ಕಾಂಗ್ರೆಸ್‌ ನಾಯಕರಿಗೆ ಬುದ್ದಿ ಭ್ರಮಣೆ: ಖೂಬಾ

Team Udayavani, Mar 27, 2022, 10:29 AM IST

Udayavani Kannada Newspaper

ಕಾಳಗಿ: ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಕಾಂಗ್ರೆಸ್‌ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಜಾಬ್‌ ವಿವಾದದಲ್ಲಿ ಸಂಬಂಧವೇ ಇಲ್ಲದ ಸ್ವಾಮೀಜಿಗಳನ್ನು ಎಳೆಯುತ್ತಿರುವುದು ನೋಡಿದರೆ ಕಾಂಗ್ರೆಸ್‌ ನಾಯಕರಿಗೆ ಬುದ್ಧಿ ಭ್ರಮಣೆಯಾದಂತೆ ಕಾಣುತ್ತಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು

ಪಟ್ಟಣದ ನೀಲಕಂಠ ಕಾಳೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕು ನಾಗರಿಕ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.

ದೇಶದಲ್ಲಿ ಕಾಂಗ್ರೆಸ್‌ ಧೂಳಿಪಟವಾಗಿದ್ದು, ರಾಜ್ಯದಲ್ಲಿ ಅಧಿಕಾರ ಹಿಡಿಯಲು ಜಾತಿಮತಗಳ ವಿಷ ಬೀಜ ಬಿತ್ತಿ ಕೋಮು ಕಲಭೆಗಳನ್ನು ಸೃಷ್ಟಿಸುತ್ತಾ ತಪ್ಪು ಮಾಡುವವರಿಗೆ ಬೆಂಬಲ ನೀಡುತ್ತಿದ್ದಾರೆ. ಶಾಲೆಯ ಮಕ್ಕಳಲ್ಲಿ ಎಲ್ಲರೂ ಸಮಾನರು ಎಂಬ ದೃಷ್ಟಿಯಿಂದ ಶಾಲೆಯಲ್ಲಿ ಹಿಜಾಬ್‌ ಬಳಸದಂತೆ ಕೋರ್ಟ್‌ ತೀರ್ಪು ನೀಡಿದರೂ ಕಾನೂನಿಗೆ ಗೌರವ ಕೊಡದೇ ಕಾಂಗ್ರೆಸ್‌ ನವರು ಅಲ್ಪಸಂಖ್ಯಾತರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಲಬುರಗಿ ಸಂಸದ ಡಾ| ಉಮೇಶ ಜಾಧವ ಮಾತನಾಡಿ, ತಾಲೂಕಿನ ಜನರಿಗೆ ನ್ಯಾಯ ಕೊಡಿಸುವಲ್ಲಿ ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಟಾಳ ಕೊಡುಗೆ ಅಪಾರವಾಗಿದೆ. ಇವರೊಬ್ಬ ಮಾದರಿ ರಾಜಕಾರಣಿಯಾಗಿದ್ದಾರೆ ಎಂದರಲ್ಲದೇ, ಮುಂದಿನ ಪೀಳಿಗೆಗೆ ಕಾಳಗಿ ತಾಲೂಕು ಕೇಂದ್ರ ಸಾಕಷ್ಟು ಅನುಕೂಲವಾಗುವಂತೆ ಮಾಡಲಾಗುವುದು ಎಂದರು.

ಮಾಜಿ ಸಚಿವ ಹಾಗೂ ಅಂಬಿಗರ ಚೌಡಯ್ಯ ನಿಗಮ ಅಧ್ಯಕ್ಷ ಬಾಬುರಾವ್‌ ಚಿಂಚನಸೂರ ಮಾತನಾಡಿ, 60 ವರ್ಷ ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದರೂ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡಿಲ್ಲ. ಮನಸ್ಸು ಮಾಡಿದ್ದರೆ ಡಾ| ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸಚಿವರಾಗಿದ್ದಾಗಲೇ ಈ ಕೆಲಸ ಮಾಡಬಹುದಿತ್ತು. ಆದರೆ ನಮ್ಮನ್ನು ರಾಜಕೀಯವಾಗಿ ಬಳಸಿಕೊಂಡು ದ್ರೋಹ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನವ ಭಾರತ ನಿರ್ಮಾಣದ ಕನಸು ಕಂಡ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡೇ ತೀರುತ್ತೇನೆ ಎಂದು ಹೇಳಿದರು.

ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ ಮಾತನಾಡಿ, ಕಾಂಗ್ರೆಸ್‌ ಅವನತಿಯತ್ತ ಸಾಗುತ್ತಿದ್ದು ಬಿಜೆಪಿ ಮತ್ತೊಮ್ಮೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ. ಜೀವನಪೂರ್ತಿ ಕಾಂಗ್ರೆಸ್‌ನಲ್ಲಿದ್ದ ನಾನು ಮತ್ತು ಚಿಂಚನಸೂರ ಕೊನೆಗಾಲದಲ್ಲಾದರೂ ದೇಶ, ಧರ್ಮ ರಕ್ಷಣೆಗೆ ಮಾಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷದಲ್ಲಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ ಎಂದರು.

ಕಾಳಗಿ ತಾಲೂಕು ನಾಗರಿಕ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಟಾಳ ಮಾತನಾಡಿ, ಅಭಿನಂದನಾ ಸಮಾರಂಭ ಯಾವುದೇ ರಾಜಕೀಯ ದುರದ್ದೇಶದಿಂದ ಮಾಡಿಲ್ಲ. ತಾಲೂಕಿನ ಇನ್ನುಳಿದ ಅಭಿವೃದ್ಧಿಗಾಗಿ ಮಾತ್ರ ಈ ಕಾರ್ಯಕ್ರಮ ಮಾಡಿದ್ದೇವೆ ಎಂದು ಹೇಳಿದರು.

ಚಿಂಚೋಳಿ-ಕಾಳಗಿ ಶಾಸಕ ಡಾ| ಅವಿನಾಶ ಜಾಧವ, ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್‌ ಸದಸ್ಯ ಬಿ.ಜಿ ಪಾಟೀಲ, ನಿವೃತ್ತ ನ್ಯಾಯಾಧಿಧೀಶ ಚನ್ನಮಲ್ಲಪ್ಪ ಬೆನಕನಳ್ಳಿ, ಭೂದಾನಿಗಳಾದ ಶಿವಶರಣಪ್ಪ ಕಮಲಾಪುರ, ನಿಂಗಯ್ಯ ಗುತ್ತೇದಾರ, ತುಳಸಿರಾಮ ಚವ್ಹಾಣ, ಅಸ್ಲಂಬೇಗ್‌ ಬಿಜಾಪುರ ಅವರನ್ನು ನಾಗರಿಕ ಸಮಿತಿಯಿಂದ ಸನ್ಮಾನಿಸಲಾಯಿತು. ಮುಖಂಡರಾದ ಮಲ್ಲಿನಾಥ ಪಾಟೀಲ ಕಾಳಗಿ, ರೇವಣಸಿದ್ಧಪ್ಪ ಮಾಸ್ಟರ್‌ ಚಿಂಚೋಳಿ, ರಮೇಶ ಚಿಂಚನಸೂರ, ಶೇಖರ ಪಾಟೀಲ, ರಾಮಲಿಂಗರೆಡ್ಡಿ ದೇಶಮುಖ, ಶರಣಗೌಡ ಪೊಲೀಸ್‌ ಪಾಟೀಲ, ಶಿವರಾಜ ಪಾಟೀಲ ಗೊಣಗಿ, ಬಸವರಾಜ ಶಿವಗೋಳ, ಜಗದಿಧೀಶ ಪಾಟೀಲ, ಚಂದ್ರಶೇಖರ ಹರಸೂರ, ರಾಜಕುಮಾರ ರಾಜಾಪುರ ಇದ್ದರು.

ಟಾಪ್ ನ್ಯೂಸ್

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Udupi: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Udupi: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.