೂಡಿಸಲು ಅನೇಕ ಕನ್ನಡದ ದಿಗ್ಗಜರು ನಡೆಸಿದ ಸಂಘಟಿತ ಹೋರಾಟದ ಫಲವಾಗಿ ಇಂದು ಕನ್ನಡ ಮಾತಾಡುವ ನಾವೆಲ್ಲರೂ ಒಂದಾಗಿ ಕರ್ನಾಟಕದಲ್ಲಿದ್ದೇವೆ ಎಂದರು.
ಕನ್ನಡ ಭಾಷಿಕರೆಲ್ಲ ಒಂದಾಗಬೇಕೆಂದು ಮೊದಲು ಮುನ್ನುಡಿ ಇಟ್ಟವರು ಆಲೂರು ವೆಂಕಟರಾಯರು. ನಂತರ ಕನ್ನಡ ಸಾಹಿತ್ಯ ಪರಿಷತ್ ಮುಂದುವರಿಸಿ 1956 ರಲ್ಲಿ ಕರ್ನಾಟಕದ ಏಕೀಕರಣವಾಯಿತು. ನಂತರ ದಿ.ಮುಖ್ಯಮಂತ್ರಿ ದೇವರಾಜ ಅರಸರು ಕರ್ನಾಟಕವೆಂದು ನಾಮಕರಣ ಮಾಡಿದರು ಎಂದು ಹೇಳಿದರು.
ಸಿದ್ದು ಸಿರಸಗಿ, ಜಿ.ಪಂ. ಮಾಜಿ ಸದಸ್ಯ ಸಿದ್ದಾರ್ಥ ಬಸರಿಗಿಡ, ತಾ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಆನಂದ ಚವ್ಹಾಣ ಮಾತನಾಡಿದರು. ವೇದಮೂರ್ತಿ ರಾಚಯ್ಯ ಸ್ವಾಮಿ ಸಾನ್ನಿಧ್ಯ, ಜಿ.ಪಂ. ಅಧ್ಯಕ್ಷೆ ಶೋಭಾ ಸಿರಸಗಿ ಅಧ್ಯಕ್ಷತೆ ವಹಿಸಿದ್ದರು. ಸಂಘಟಕ ಬಸವರಾಜ ಯಳವಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಗವಂತರಾಯ ಬೆಣ್ಣೂರರು ಸ್ವಾಗತಿಸಿ, ನಿರೂಪಿಸಿದರು.
ತಾ.ಪಂ. ಮಾಜಿ ಅಧ್ಯಕ್ಷ ರಾಜುಗೌಡ ಪಾಟೀಲ ಅವರಳ್ಳಿ, ಪಿಎಸ್‌ಐ ರಾಜಕುಮಾರ ಬಿರಾದಾರ, ಗ್ರಾ.ಪಂ. ಅಧ್ಯಕ್ಷೆ ಆಸ್ಮಾ ಬೇಗಂ ರಹಮಾನ ಪಟೇಲ್, ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ರೇಣುಕಾ ಸಿಂಗೆ, ಹೇಮಂತ ರಾಠೊಡ, ಮಹೇಶ ಸರಡಗಿ, ವಿಠಲ ಚಕ್ರ, ಗಿರೀಶ ಚಕ್ರ, ಸಚೀನ ನಾಯ್ಕೋಡಿ, ಸಿದ್ದರಾಮಯ್ಯ ಹಿರೇಮಠ, ಪಿಡಿಒ ಶರಫೋದ್ದಿನ್ ನದಾಫ್ ಭಾಗವಹಿಸಿದ್ದರು. ಮೌಲಾಲಿ ಮನಿಯಾರ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.