Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ
ರಾಜ್ಯ ಬಜೆಟ್ ಗಾತ್ರದಷ್ಟಿದೆ ಶಾಸಕರ ಬೇಡಿಕೆ ಪಟ್ಟಿ
Team Udayavani, Sep 17, 2024, 6:30 AM IST
ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಸೆ.17ರಂದು ಆಗಮಿಸಲಿದ್ದು, ಬೆಳಗ್ಗೆ ಸರ್ದಾರ್ ವಲ್ಲಭಭಾಯ್ ಪಟೇಲ್ ಪ್ರತಿಮೆ ಮಾಲಾರ್ಪಣೆ ಮಾಡಿ ನಂತರ ಡಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಪ್ರಿಯಾಂಕ್ ಖರ್ಗೆ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಯಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ಸೆ.17ರಂದು ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಈ ಭಾಗದ ಇಲಾಖೆವಾರು ಸಮಗ್ರ ಅಭಿವೃದ್ಧಿ ಕುರಿತು ಚರ್ಚಿಸಿ ನೀಲನಕ್ಷೆ ತಯಾರಿಸುವ ಬಗ್ಗೆಯೂ ನಿರ್ಧರಿಸಲಾಗುವುದು.
ನಮ್ಮ ಭಾಗದ ಎಲ್ಲ ಶಾಸಕರ ಬೇಡಿಕೆ ಪಟ್ಟಿ ನೋಡಿದರೆ ರಾಜ್ಯದ ಬಜೆಟ್ ಗಾತ್ರದಷ್ಟಾಗುತ್ತದೆ. ಆದರೆ ಮ್ಯಾಕ್ರೋ ಯೋಜನೆಯಡಿ ಕಾರ್ಯಕ್ರಮ ತೆಗೆದುಕೊಳ್ಳಲಾಗುವುದು. ಕೊನೆ ಪಕ್ಷ ಈ ಬಾರಿ ಯೋಜನೆಗಳ ಬಗ್ಗೆ ಚರ್ಚಿಸಿದರೆ ಮುಂದಿನ ವರ್ಷವಾದರೂ ಯೋಜನೆ ಬರುತ್ತವೆ ಎಂದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು. ನಮ್ಮ ಸರ್ಕಾರ ಬಂದ ಮೇಲೆ ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ನಮ್ಮ ಇಲಾಖೆಯಲ್ಲಿಯೇ 800 ಎಂಜಿನಿಯರ್‌ಗಳ ಹುದ್ದೆ ಭರ್ತಿ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಹಂತ ಹಂತವಾಗಿ ತುಂಬಲಾಗುವುದು ಎಂದರು.
30 ಸಾವಿರ ಹುದ್ದೆ ಭರ್ತಿ:
ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಮಾತನಾಡಿ, 2013-18ರ ಅವ ಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 13 ಸಾವಿರ ಶಿಕ್ಷಕರು ಸೇರಿದಂತೆ 30 ಸಾವಿರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಮುಂದಿನ ಒಂದು ವರ್ಷದ ಅವ ಧಿಯಲ್ಲಿ 6,500 ಶಿಕ್ಷಕರು ಸೇರಿದಂತೆ 15 ಸಾವಿರ ಖಾಲಿ ಹುದ್ದೆ ತುಂಬಲಾಗುವುದು. ನಂತರ ಎರಡು ವರ್ಷದ ಅವ ಧಿಯಲ್ಲಿ 25 ಸಾವಿರ ಹುದ್ದೆ ತುಂಬಲಾಗುವುದು ಎಂದರು.
ನಮ್ಮ ಸರ್ಕಾರದ ಅವಧಿ ಮುಗಿಯುವುದರೊಳಗೆ 50 ಸಾವಿರ ಖಾಲಿ ಹುದ್ದೆ ತುಂಬುವುದಾಗಿ ಹಾಗೂ ವಾರ್ಷಿಕ 5000 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹಿರಿಯ ನಾಯಕರಾದ ಖರ್ಗೆ ಹಾಗೂ ಸಿಎಂ ಭರವಸೆ ನೀಡಿದ್ದು ಅದಕ್ಕೆ ಬದ್ಧವಾಗಿದ್ದೇವೆ. ಬಿಜೆಪಿಯವರನ್ನು ಜನರು ತಿರಸ್ಕಾರ ಮಾಡಿದ್ದಾರೆ. ಅವರು ಸಕಾರಾತ್ಮಕ ರಾಜಕೀಯ ಮಾಡದೇ ಜನರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಮತ್ತು ಸತ್ಯಕ್ಕೆ ಸಂಬಂಧವೇ ಇಲ್ಲ ಎಂದರು.
ಎಂಎಲ್‌ಸಿ ಜಗದೇವ ಗುತ್ತೇದಾರ, ಜಿಡಿಎ ಅಧ್ಯಕ್ಷ ಮಜರ್ ಆಲಂಖಾನ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಕಮಿಷನರ್ ಡಾ| ಶರಣಪ್ಪ ಸೇರಿದಂತೆ ಇತರರಿದ್ದರು.
ಮುಂದಿನ ಎರಡು ವರ್ಷದಲ್ಲಿ ಕಲ್ಯಾಣ ಪಥ ಯೋಜನೆಯಡಿ ನಮ್ಮ ಭಾಗದ ರಸ್ತೆಗಳ ರಿಪೇರಿ ಹಾಗೂ ಉನ್ನತೀಕರಣ ಮಾಡಲಾಗುವುದು. ಕಲಬುರಗಿ ಹಾಗೂ ಬೀದರ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಬಗ್ಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ನಮ್ಮ ಭಾಗದ ಅಭಿವೃದ್ಧಿ ವಿಚಾರದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ.
-ಪ್ರಿಯಾಂಕ್ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.