ತೊಗರಿ ಭಾವಾಂತರದಡಿ ಖರೀದಿಸಿ
Team Udayavani, Dec 14, 2018, 11:28 AM IST
ಕಲಬುರಗಿ: ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ದರದ ಸ್ಥಿರತೆ ಕಾಪಾಡುವ ಹಾಗೂ ರೈತರ ಜತೆಗೆ ವ್ಯಾಪಾರಿಗಳ ಹಿತ ಕಾಪಾಡುವ ಭಾವಾಂತರ ಯೋಜನೆ ಅಡಿ ಪ್ರಸಕ್ತವಾಗಿಯೇ ತೊಗರಿ ಖರೀದಿಸುವಂತೆ ಹಾಗೂ ಬಂದ್ ಆಗಿರುವ ದಾಲ್‌ಮಿಲ್ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವಂತೆ ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ (ಎಚ್‌ಕೆಸಿಸಿಐ) ಸಂಸ್ಥೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ಮನವಿ ಸಲ್ಲಿಸಿದೆ.
ಈಗಾಗಲೇ ತೊಗರಿ ರಾಶಿಯಾಗಿ ಮಾರುಕಟ್ಟೆಗೆ ಪ್ರವೇಶಿಸುತ್ತಿದೆ. ಆದರೆ ಇಲ್ಲಿ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿಗೆ ಮುಂದಾದಲ್ಲಿ ರೈತರಿಗೆ ಸ್ವಲ್ಪ ಅನುಕೂಲವಾಗುತ್ತಿ¨. ಆದರೆ ವ್ಯಾಪಾರಿ (ಮಧ್ಯವರ್ತಿ)ಗಳಿಗೆ ಯಾವುದೇ ಅನುಕೂಲವಿಲ್ಲ. ಹೀಗಾಗಿ ಮಾರುಕಟ್ಟೆ ವ್ಯವಸ್ಥೆಗೆ
ಹೊಡೆತ ಬೀಳುತ್ತಿದೆ. ರೈತ ಹಾಗೂ ಮಧ್ಯವರ್ತಿ ಈ ಇಬ್ಬರ ಹಿತ ಕಾಪಾಡುವ ಭಾವಾಂತರ ಯೋಜನೆ ಕಾರ್ಯಾನುಷ್ಠಾನ ಗೊಳಿಸುವಂತೆ ಎಚ್‌ಕೆಸಿಸಿಐ ಅಧ್ಯಕ್ಷ ಅಮರನಾಥ ಪಾಟೀಲ ಹಾಗೂ ಗೌರವ ಕಾರ್ಯದರ್ಶಿ ಶಶಿಕಾಂತ ಪಾಟೀಲ ಸಿಎಂಗೆ ಬರೆಯಲಾದ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಪುನಶ್ಚೇತನಾ ವರದಿ ಧೂಳು: ಹಲವಾರು ಕಾರಣಗಳಿಂದ ಈ ಭಾಗದ ಪ್ರಮುಖ ಉದ್ಯಮವಾಗಿರುವ ದಾಲ್ ಮಿಲ್‌ಗಳು ಬಂದ್‌ಗಿರುವ ಹಾಗೂ ಪುನಶ್ಚೇತನಾ ಕುರಿತಾಗಿ ಜಿಲ್ಲಾ ಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿ 11 ತಿಂಗಳುಗಳು ಗತಿಸಿದರೂ ಯಾವುದೇ ಬಗೆಯ ಆರ್ಥಿಕ ನೆರವಿನ ಪ್ಯಾಕೆಜ್‌ನ್ನು ಘೋಷಿಸಿರುವುದಿಲ್ಲ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿಗಳಿಗೂ ನಿಯೋಗದ ಮೂಲಕ ತೆರಳಿ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಲಾಗಿತ್ತು. ಆದರೆ ಇಂದಿನ ದಿನದವರೆಗೂ ಯಾವುದೇ ಚಕಾರವಿಲ್ಲ.
ಮುಖ್ಯವಾಗಿ ಪ್ರಸಕ್ತ ಚಾಲ್ತಿಯಲ್ಲಿರುವ ಬೆಳಗಾವಿ ಅಧಿವೇಶನದಲ್ಲೂ ಭಾವಾಂತರ ಯೋಜನೆ ಅಳವಡಿಸುವ ಇಲ್ಲವೆ ದಾಲ್ ಮಿಲ್‌ಗಳಿಗೆ ವಿಶೇಷ ನೆರವು ನೀಡುವ ಯಾವುದೇ ಸೂಚನೆಗಳು ಕಂಡು ಬರುತ್ತಿಲ್ಲ. ಬರೀ ಆಶ್ವಾಸನೆಗಳನ್ನು ನೀಡಲಾಗುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಪಾಟೀಲ್‌ದ್ವಯರು ಕಳವಳ ವ್ಯಕ್ತಪಡಿಸಿದ್ದಾರೆ.
ತೊಗರಿ ಭಾವಾಂತರ ಯೋಜನೆಯಡಿ ಸೇರ್ಪಡೆ ಹಾಗೂ ದಾಲ್‌ಮಿಲ್‌ಗಳ ಪುನಶ್ಚೇತನಾ ಸಂಬಂಧವಾಗಿ ಎಚ್‌ಕೆಸಿಸಿಐಗೆ ಈ ಹಿಂದೆ ಭೇಟಿ ನೀಡಿದ್ದ ಸಹಕಾರ ಸಚಿವ ಬಂಡೆಪ್ಪ ಖಾಶೆಂಪೂರ ಗಮನಕ್ಕೂ ತರಲಾಗಿದೆ. ಅಲ್ಲದೇ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ| ಟಿ.ಎನ್. ಪ್ರಕಾಶ ಕಮ್ಮರಡಿ ಅವರಿಗೂ ಮನವಿ ಸಲ್ಲಿಸಿದ ವೇಳೆ ಅವರು ಸಹಾಯ ಕಲ್ಪಿಸುವುದಾಗಿ ಭರವಸೆ ನೀಡಿದ್ದರು ಎಂದು ತಿಳಿಸಿದ್ದಾರೆ.
ಈಗ ಉತ್ತರ ಕರ್ನಾಟಕದ ರೈತರ ಎ.ಪಿ.ಎಂ.ಸಿ. ವರ್ತಕರ ಹಾಗೂ ದಾಲ್ ಮಿಲ್‌ಗಳ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ನೇರ ಖರೀದಿ ನೀತಿಯಿಂದಾಗಿ ರೈತರಿಗೆ, ಎಪಿಎಂಸಿ ವರ್ತಕರಿಗೆ, ಹಾಗೂ ದಾಲ್‌ಮಿಲ್‌ಗಳಿಗೆ ಆಗುತ್ತಿರುವ ಅನ್ಯಾಯವನ್ನು ಮನವರಿಕೆ ಮಾಡಿಕೊಟ್ಟು, ಭಾವಾಂತರ ಯೋಜನೆಯ ಅಳವಡಿಕೆ ಹೇಗೆ
ಸಹಕಾರಿಯಾಗಬಲ್ಲದು ಎಂದು ವಿವರಿಸಲು ಯೋಚಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.