ಅವಿನಾಶ ಗೆದ್ದರೆ ಬಿಎಸ್‌ವೈ ಸರ್ಕಾರ ರಚನೆ: ಸೋಮಣ್ಣ
Team Udayavani, Apr 30, 2019, 12:07 PM IST
ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರಿಗೆ ಶಕ್ತಿ ತುಂಬಲು ಮತ್ತು ಅವರ ಕೈಬಲಪಡಿಸಲು ಚಿಂಚೋಳಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಡಾ| ಅವಿನಾಶ್ ಜಾಧವ್ ಅವರನ್ನು ಗೆಲ್ಲಿಸಬೇಕು. ಚಿಂಚೋಳಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಯಡಿಯೂರಪ್ಪನವರು ಸರ್ಕಾರ ರಚಿಸುವುದು ಖಚಿತ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದರು.
ಚಿಂಚೋಳಿಯಲ್ಲಿ ಸೋಮವಾರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಡಾ| ಅವಿನಾಶ್ ಜಾಧವ್ ನಾಮಪತ್ರ ಸಲ್ಲಿಕೆ ನಂತರ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಅವರು ಮತನಾಡಿದರು.
ಇದು ಅವಿನಾಶ್ ಜಾಧವ್ ಚುನಾವಣೆ ಅಲ್ಲ. ಇದೊಂದು ಅಭಿವೃದ್ಧಿ ಪರವಾದ ಚುನಾವಣೆಯಾಗಿದೆ. ಚಿಂಚೋಳಿ ಮತದಾರರಿಗೆ ಈ ಬಾರಿ ಒಂದು ಕಲ್ಲಲ್ಲಿ ಎರಡು ಹಕ್ಕಿ ಹೊಡೆಯುವ ಅವಕಾಶ ಸಿಕ್ಕಿದೆ. ಡಾ| ಉಮೇಶ ಜಾಧವ್ ಅವರನ್ನು ದೆಹಲಿಗೆ ಮತ್ತು ಅವರ ಮಗ ಡಾ| ಅವಿನಾಶ್ ಜಾಧವ್ ಅವರನ್ನು ಬೆಂಗಳೂರಿಗೆ ಕಳಿಸುವುದರೊಂದಿಗೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ, ನರೇಂದ್ರ ಮೋದಿ ಪ್ರಧಾನಿ ಮಾಡುವ ಅವಕಾಶವೆಂದರು.
ಕಾಂಗ್ರೆಸ್‌ನ ಅಪವಿತ್ರ ಮೈತ್ರಿಯಿಂದ ರಾಜ್ಯದಲ್ಲಿ ಉಪಚುನಾವಣೆ ಬಂದಿದೆ. ರಾಜ್ಯದಲ್ಲಿ ಭೀಕರ ಬರ, ಕುಡಿಯುವ ನೀರಿನ ತೊಂದರೆ ಇದೆ. ಆದರೆ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇಚರ್ ಕ್ಯೂರ್‌ಗೆ ಹೋಗುತ್ತಾರೆ. ಮೈತ್ರಿ ಸರ್ಕಾರ ಸತ್ತಿದ್ದು, ಈ ಸರ್ಕಾರ ಕಿತ್ತೆಸೆಯಲು ನೀವೆಲ್ಲ ಮುಂದಾಗಬೇಕೆಂದು ಮನವಿ ಮಾಡಿದರು.
ಡಾ| ಉಮೇಶ ಜಾಧವ್ ಮಾತನಾಡಿ, ಚಿಂಚೋಳಿ ನನ್ನನ್ನು ಎರಡು ಬಾರಿ ಶಾಸಕನಾಗಿ ಗೆಲ್ಲಿಸಿದ್ದೀರಿ. ನಾನು ಏಳು ಜನ್ಮ ಎತ್ತಿ ಬಂದರೂ ನಿಮ್ಮ ಋಣ ತೀರಿಸಲು ಆಗುವುದಿಲ್ಲ. ಚಿಂಚೋಳಿ ಕ್ಷೇತ್ರವನ್ನು ಸಮ್ಮಿಶ್ರ ಸರ್ಕಾರ ಕಡೆಗಣಿಸಿದ್ದರಿಂದ ನಾನು ರಾಜೀನಾಮೆ ಕೊಟ್ಟು ಬಿಜೆಪಿಗೆ ಸೇರ್ಪಡೆ ಆಗಿದ್ದೇನೆ ಎಂದರು.
ನಾನು ಪುತ್ರ ವ್ಯಾಮೋಹಿ ಅಲ್ಲ. ಕಾರ್ಯಕರ್ತರ ಒತ್ತಡದಿಂದ ನನ್ನ ಮಗ ಅವಿನಾಶ್ ಜಾಧವ್‌ನ್ನು ರಾಜಕೀಯಕ್ಕೆ ತಂದಿದ್ದೇನೆ. ನನ್ನ ಮಗನನ್ನು ನಿಮ್ಮ ಜೋಳಿಗೆಗೆ ಹಾಕಿದ್ದು, ಅವ ನನ್ನ ಮಗನಲ್ಲ. ನಿಮ್ಮ ಮಗ. ಅವನನ್ನು ರಾಜಕೀಯಕ್ಕೆ ಕರೆತರುವ ಅವಶ್ಯಕತೆ ಇರಲಿಲ್ಲ. ಆದರೆ, ನಿಮ್ಮೆಲ್ಲರ ಸೇವೆ ಮಾಡಲು ರಾಜಕೀಯಕ್ಕೆ ಕರೆ ತಂದಿದ್ದೇನೆ. ಅವನನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದು. ಯಡಿಯೂರಪ್ಪ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ. ಮೋದಿ ಮತ್ತೂಮ್ಮೆ ಪ್ರಧಾನಿ ಆಗುತ್ತಾರೆ. ನಾನು ಸಂಸದನಾಗುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಸಚಿವ, ಬಿಜೆಪಿ ಮುಖಂಡ ಬಾಬುರಾವ ಚಿಂಚನಸೂರ ಮಾತನಾಡಿ, ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಡಾ| ಅವಿನಾಶ್ ಜಾಧವ ಗೆಲ್ಲಿಸಬೇಕು. ಚಿಂಚೋಳಿ ಫಲಿತಾಂಶ ಬಂದ 24 ಗಂಟೆಯಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗುವುದು ಖಚಿತ ಎಂದರು.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ, ಬೀದರ ಸಂಸದ ಭಗವಂತ ಖೂಬಾ, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ನಗರಾಧ್ಯಕ್ಷ, ಎಂಎಲ್ಸಿ ಬಿ.ಜಿ. ಪಾಟೀಲ, ಶಾಸಕರಾದ ಬಸವರಾಜ ಮತ್ತಿಮಡು, ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ, ಹಿರಿಯ ಮುಖಂಡರಾದ ಶಶೀಲ್ ಜಿ.ನಮೋಶಿ, ಸುನಿಲ್ ವಲ್ಲ್ಯಾಪುರೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.