ರಕ್ತದಾನ ಯುವ ಜನತೆ ಹೊಣೆಗಾರಿಕೆ: ಜಿಲ್ಲಾಧಿಕಾರಿ
Team Udayavani, Oct 5, 2018, 10:53 AM IST
ಕಲಬುರಗಿ: ದಾನಗಳಲ್ಲಿ ರಕ್ತದಾನ ಮಹಾದಾನ. ಜನರ ಜೀವರಕ್ಷಣೆಗೆ ರಕ್ತ ಅಗತ್ಯವಾಗಿದ್ದು, ಯುವಜನತೆ ರಕ್ತದಾನವನ್ನು ತಮ್ಮ ಹೊಣೆಗಾರಿಕೆಯನ್ನಾಗಿ ಭಾವಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಹೇಳಿದರು.
ಶರಣಬಸವೇಶ್ವರ ವಿಜ್ಞಾನ ಕಾಲೇಜು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಕ್ತದಾನ ಮಾಡಿದರೆ ಪ್ರಾಣದಾನ ಮಾಡಿದಂತೆ. ರಕ್ತದಾನ ಪ್ರತಿಯೊಬ್ಬರ ಜವಾಬ್ದಾರಿ ಎನ್ನುವುದನ್ನು ಯುವಜನತೆ ತಿಳಿದುಕೊಳ್ಳಬೇಕು ಎಂದರು. ಮುಖ್ಯ ಅತಿಥಿಯಾಗಿದ್ದ ಎಸ್‌ಪಿ ಎನ್. ಶಶಿಕುಮಾರ ಮಾತನಾಡಿ, ರಕ್ತಕ್ಕೆ ಯಾವುದೇ
ಪರ್ಯಾಯವಿಲ್ಲ. ಅದನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ, ಯುವಜನತೆ ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡಿದರೆ ಮಾತ್ರ ರೋಗಿಗಳ ಪ್ರಾಣ ಉಳಿಸಲು ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮಾತನಾಡಿ, ಸೇವೆಗಳಲ್ಲಿ ಅನೇಕ ವಿಧಗಳಿದ್ದು, ಅವುಗಳಲ್ಲಿ ಅಮೂಲ್ಯ ಹಾಗೂ ತೃಪ್ತಿ ತರುವ ಸೇವೆ ರಕ್ತದಾನ. ವೈದ್ಯರ ಸಲಹೆಯಂತೆ ನಿಯಮಿತವಾಗಿ ರಕ್ತದಾನ ಮಾಡಿದರೆ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ವಿದ್ಯಾರ್ಥಿಗಳಿಗೆ ನೆನಪಿನ ಶಕ್ತಿ, ಏಕಾಗ್ರತೆ, ಕಾರ್ಯಕ್ಷಮತೆ ಹೆಚ್ಚುತ್ತದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ| ಡಿ.ಟಿ. ಅಂಗಡಿ ಮಾತನಾಡಿ, ಯುವಕ-ಯುವತಿಯರು ಕಡ್ಡಾಯವಾಗಿ ರಕ್ತದಾನ ಮಾಡಬೇಕು ಎಂದು ಹೇಳಿದರು.
ಸುಮಾರು 35 ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಪಸಭಾಪತಿ ಅರುಣಕುಮಾರ ಲೋಯಾ, ಕಾರ್ಯದರ್ಶಿ ರವೀಂದ್ರ ಶಾಬಾದಿ, ಭಾಗ್ಯಲಕ್ಷ್ಮಿ ಎಂ., ಸಂಚಾಲಕ ಜಿ.ಎಸ್. ಪದ್ಮಾಜಿ, ಗೌರಮ್ಮ ಪಾಟೀಲ, ಡಾ| ಚಿತ್ರಲೇಖ ಆಲೂರ ಹಾಜರಿದ್ದರು. ಉಷಾರಾಣಿ ಪ್ರಾರ್ಥಿಸಿದರು, ಅರ್ಚನಾ ಸಿ.ಎನ್. ಸ್ವಾಗತಿಸಿದರು. ರೆಡ್‌ಕ್ರಾಸ್ ಸಂಸ್ಥೆ ಕಾರ್ಯದರ್ಶಿ ರವೀಂದ್ರ ಶಾಬಾದಿ ವಂದಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.