ಉಕ್ಕಿ ಹರಿಯುತ್ತಿರುವ ಭೀಮಾ ನದಿ: ಮುಳುಗಿದ ಸೇತುವೆಗಳು
Team Udayavani, Sep 18, 2017, 9:59 AM IST
ಅಫಜಲಪುರ: ಮಹಾರಾಷ್ಟ್ರ ಹಾಗೂ ಕಲಬುರ್ಗಿ ಜಿಲ್ಲಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ಭೀಮಾ ನದಿ ತುಂಬಿ ಹರಿಯುತ್ತಿದ್ದು ಪ್ರಮುಖ ಸೇತುವೆಗಳು ಮುಳುಗಡೆಯಾಗಿ, ಸಂಚಾರ ಸ್ಥಗಿತಗೊಂಡಿದೆ.
ಭೀಮಾ ನದಿ ಮಧ್ಯದಲ್ಲಿರುವ ತಾಲೂಕಿನ ಮಣ್ಣೂರ ಗ್ರಾಮದ ಶಕ್ತಿ ದೇವತೆ ಯಲ್ಲಮ್ಮನ ಗುಡಿ ಮುಳುಗಡೆ ಆಗಿದೆ. ತಾಲೂಕಿನ ಘತ್ತರಗಿ, ದೇವಲ ಗಾಣಗಾಪುರ, ಚಿನಮಳ್ಳಿ ಗ್ರಾಮಗಳಲ್ಲಿ ಭೀಮಾ ನದಿಗೆ ಕಟ್ಟಿರುವ ಬ್ರಿಡ್ಜ್ ಕಂ ಬ್ಯಾರೇಜ್‌ಗಳು ಸೇತುವೆ ಮೇಲೆ ಹರಿಯುತ್ತಿದ್ದು, ಘತ್ತರಗಿ, ದೇವಲ ಗಾಣಗಾಪುರ, ಚಿನಮಳ್ಳಿ, ಮಣ್ಣೂರ, ವಿಜಯಪುರದ ಸಿಂದಗಿ ತಾಲೂಕಿನ ಮೋರಟಗಿ, ಜೇವರ್ಗಿ ತಾಲೂಕಿನ ಜೇರಟಗಿ, ನೆಲೋಗಿ, ಇಂಡಿ ತಾಲೂಕಿನ ಭೂಂಯ್ನಾರ್ ಗ್ರಾಮಗಳ ಸಂಪರ್ಕ ಕಡಿತಗೊಂಡಿವೆ. ಅಫಜಲಪುರ ತಾಲೂಕಿನ ಭೀಮಾ ನದಿ ಪಾತ್ರದ ಗ್ರಾಮಗಳಾದ ಶಿವೂರ, ಕೂಡಿಗನೂರ, ಬಂದರವಾಡ, ಸಾಗನೂರ, ಚಿನಮಳ್ಳಿ, ತೆಗ್ಗೆಳ್ಳಿ, ಟಾಕಳಿ, ಉಮರ್ಗಾ, ಕಿರಸಾವಳಗಿ, ಕೆಕ್ಕರಸಾವಳಗಿ, ಸಂಗಾಪುರ, ಶಿವಪುರ, ಬನ್ನಟ್ಟಿ, ಅಳ್ಳಗಿ (ಬಿ), ಅಳ್ಳಗಿ (ಕೆ), ಉಡಚಾಣ, ಸಾಗನೂರ, ಕೆರಕನಹಳ್ಳಿ ಹಾಗೂ ಸಿಂದಗಿ, ಇಂಡಿ ತಾಲೂಕಿನಲ್ಲಿ ಬರುವ ಗ್ರಾಮಗಳಲ್ಲೂ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಅಪಾರ ಹಾನಿ: ಭೀಮಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. ನದಿ ಪಾತ್ರದ ರೈತರ ಜಮೀನಿನ ಫಲವತಾದ ಮಣ್ಣು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಕಬ್ಬು, ತೊಗರಿ, ಹತ್ತಿ, ಬಾಳಿ, ಸೂರ್ಯಕಾಂತಿ ಸೇರಿದಂತೆ ವಿವಿಧ ಬೆಳೆಗಳು ಪ್ರವಾಹದಿಂದ ಹಾಳಾಗಿವೆ. ಭೀಮಾ ನದಿ ಪ್ರವಾಹಮಟ್ಟ ತಲುಪಿದ್ದು, ನದಿ ಪಾತ್ರದ ಗ್ರಾಮಗಳ ಜನರು ದಡಕ್ಕೆ ಹೋಗದಂತೆ, ಪ್ರವಾಹ ಪರಿಸ್ಥಿತಿ ಉಂಟಾದಾಗ ಸಹಕರಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಸದ್ಯ ಭೀಮಾ ನದಿಯಲ್ಲಿ 1.45 ಲಕ್ಷ ಕ್ಯುಸೆಕ್ ನೀರು ಒಳ ಮತ್ತು ಹೊರ ಹರಿವಿದೆ. ಸೊನ್ನ ಭೀಮಾ ಜಲಾಶಯದ ಒಟ್ಟು 29 ಗೇಟ್‌ಗಳ ಪೈಕಿ 18 ಗೇಟ್‌ಗಳಿಂದ ನೀರನ್ನು ಹೊರಬಿಡಲಾಗುತ್ತಿದೆ ಎಂದು ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.