Kalaburagi; ಸೆ.17ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ; ದಿನಾಂಕ ಅಂತಿಮಗೊಳಿಸಿ ಅಧಿಸೂಚನೆ
Team Udayavani, Sep 6, 2024, 2:46 PM IST
ಕಲಬುರಗಿ: ಹತ್ತು ವರ್ಷಗಳ ನಂತರ ತೊಗರಿನಾಡು ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆಗೆ ಮುಹೂರ್ತ ನಿಗದಿಯಾಗಿದೆ. ಸೆಪ್ಟೆಂಬರ್ 17ರ ಸಂಜೆ 4 ಕ್ಕೆ ಕಲಬುರಗಿ ನಗರದ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸಂಪುಟ ಸಭೆ ನಿಗದಿಗೊಳಿಸಲಾಗಿದೆ.
ಕಲಬುರಗಿಯಲ್ಲಿ ಪ್ರಸಕ್ತ ಸಾಲಿನ 19ನೇ ಸಚಿವ ಸಂಪುಟ ಸಭೆ ಎಂಬುದಾಗಿ ಸಚಿವ ಸಂಪುಟದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಸೂಚನೆ ಹೊರಡಿಸಿದ್ದಾರೆ.
ಮುಖ್ಯಮಂತ್ರಿಗಳು ಸೆಪ್ಟೆಂಬರ್ 17ರ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸುವರು. ಈ ನಿಟ್ಟಿನಲ್ಲಿ ಮುಂದಿನ ಐದು ದಿನದೊಳಗೆ ಆಯಾ ಇಲಾಖೆಗಳು ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ.
ಕಲಬುರಗಿಯಲ್ಲಿ ಈ ಹಿಂದೆ 2014 ರ ನವೆಂಬರ್ 28 ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದರೆ ಈಗ ಹತ್ತು ವರ್ಷಗಳ ನಂತರ ಅವರದ್ದೆ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆಗೆ ದಿನಾಂಕ ನಿಗದಿಯಾಗಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಎರಡನೇ ಸಂಪುಟ ಸಭೆ ಇದಾಗಲಿದೆ.
ಅದರಕ್ಕಿಂತ ಮುಂಚೆ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸತತವಾಗಿ 2008ರ ಸೆಪ್ಟೆಂಬರ್ 26 ರಂದು, 2009 ರ ಆಗಸ್ಟ್ 27 ಹಾಗೂ 2010ರ ಆಕ್ಟೋಬರ್ 10 ರಂದು ಕಲಬುರಗಿಯಲ್ಲಿ ಸಚಿವ ಸಂಪುಟದ ಸಭೆಗಳು ನಡೆದಿವೆ. ಅದರಕ್ಕಿಂತ ಮುಂಚೆ ಗುಂಡೂರಾವ್ ಸಿಎಂ ಆಗಿದ್ದಾಗ ಕಲಬುರಗಿಯಲ್ಲಿ ತದನಂತರ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ 2012 ರ ಆಕ್ಟೋಬರ್ 18 ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆದಿದೆ. ಒಟ್ಟಾರೆ ಗುಂಡೂರಾವ್ ನೇತೃತ್ವದಲ್ಲಿ ಒಂದು ಯಡಿಯೂರಪ್ಪ ನೇತೃತ್ವದಲ್ಲಿ ಮೂರು ಹಾಗೂ ಶೆಟ್ಟರ್ ನೇತೃತ್ವದಲ್ಲಿ ಒಂದು ಸಭೆ ನಡೆದಿದ್ದರೆ ಈಗ ಸಿದ್ದರಾಮಯ್ಯ ನೇತೃತ್ವದಲ್ಲಿ ಎರಡನೆಯದ್ದು ಹಾಗೂ ರಾಜ್ಯ ಸರ್ಕಾರದ ಒಟ್ಟಾರೆ ಏಳನೇ ಸಂಪುಟ ಸಭೆ ಎನ್ನಬಹುದಾಗಿದೆ.
ಹಣಮಂತರಾವ ಭೈರಾಮಡಗಿ, ಕಲಬುರಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.