ಜೂ.1ಕ್ಕೆ ಬಿಜೆಪಿ ಶಕ್ತಿ ಪ್ರದರ್ಶನ: ವಾಲ್ಮೀಕಿ
Team Udayavani, May 29, 2017, 3:25 PM IST
ವಾಡಿ: ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜೂ.1 ರಂದು ಚಿತ್ತಾಪುರಕ್ಕೆ ಆಗಮಿಸಲಿದ್ದು, ಅಂದು ತಾಲೂಕಿನಲ್ಲಿ ಬಿಜೆಪಿ ಶಕ್ತಿಪ್ರದರ್ಶನ ಮಾಡಲಿದೆ ಎಂದು ಮಾಜಿ ಶಾಸಕ ವಾಲ್ಮೀಕಿ ನಾಯಕ ಹೇಳಿದರು.
ಬಿಎಸ್‌ವೈ ಆಗಮನದ ಹಿನ್ನೆಲೆಯಲ್ಲಿ ಪಟ್ಟಣದ ಸೂರ್ಯ ವಸತಿಗೃಹ ಆವರಣದಲ್ಲಿ ಕರೆಯಲಾಗಿದ್ದ ಕಾರ್ಯಕರ್ತರ ಪೂರ್ವಭಾವಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿಯ ಶಕ್ತಿಯಾಗಿ ಹೊರಹೊಮ್ಮಿರುವ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಮುಂದಾಗಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷದ ಸಂಘಟನೆ ಅಗತ್ಯವಾಗಿದ್ದು, ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಲು ಕಾರ್ಯಕರ್ತರು ಸೈನಿಕರಂತೆ ಸನ್ನದ್ಧರಾಗಬೇಕು ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಆಡಳಿತ ಸಂಪೂರ್ಣ ಜನವಿರೋಧಿ ಆಗಿದ್ದರಿಂದ ರಾಜ್ಯದಲ್ಲಿ ಬಿಜೆಪಿ ಪರ ಅಲೆಯಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಗಳು ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಕೈಗೊಂಡು ಅಭಿವೃದ್ಧಿ ಕಾರ್ಯಗಳು ನಮಗೆ ಆತ್ಮಸ್ಥೆರ್ಯ ಹೆಚ್ಚಿಸಿವೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿಯಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಬಿಜೆಪಿ ಹಿರಿಯ ಮುಖಂಡ ಬಸವರಾಜ ಪಂಚಾಳ ಮಾತನಾಡಿ, ಚಿತ್ತಾಪುರಕ್ಕೆ ಯಡಿಯೂರಪ್ಪ ಬರುತ್ತಿರುವುದು ನಮ್ಮೆಲ್ಲರಿಗೆ ಆನೆಬಲ ಬಂದಂತಾಗಿದೆ. ಪಕ್ಷದ ಕಾರ್ಯಕರ್ತರು ಹುಮ್ಮಸ್ಸಿನಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಿದೆ. ಅದಕ್ಕಾಗಿ ಶ್ರಮಿಸಲು ಮುಂದಾಗಬೇಕು ಎಂದರು.
ಬಿಜೆಪಿ ತಾಲೂಕು ಪ್ರದಾನ ಕಾರ್ಯದರ್ಶಿ ಶರಣು ಜ್ಯೋತಿ ಪ್ರಾಸ್ತಾವಿಕ ಮಾತನಾಡಿದರು. ಪುರಸಭೆ ಸದಸ್ಯರಾದ ಭೀಮಶಾ ಜಿರೋಳ್ಳಿ, ರಾಜೇಶ ಅಗರವಾಲ, ಪ್ರಕಾಶ ನಾಯಕ, ಮುಖಂಡರಾದ ರಾಮಚಂದ್ರರೆಡ್ಡಿ, ಪರುತಪ್ಪ ಕರದಳ್ಳಿ, ಯಮನಪ್ಪ ನವಲಹಳ್ಳಿ, ರಮೇಶ ಕಾರಬಾರಿ, ಶಿವುಕುಮಾರ ಹೂಗಾರ,
-ಮಹಮದ ಮೌಲಾ, ವೀರಣ್ಣ ಯಾರಿ, ಮಲ್ಲಯ್ಯಸ್ವಾಮಿ ಮಠಪತಿ, ವಿಠuಲ ನಾಯಕ, ಶ್ರವಣಕುಮಾರ ಮೌಸಲಗಿ, ಆನಂದ ಇಂಗಳಗಿ, ರಿಚರ್ಡ್ ಮರೆಡ್ಡಿ, ಬಸವರಾಜ ಕೀರಣಗಿ, ದೌಲತ್ತರಾವ್ ಚಿತ್ತಾಪುರಕರ, ಅಂಬ್ರಿàಶ ಮಾಳಗಿ, ಜಗತ್ ಸಿಂಗ್ ರಾಠೊಡ, ವಿಶಾಲ ನಿಂಬರ್ಗಾ ಮತ್ತಿತರರು ಪಾಲ್ಗೊಂಡಿದ್ದರು.
ಪುರಸಭೆ ಚುನಾವಣೆಯಲ್ಲಿ ಪಕ್ಷದ ಮುಖಂಡರ ವಿರುದ್ಧ ಅಸಮಾದಾನ ವ್ಯಕ್ತಪಡಿಸಿ ರಾಜೀನಾಮೆಗೆ ಮುಂದಾಗಿದ್ದ ಸ್ಥಳೀಯ ಶಕ್ತಿ ಕೇಂದ್ರದ ಅಧ್ಯಕ್ಷ ಹರಿ ಗಲಾಂಡೆ, ಪ್ರಧಾನ ಕಾರ್ಯದರ್ಶಿ ರಾಜೇಶ ಕಾಂಬಳೆ ಅನುಪಸ್ಥಿತಿ ಚರ್ಚೆಗೆ ಗ್ರಾಸವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.