ಭೀಮಾ ನೀರು ತಡೆಗೆ ಹೂಗಾರ ಮನವಿ
Team Udayavani, Mar 30, 2022, 12:00 PM IST
ಅಫಜಲಪುರ: ತಾಲೂಕಿನ ಘತ್ತರಗಿ ಗ್ರಾಮದಲ್ಲಿ ಭೀಮಾ ನದಿಗೆ ನಿರ್ಮಿಸಿರುವ ಭೀಮಾ ಬ್ರಿಡ್ಜ್ ಕಂ ಬ್ಯಾರೇಜ್‌ನಲ್ಲೀಗ ವಿದ್ಯುತ್ ಚಾಲಿತ ಗೇಟ್ ಅಳವಡಿಕೆ ಕಾಮಗಾರಿ ನಡೆದಿದ್ದರಿಂದ ಗೇಟ್ ಗಳನ್ನು ತೆಗೆಯಲಾಗಿದ್ದು, ನೀರು ವ್ಯರ್ಥವಾಗಿ ಹರಿಯುತ್ತಿದೆ. ಈ ನೀರನ್ನು ತಡೆಯಬೇಕು ಎಂದು ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ರಮೇಶ ಹೂಗಾರ ಮನವಿ ಮಾಡಿದರು.
ಸಿಂದಗಿ ತಾಲೂಕಿನ ರಾಂಪೂರದಲ್ಲಿರುವ ಕೃಷ್ಣ ಭಾಗ್ಯ ಜಲನಿಗಮ ಕಚೇರಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ವಿದ್ಯುತ್ ಚಾಲಿತ ಗೇಟ್ ಅಳವಡಿಕೆ ಮಾಡುತ್ತಿರುವುದು ಒಳ್ಳೆಯದೇ. ಆದರೆ ಈಗ ಬೇಸಿಗೆ ಇರುವುದರಿಂದ ನೀರು ಪೋಲಾಗಿ ಹರಿದು ಹೋದರೇ ದನ ಕರುಗಳಿಗೆ, ರೈತರಿಗೆ, ಜನಸಾಮಾನ್ಯರಿಗೆ ತೊಂದರೆಯಾಗದೇ ಇರಲು ಹರಿದು ಹೋಗುತ್ತಿರುವ ನೀರನ್ನು ತಡೆದು ನಿಲ್ಲಿಸುವ ಕೆಲಸ ಮಾಡಬೇಕೆಂದು ಮನವಿ ಮಾಡಿಕೊಂಡರು. ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು, ರೈತ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.