ಗಡಿಭಾಗದಲ್ಲಿ ಶಿಕ್ಷಣ ಪ್ರಗತಿಗೆ ಹೆಚ್ಚಿನ ಆದ್ಯತೆ
Team Udayavani, Jun 23, 2017, 3:31 PM IST
ಚಿಂಚೋಳಿ: ತೆಲಂಗಾಣ ಗಡಿಭಾಗಕ್ಕೆ ಹೊಂದಿಕೊಂಡಿರುವ ಕುಂಚಾವರಂ ಗಡಿಭಾಗದಲ್ಲಿ ಶಿಕ್ಷಣ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇಲ್ಲಿನ ಪ್ರತಿಯೊಬ್ಬ ಕೂಲಿಕಾರ್ಮಿಕರ ಹಾಗೂ ರೈತರ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗ ಪಡೆದುಕೊಳ್ಳಲು ಸರಕಾರಿ ಕೈಗಾರಿಕೆ ತರಬೇತಿ ಕೇಂದ್ರ(ಐಟಿಐ) ಕಾಲೇಜು ಮಂಜೂರಿಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಸದೀಯ ಕಾರ್ಯದರ್ಶಿ ಡಾ| ಉಮೇಶ ಜಾಧವ ಹೇಳಿದರು.
ತಾಲೂಕಿನ ಪೋಚಾವರಂ ಗ್ರಾಮದಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕೈಗಾರಿಕೆ ತರಬೇತಿ ಕೇಂದ್ರ(ಐಟಿಐ)ಕಾಲೇಜು ಕಟ್ಟಡ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು. ಕುಂಚಾವರಂ ಗುಡ್ಡಗಾಡು ಅರಣ್ಯ ಪ್ರದೇಶದಲ್ಲಿ ವಾಸಿಸುವ ತಾಂಡಾ-ಗ್ರಾಮಗಳ ಬಡವರ ಮಕ್ಕಳು ಶಿಕ್ಷಣ ಪಡೆದುಕೊಳ್ಳಬೇಕು.
ಶಿಕ್ಷಣದಿಂದಲೇ ಎಲ್ಲವೂ ಪ್ರಗತಿಯಾಗಲಿದೆ. ಈ ಕಾರಣಕ್ಕಾಗಿಯೇ 2013-14ನೇ ಸಾಲಿನಲ್ಲಿ ಐಟಿಐ ಕಾಲೇಜು ಮಂಜೂರಿಗೊಳಿಸಲಾಗಿದೆ ಎಂದು ಹೇಳಿದರು. ಗಡಿ ಪ್ರದೇಶದ ಜನರಿಗೆ ರಸ್ತೆ, ಕುಡಿಯುವ ನೀರು, ಸಾರಿಗೆ ಸಂಪರ್ಕ, ಶಾಲಾ ಕಟ್ಟಡ, ವಿದ್ಯುತ್ ಉಪಕೇಂದ್ರ, ಅಲ್ಲದೇ ಅಟಲ್ ಜನಸ್ನೇಹಿ ಕೇಂದ್ರ ಪ್ರಾರಂಭಿಸಿ ಅನುಕೂಲ ಮಾಡಿಕೊಳ್ಳಲಾಗಿದೆ.
ಗಡಿ ಪ್ರದೇಶದ ಜನರಿಗೆ ನೀಡಿದ ಭರವಸೆ ಈಡೇರಿಸಲಾಗುತ್ತಿದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅ ಧಿಕಾರಕ್ಕೆ ಬಂದ ನಂತರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳಲ್ಲಿ ಶೇ 80ರಷ್ಟು ಈಡೇರಿಸಲಾಗಿದೆ. ಅಧಿಕಾರದಲ್ಲಿರುವುದು ಮುಖ್ಯವಲ್ಲ. ಅಧಿಕಾರದಲ್ಲಿದ್ದಾಗ ಮಾಡುವ ಅಭಿವೃದ್ಧಿ ಕೆಲಸಗಳು ಮುಖ್ಯವಾಗಿವೆ. ಕೈಗಾರಿಕೆ ತರಬೇತಿ ಕೇಂದ್ರ ಕಾಲೇಜು ಕಟ್ಟಡವನ್ನು ಜನವರಿ 2018ರೊಳಗೆ ಪೂರ್ಣಗೊಳಿಸಬೇಕು.
ಕುಂಚಾವರಂ ಗಡಿಪ್ರದೇಶದ ಸರ್ವತೋಮುಖ ಅಭಿವೃದ್ಧಿಗೆ ಕಳೆದ 4 ವರ್ಷಗಳಿಂದ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗಿದೆ ಎಂದು ಹೇಳಿದರು. ಕುಂಚಾವರಂ ಗ್ರಾಪಂ ಅಧ್ಯಕ್ಷ ಗೋಪಾಲ, ತಾಪಂ ಸದಸ್ಯ ಚಿರಂಜೀವಿ ಶಿವರಾಮಪುರ, ನರಸಿಂಹಲೂ ಸವಾರಿ, ನರಸಿಂಹಲು ಕುಂಬಾರ ಮಾತನಾಡಿದರು.
ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ, ತಾಪಂ ಇಒ ಅನೀಲಕುಮಾರ ರಾಠೊಡ, ಜಿಪಂ ಸದಸ್ಯೆ ಹೀರುಬಾಯಿ ಜಾಧವ, ಅಕಬರ್ ಪೋಚಾವರಂ, ಸಂಗಮೇಶ, ಸ್ಯಾಮುವೆಲ್, ಎಇಇ ಅಶೋಕ ತಳವಾಡೆ, ಜೆಸ್ಕಾಂ ಎಇಇ ಮಹೇಂದ್ರಕುಮಾರ ಸಿಂಧೆ, ಅರುಣ ಪವಾರ, ರಾಮಚಂದ್ರ ಜಾಧವ, ಗುತ್ತಿಗೆದಾರ ಸಂಜೀವಕುಮಾರ ಮನೋಜಕುಮಾರ, ವೆಂಕಟರೆಡ್ಡಿ ಕಸ್ತೂರಿ ಇದ್ದರು. ಪ್ರಾಚಾರ್ಯ ಗಣಪತಿ ಸ್ವಾಗತಿಸಿದರು. ಶರಣಗೌಡ ಪಾಟೀಲ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.