ಸ್ಟೀಯರಿಂಗ್ ತುಂಡಾಗಿ ಮರಕ್ಕೆ ಢಿಕ್ಕಿ ಹೊಡೆದ ಬಸ್: 25 ಜನರಿಗೆ ಗಾಯ, ಮೂವರು ಗಂಭೀರ
Team Udayavani, Feb 9, 2020, 1:35 PM IST
ಕಲಬುರಗಿ: ಮರಕ್ಕೆ ಸಾರಿಗೆ ಬಸ್ ಗುದ್ದಿದ ಪರಿಣಾಮ ಸುಮಾರು 25 ಜನರು ಗಾಯಗೊಂಡ ಘಟನೆ ರವಿವಾರ ಬೆಳಿಗ್ಗೆ ಜಿಲ್ಲೆಯ ಚಿಂಚೋಳಿ ಶುಗರ್ ಮಿಲ್ ಆ್ಯಂಡ್ ಬಯೋ ಇಂಡಸ್ಟ್ರೀಸ್ ಬಳಿ ನಡೆದಿದೆ.
ಚಿಂಚೋಳಿಯಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಹೊರಟಿದ್ದ ಬಸ್ ನ ಸ್ಟೀಯರಿಂಗ್ ತುಂಡಾದ್ದರಿಂದ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕ ಸೇರಿದಂತೆ 25 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಮೂವರ ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಒಟ್ಟು ಆರು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ನಿಲ್ದಾಣದಿಂದ ಹೊರಟ ಮೂರು ಕಿ.ಮೀ. ಅಂತರದಲ್ಲಿಯೇ ಈ ಅವಘಡ ಸಂಭವಿಸಿದೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಸಬ್ ಇನಸ್ಪೆಕ್ಟರ್ ರಾಜಶೇಖರ ರಾಠೋಡ ಹಾಗೂ ಮೊದಲಾದವರು ಭೇಟಿ ನೀಡಿ, ಪರಿಶೀಲಿಸಿದರು. ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.